Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಿವಕುಮಾರ್ ಮುಖ್ಯಮಂತ್ರಿ ಗಾದಿ ಹಾದಿ ಸುಗಮ !

by KM Shivaraju July 5, 2025
written by KM Shivaraju July 5, 2025 0 comments 2 minutes read
1FacebookTwitterPinterestEmail
246

ಬೆಂಗಳೂರು:ರಾಷ್ಟ್ರಾದ್ಯಂತ ಹಿಂದುಳಿದ ಸಮುದಾಯಗಳನ್ನು ಪಕ್ಷಕ್ಕೆ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸಿದ್ದರಾಮಯ್ಯ ಅವರಿಗೆ ರಾಷ್ಟ್ರಮಟ್ಟದಲ್ಲಿ ಅಧಿಕಾರ ದೊರಕಿಸಿಕೊಡುವ ಮೂಲಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ದಿನಗಳಲ್ಲಿ ರಾಜ್ಯ ನಾಯಕತ್ವ ವಹಿಸಿಕೊಳ್ಳಲು ಎಐಸಿಸಿ ದಾರಿ ಸುಗಮಗೊಳಿಸಿದೆ.

ರಾಷ್ಟ್ರಮಟ್ಟದ ಸೇವೆಗೆ ಆಹ್ವಾನ

ಮುಖ್ಯಮಂತ್ರಿ ಮತ್ತು ಅವರ ಆಪ್ತ ಸಚಿವರು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರಮಟ್ಟದ ಸೇವೆಗೆ ಬನ್ನಿ ಎಂದು ಆಹ್ವಾನ ನೀಡಿದ್ದರು.

ಅಷ್ಟೇ ಅಲ್ಲ, ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ನೀವು ದೆಹಲಿ ರಾಜಕಾರಣಕ್ಕೆ ಪ್ರವೇಶ ಮಾಡಿ ಎಂದ ಬೆನ್ನಲ್ಲೇ ಅವರಿಗೆ ಎಐಸಿಸಿ ಮಟ್ಟದ ಉನ್ನತ ಹುದ್ದೆ ದೊರಕಿಸಿಕೊಟ್ಟಿದ್ದಾರೆ.

ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಅಧ್ಯಕ್ಷರಾದರೆ ಉಳಿದ 23 ಮಂದಿ ಸದಸ್ಯರುಗಳಿದ್ದು, ಅದರಲ್ಲಿ ಕೇಂದ್ರದ ಮಾಜಿ ಸಚಿವರುಗಳು, ನಾಲ್ವರು ಮಾಜಿ ಮುಖ್ಯಮಂತ್ರಿಗಳು, ಎಐಸಿಸಿ ಮಟ್ಟದಲ್ಲಿ ಪ್ರಧಾನಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದವರು ಹಾಗೂ ಉತ್ತರ ಭಾರತದ ವರ್ಚಸ್ವಿ ಮುಖಂಡರಿದ್ದಾರೆ.

ವಿಧಾನಸಭಾ ಚುನಾವಣೆ

ಬಿಹಾರ ಸೇರಿದಂತೆ ಈ ವರ್ಷ ಎದುರಾಗಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಈ ಸಲಹಾ ಮಂಡಳಿ ರಚಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದರೆ, ಸಿದ್ದರಾಮಯ್ಯ ವರ್ಚಸ್ಸು ಬಳಸಿಕೊಂಡು ದೇಶಾದ್ಯಂತ ಹಿಂದುಳಿದ ಸಮುದಾಯದ ಮತಗಳನ್ನು ಸೆಳೆಯಲು ರಾಹುಲ್ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಂಚೂಣಿಗೆ ಬಂದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು ಎಐಸಿಸಿ ನಾಯಕರಿಗೆ ದೊಡ್ಡ ತಲೆ ನೋವಾಗಿತ್ತು.

ಒಂದೇ ಕಲ್ಲಿಗೆ ಎರಡು ಹಣ್ಣು

ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಜೊತೆಯಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಸರ್ಕಾರ ಉಳಿಸಿಕೊಳ್ಳಲು ಒಂದೇ ಕಲ್ಲಿಗೆ ಎರಡು ಹಣ್ಣು ಉದುರಿಸಿದ್ದಾರೆ.

ಎಐಸಿಸಿ ಆದೇಶದಂತೆ ಸಿದ್ದರಾಮಯ್ಯ ಸಲಹಾ ಮಂಡಳಿ ನಾಯಕತ್ವ ವಹಿಸಿಕೊಂಡಿರುವುದಲ್ಲದೆ, ಮೊದಲ ಸಭೆಯನ್ನೂ ಕರೆದಿದ್ದಾರೆ.

ಸಿದ್ದರಾಮಯ್ಯ ಅವರೇ ಸ್ವತಃ ಮಂಡಳಿಯ ಇತರ ಸದಸ್ಯರಿಗೆ ಖುದ್ದು ಪತ್ರ ಬರೆದು ಆಹ್ವಾನ ನೀಡಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿ ಆವರಣದಲ್ಲಿನ ಭಾರತ್ ಜೋಡೊ ಭವನದಲ್ಲಿ ಜುಲೈ 15ರಂದು ಸಭೆ ನಡೆಯಲಿದೆ.

ಅಮೆರಿಕದ ಸ್ಯಾನ್ಹೋಸೆಯಲ್ಲಿ ಒಕ್ಕಲಿಗರ ಸಮ್ಮೇಳನ
ರಾಷ್ಟ್ರೀಯ ಸಲಹಾ ಮಂಡಳಿ

ಎಐಸಿಸಿ ರಚಿಸಿರುವ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ನೇತೃತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದಾಗಿದ್ದು, ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಾ.ಎಂ.ವೀರಪ್ಪ ಮೊಯಿಲಿ, ಅಶೋಕ್ ಗೆಹ್ಲೋಟ್, ಭೂಪೇಶ್ ಬಘೇಲ್, ಸಂಚಾಲಕ ಡಾ.ಅನಿಲ್ ಜೈಹಿಂದ್, ಕಾರ್ಯದರ್ಶಿ ಜಿತೇಂದರ್ ಬಘೇಲ್ ಹಾಗೂ ಸದಸ್ಯರಾಗಿ ಬಿ.ಕೆ.ಹರಿಪ್ರಸಾದ್, ವಿ.ನಾರಾಯಣಸ್ವಾಮಿ, ಸಚಿನ್ ಪೈಲಟ್, ಗುರುದೀಪ್ ಸಿಂಗ್ ಸಪ್ಪಲ್, ಅರುಣ್ ಯಾದವ್, ವಿಜಯ್ ನಾಮ್‌ದೇವ್‌ರಾವ್ ವಡೆಟ್ಟಿವಾರ್, ವಿ.ಹನುಮಂತರಾವ್, ಅಮಿತ್ ಚಾವ್ಡಾ, ಬಿ. ಮಹೇಶ್‌ಕುಮಾರ್ ಗೌಡ್, ಪೊನ್ನಮ್ ಪ್ರಭಾಕರ್, ಎಸ್. ಜೋತಿಮಣಿ (ಸಂಸದೆ), ಶ್ರೀಕಾಂತ್ ಜೇನಾ, ಕಮಲೇಶ್ವರ್ ಪಟೇಲ್, ಅಜಯ್ ಕುಮಾರ್ ಲಲ್ಲು, ಸುಭಾಷಿಣಿ ಯಾದವ್, ಅಡೂರು ಪ್ರಕಾಶ್ (ಸಂಸದ), ಧನೇಂದ್ರ ಸಾಹು, ಹೀನಾ ಕಾವ್ರೆ ಇರುತ್ತಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc obc meetingaicc president mallikarjuna khargecm siddaramaiahcongres high commandRahul Gandhi
1 FacebookTwitterPinterestEmail
KM Shivaraju

previous post
ಅಮೆರಿಕದ ಸ್ಯಾನ್ಹೋಸೆಯಲ್ಲಿ ಒಕ್ಕಲಿಗರ ಸಮ್ಮೇಳನ
next post
ರಾಹುಲ್ ಭೇಟಿಗೆ ಸಿದ್ದರಾಮಯ್ಯ, ಶಿವಕುಮಾರ್ ದೆಹಲಿಗೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ