Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಖರ್ಗೆ ಸಂದೇಶ ಸಿದ್ದರಾಮಯ್ಯ ಆಪ್ತ ಸಚಿವರಿಗೆ ಶಾಕ್ !

by KM Shivaraju June 30, 2025
written by KM Shivaraju June 30, 2025 0 comments 1 minutes read
0FacebookTwitterPinterestEmail
166

ಬೆಂಗಳೂರು:ಅಕ್ಟೋಬರ್-ನವೆಂಬರ್ ವೇಳೆಗೆ ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಸೂಚನೆ, ಮುಖ್ಯಮಂತ್ರಿ ಅವರ ಆಪ್ತ ಕೂಟದಲ್ಲಿ ತಲ್ಲಣ ಉಂಟು ಮಾಡಿದೆ.

ಕಳೆದ ನಾಲ್ಕೈದು ದಶಕಗಳಿಂದ ರಾಜ್ಯದಲ್ಲಿ ಎಲ್ಲಾ ಹಂತದ ಅಧಿಕಾರ ಸವಿದಿದ್ದೀರಿ, ಪಕ್ಷ ಸಂಘಟನೆ ಹಾಗೂ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ನಿಮ್ಮ ಸೇವೆಯ ಅಗತ್ಯವಿದೆ ಬಂದುಬಿಡಿ ಎಂದು ಸೌಮ್ಯವಾಗಿ ಒಂದೇ ಮಾತಿನಲ್ಲಿ ರಾಹುಲ್ ಗಾಂಧಿ ಅವರ ಸಂದೇಶವನ್ನು ಸಿದ್ದರಾಮಯ್ಯ ಅವರಿಗೆ ಖರ್ಗೆ ತಲುಪಿಸಿದ್ದಾರೆ.

ರಾಷ್ಟ್ರ ರಾಜಕಾರಣಕ್ಕೆ ಬನ್ನಿ

ಆಪ್ತ ಸಚಿವರ ಜೊತೆಗೂಡಿ ಕಳೆದ ವಾರ ದೆಹಲಿಗೆ ತೆರಳಿದ ಸಂದರ್ಭದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ವೇಳೆ, ಎರಡೇ ಸಾಲಿನಲ್ಲಿ ಪರೋಕ್ಷವಾಗಿ ಅಧಿಕಾರ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದಿದ್ದಾರೆ.

ಈ ಎರಡು ಸಾಲಿನ ಸಂದೇಶದ ನಂತರ ಖರ್ಗೆ, ಶಾಸಕರ ಧ್ವನಿಗೆ ಸ್ಪಂದಿಸಿ ತಕ್ಷಣವೇ ಬೇಡಿಕೆಗಳನ್ನು ಈಡೇರಿಸಿ ಎಂದಷ್ಟೇ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷರ ಸಂದೇಶ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ತಲುಪಿತು.

ಅಷ್ಟೇ ಅಲ್ಲದೆ, ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿರುವ ಎಐಸಿಸಿ ಅಧ್ಯಕ್ಷರು, ನಿನ್ನೆ ರಾತ್ರಿ ಉಪಮುಖ್ಯಮಂತ್ರಿ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಮಾಲೋಚನೆ ಮಾಡಿದರು.

ಶಿವಕುಮಾರ್‌ಗೆ ಎಲ್ಲಿಲ್ಲದ ಉತ್ಸಾಹ

ಅಧ್ಯಕ್ಷರ ಭೇಟಿ ನಂತರ ಹೊರಬಂದ ಶಿವಕುಮಾರ್ ಅವರಲ್ಲಿ ಎಲ್ಲಿಲ್ಲದ ಉತ್ಸಾಹ ಕಂಡುಬಂದಿತು.

ಖರ್ಗೆ ಅವರ ಹೇಳಿಕೆ ಮುಖ್ಯಮಂತ್ರಿ ಜೊತೆಗೆ ದೆಹಲಿಗೆ ತೆರಳಿದ್ದ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರುಗಳಿಗೆ ದೊಡ್ಡ ಶಾಕ್ ನೀಡಿದೆ.

ಇವರುಗಳು ದೆಹಲಿಗೆ ತೆರಳಿದ ಉದ್ದೇಶವೇ ಬೇರೆ ಆಗಿತ್ತು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಜೊತೆಗೆ ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಸಿ ಎಂದು ಪಕ್ಷದ ವರಿಷ್ಠರಿಗೆ ಮನವಿ ಮಾಡಿಕೊಳ್ಳಲು ನಿಷ್ಠಾವಂತ ಸಚಿವರು ಖರ್ಗೆ ಭೇಟಿ ಮಾಡಿದ್ದರು.

ಕಾಂಗ್ರೆಸ್ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರ
ಮಾತೇ ಹೊರಡದಂತಾಯಿತು

ಇದೆಲ್ಲವನ್ನು ಮೊದಲೇ ಅರಿತಿದ್ದ ಅನುಭವಿ ರಾಜಕಾರಣಿ ಖರ್ಗೆ, ಒಂದೇ ಮಾತಿನಲ್ಲಿ ಸಂದೇಶ ನೀಡುತ್ತಿದ್ದಂತೆ ಸಚಿವರುಗಳಿಗೆ ಬೇರೇ ಮಾತೇ ಹೊರಡದಂತೆ ಆಯಿತು.

ಖರ್ಗೆ ಅವರ ಹೇಳಿಕೆ ನಂತರ ನಗರಕ್ಕೆ ಹಿಂತಿರುಗಿದ ಸಚಿವರಾದ ಸತೀಶ್ ಜಾರಕಿಹೊಳಿ ಜೊತೆ ಕೆ.ಎನ್.ರಾಜಣ್ಣ ಸಹಾ ಸೆಪ್ಟೆಂಬರ್‌ಗೆ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ನಡೆಯಲಿದೆ ಎಂದಿದ್ದರು.

ಸರ್ಕಾರದಲ್ಲಿ ದೊಡ್ಡ ಬದಲಾವಣೆ

ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಜಾರಕಿಹೊಳಿ, ಸರ್ಕಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳುವ ಮೂಲಕ ಅನುಮಾನಾಸ್ಪದ ಸಂದೇಶ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿತು.

ದೆಹಲಿಯಿಂದ ಮುಖ್ಯಮಂತ್ರಿ ಹಿಂದಿರುಗುತ್ತಿದ್ದಂತೆ, ಕಾಂಗ್ರೆಸ್ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ರೂ. ಬಿಡುಗಡೆ ಮಾಡಿದರೆ, ಮತ್ತೊಂದೆಡೆ, ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕರ್ನಾಟಕಕ್ಕೆ ಆಗಮಿಸಿ, ಶಾಸಕರ ಮನದಾಳದ ಮಾತುಗಳನ್ನು ಆಲಿಸುತ್ತಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargecm siddaramaiahcongres high commanddcm d k shivakumar
0 FacebookTwitterPinterestEmail
KM Shivaraju

previous post
ಕಾಂಗ್ರೆಸ್ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರ
next post
ಕಾಲ್ತುಳಿತ ದುರಂತ: ರಾಜ್ಯ ಸರ್ಕಾರಕ್ಕೆ ಸಿಎಟಿ ಚಾಟಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ