Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಆಡಳಿತ ವಿರುದ್ಧ ತಿರುಗಿಬಿದ್ದ ಇಬ್ಬರು ಕಾಂಗ್ರೆಸ್‌ ಶಾಸಕರು

by admin June 23, 2025
written by admin June 23, 2025 0 comments 1 minutes read
0FacebookTwitterPinterestEmail
116

ಬೆಂಗಳೂರು:ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಬಾಂಬ್ ಸಿಡಿಸಿದ್ದಾರೆ.

ಹಣ ನೀಡದೆ ಸರ್ಕಾರದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಆಡಳಿತದ ವಿರುದ್ಧ ಕಿಡಿಕಾರಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹ

ಮತ್ತೊಂದೆಡೆ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಸತಿ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ಕೇಳಿದ್ದಾರೆ.

ಬಿ.ಆರ್.ಪಾಟೀಲ್ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು, ಸಚಿವರು ಒಬ್ಬೊಬ್ಬರೇ ಆಡಳಿತ ವೈಫಲ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜುಕಾಗೆ, ಪಕ್ಷದ ಹಿರಿಯ ಶಾಶಕ ಬಿ.ಆರ್.ಪಾಟೀಲ್ ಹೇಳಿಕೆಯನ್ನು ಸಂಪೂರ್ಣ ಸಮರ್ಥಿಸಿ, ತಾವು ಒಂದು ಹೆಜ್ಜೆ ಮುಂದೆ ಹೋಗಿ ನನ್ನ ಎಲ್ಲಾ ಪದವಿಗಳಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಅಧಿಕಾರಿಗಳು ಮಾತು ಕೇಳುತ್ತಿಲ್ಲ

ಬಿ.ಆರ್.ಪಾಟೀಲ್ ಹೇಳಿದ್ದಾರಲ್ಲ, ಅದಕ್ಕಿಂತ ಅದರಪ್ಪನ ಸ್ಥಿತಿ ನನ್ನದಾಗಿದೆ, ನಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಇಲ್ಲ, ಅಧಿಕಾರಿಗಳು ಮಾತು ಕೇಳುತ್ತಿಲ್ಲ.

ಮುಖ್ಯಮಂತ್ರಿ ಅವರು ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಪತ್ರವೊಂದೇ ಅಭಿವೃದ್ಧಿ ಆಗಿರುವುದು.

ಬಿಡುಗಡೆ ಆಗಿರುವ ಹಣಕ್ಕೆ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸುತ್ತಿಲ್ಲ, ಅವರು ನಮ್ಮ ಮಾತು ಕೇಳುತ್ತಿಲ್ಲ, ಒಟ್ಟಾರೆ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ.

ರಾಜೀನಾಮೆ ನೀಡುವ ಸ್ಥಿತಿ

ಇದರಿಂದ ನನ್ನ ಮನಸ್ಸಿಗೆ ಘಾಸಿಯಾಗಿದ್ದು ಕ್ಷೇತ್ರದ ಜನರಿಗೆ ಮುಖ ಕೊಟ್ಟು ಮಾತನಾಡಲಾಗದೆ ರಾಜೀನಾಮೆ ನೀಡುವ ಸ್ಥಿತಿ ಎದುರಾಗಿದೆ.

ಎರಡು ವರ್ಷ ಕಳೆದರೂ ಕಾಮಗಾರಿಗಳಿಗೆ ಕೆಲಸದ ಆದೇಶಗಳು ನೀಡುತ್ತಿಲ್ಲ ಎಂದರೆ ಏನರ್ಥ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸದಿಂದ ಹಿಂತಿರುಗುತ್ತಿದ್ದಂತೆ ಅವರನ್ನು ಭೇಟಿ ಮಾಡಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ, ವಿಧಾನಸಭಾ ಅಧ್ಯಕ್ಷರನ್ನು ಭೇಟಿ ಮಾಡಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್‌ನಿಂದ ವಿಧಾನಸಭೆಗೆ

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರ ಪ್ರತಿನಿಧಿಸುವ ರಾಜುಕಾಗೆ ಮೂಲತಃ ಜನತಾ ಪರಿವಾರದವರು, ದಿವಂಗತ ಉಮೇಶ್ ಕತ್ತಿ ಆಪ್ತರಾಗಿದ್ದ ಅವರು ಬಿಜೆಪಿ ಸೇರಿ ನಂತರ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ವಸತಿ ಸಚಿವರ ಮೇಲೆ ಗಂಭೀರ ಆರೋಪ ಬಂದಿದೆ, ಆರೋಪ ಮಾಡಿರುವುದು ಅನ್ಯರಲ್ಲ, ನಮ್ಮ ಪಕ್ಷದ ಹಿರಿಯರೊಬ್ಬರು, ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ.

ಆರೋಪದಿಂದ ಮುಕ್ತಗೊಂಡು ಮಂತ್ರಿಯಾಗಲಿ, ಈ ಹಿಂದೆ ರಾಜ್ಯದಲ್ಲಿ ಇಂತಹ ಹಲವಷ್ಟು ಘಟನೆಗಳು ನಡೆದಿವೆ ಎಂದರು.

ತೀವ್ರ ಅಸಮಾಧಾನ

ಸಚಿವರಾದ ಕೃಷ್ಣಬೈರೇಗೌಡ, ಎಚ್.ಕೆ.ಪಾಟೀಲ್, ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಆಡಳಿತಶಾಹಿ ವಿರುದ್ಧ ಗುಡುಗಿದ ಬೆನ್ನಲ್ಲೇ ಶಾಸಕ ರಾಜುಕಾಗೆ ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆಗೆ ಮುಂದಾಗಿದ್ದಾರೆ.

ಆಡಳಿತ ವ್ಯವಸ್ಥೆ ಬಗ್ಗೆ ತಮ್ಮ ಆಪ್ತ ಬಳಗವೇ ತಿರುಗಿಬಿದ್ದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ತುಟಿ ಬಿಚ್ಚದೆ ಮೌನ ವಹಿಸಿರುವುದು ಕಾಂಗ್ರೆಸ್ ನಾಯಕರಲ್ಲಿ ಗೊಂದಲಕ್ಕೆ ಎಡೆ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahmla rajukage and beluru gopalakrishnarebel
0 FacebookTwitterPinterestEmail
admin

previous post
ಭಿನ್ನಮತ ಬಿಡಿ: ನಾಯಕರಿಗೆ ಅಮಿತ್ ಷಾ ಕಿವಿಮಾತು
next post
ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ