Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸುರ್ಜೇವಾಲ ವಿರುದ್ಧ ಸಿದ್ದರಾಮಯ್ಯ ಆಪ್ತರ ಸಿಟ್ಟು

by KM Shivaraju July 8, 2025
written by KM Shivaraju July 8, 2025 0 comments 1 minutes read
0FacebookTwitterPinterestEmail
156

ಬೆಂಗಳೂರು:ಅಭಿವೃದ್ಧಿಗೆ ಹಣ ಬಿಡುಗಡೆ ಆಗಿಲ್ಲ ಎಂಬುದು ಸೇರಿದಂತೆ ಪಕ್ಷದ ಶಾಸಕರು ಮಾಡುತ್ತಿರುವ ಆರೋಪಗಳನ್ನು ಲಿಖಿತ ರೂಪದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪಡೆಯುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಚಿವರ ಸಿಟ್ಟು ನೆತ್ತಿಗೇರುವಂತೆ ಮಾಡಿದೆ.

ಪಕ್ಷ ಮತ್ತು ಸರ್ಕಾರದಲ್ಲಿ ಗೊಂದಲ ಉಂಟು ಮಾಡುವಂತಹ ಕಸರತ್ತು ಈಗ ಬೇಕಿತ್ತೆ, ಅವರು ಯಾವ ಕಾರಣಕ್ಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಲ್ಲ-ಸಲ್ಲದ ಪ್ರಶ್ನೆ

ಅಲ್ಪ ಸಮಯದಲ್ಲೇ ರಾಜ್ಯಕ್ಕೆ ಭೇಟಿ ನೀಡಿ, ಶಾಸಕರನ್ನು ಮುಖಾಮುಖಿ ಭೇಟಿ ಮಾಡಿ ಇಲ್ಲ-ಸಲ್ಲದ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದಿರುವುದಲ್ಲದೆ, ಲಿಖಿತ ರೂಪದಲ್ಲಿ ದೂರು ಪಡೆದು ಯಾವ ದಾಖಲೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದು ಕೇಳುತ್ತಿದ್ದಾರೆ.

ಕಳೆದ ಎರಡು ದಿನಗಳಿಂದ ಅನಾರೋಗ್ಯ ಕಾರಣ ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಸಚಿವರು ಮತ್ತು ಮುಖಂಡರು ಸುರ್ಜೇವಾಲ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಸಹಾ ಈ ಕಸರತ್ತಿನ ಹಿಂದಿನ ಮರ್ಮ ತಿಳಿಯದು ಎಂದಿದ್ದಾರೆ.

ಇಂತಹ ಕಸರತ್ತನ್ನು ಎಐಸಿಸಿ ಮಾಡಿಸುತ್ತಿದೆಯೇ ಅಥವಾ ಸುರ್ಜೇವಾಲ ಯಾರದೋ ಒತ್ತಡಕ್ಕೆ ಮಣಿದು ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆಯೇ ಎಂಬ ಮಾತುಗಳು ಕೇಳಿಬಂದಿವೆ.

ಸರ್ಕಾರಿ ಆಸ್ಪತ್ರೆ ಜನೌಷಧ ಕೇಂದ್ರ ಸ್ಥಗಿತಕ್ಕೆ ತಡೆಯಾಜ್ಞೆ
ಗ್ಯಾರಂಟಿಗಳು ಯಶಸ್ವಿ ಜಾರಿ

ಬಿಜೆಪಿ ದುರಾಡಳಿತದಿಂದ ನಾವು ಅಧಿಕಾರಕ್ಕೆ ಬಂದು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ, ಇಂತಹ ಸಂದರ್ಭದಲ್ಲೂ ಜನತೆಗೆ ನೀಡಿದ ಐದು ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಗೊಂಡಿವೆ.

ಈಗ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದ್ದು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವ ಕಾಲ ಬಂದಿದೆ, ಇದೆಲ್ಲಾ ಮಾಹಿತಿ ಇದ್ದರೂ ಸುರ್ಜೇವಾಲ ಇಂತಹ ಕಸರತ್ತು ಏಕೆ ನಡೆಸುತ್ತಿದ್ದಾರೆ ಎಂಬ ಯಕ್ಷ ಪ್ರಶ್ನೆ ಕಾಡಿದೆ.

ಅಭಿವೃದ್ಧಿಗೆ ಹಣ ನೀಡಿಲ್ಲ ಎಂಬುದನ್ನೇ ಮುಂದಿಟ್ಟುಕೊಂಡು ತಮ್ಮ ಮತ್ತು ಸರ್ಕಾರದ ವಿರುದ್ಧ ವರಿಷ್ಠರಿಗೆ ವರದಿ ನೀಡುವ ಉದ್ದೇಶ ಇವರದ್ದಾಗಿದೆಯೇ.

ಸರ್ಕಾರದ ಮಾಹಿತಿ ವರಿಷ್ಠರ ಮುಂದೆ

ಅವರು ಕಸರತ್ತು ನಡೆಸಲಿ, ಅದರಿಂದ ಏನೂ ಆಗದು, ನನ್ನ ದೆಹಲಿ ಭೇಟಿ ಸಂದರ್ಭದಲ್ಲಿ ಸರ್ಕಾರದ ಮಾಹಿತಿಯನ್ನು ವರಿಷ್ಠರ ಮುಂದಿಡುತ್ತೇನೆ ಎಂದಿದ್ದಾರೆ.

ಈ ಮಧ್ಯೆ ಪಕ್ಷದ 95 ಶಾಸಕರ ಅಭಿಪ್ರಾಯ ಸಂಗ್ರಹ ಪೂರ್ಣಗೊಳಿಸಿರುವ ಸುರ್ಜೇವಾಲ, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಟಾನ ಹಾಗೂ ಅಭಿವೃದ್ಧಿ ಯೋಜನೆಗಳನ್ನು ನಮ್ಮ ಶಾಸಕರ ಮುಂದಿಟ್ಟು, ಉತ್ತರ ಪಡೆದಿದ್ದೇನೆ ಎಂದರು.

ಸಚಿವರ ಕಾರ್ಯವೈಖರಿ ವಿರುದ್ಧ ಗುರುತರ ಆರೋಪಗಳನ್ನು ಮಾಡಿದ್ದಾರೆ, ಅದೂ ಸೇರಿದಂತೆ ಇತರ ವಿಷಯ ಕುರಿತು ಲಿಖಿತವಾಗಿ ದೂರು ಪಡೆದುಕೊಂಡಿದ್ದೇನೆ ಎಂದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongresministersranadeep singh surjevala
0 FacebookTwitterPinterestEmail
KM Shivaraju

previous post
ಸರ್ಕಾರಿ ಆಸ್ಪತ್ರೆ ಜನೌಷಧ ಕೇಂದ್ರ ಸ್ಥಗಿತಕ್ಕೆ ತಡೆಯಾಜ್ಞೆ
next post
ಕುಮಾರಸ್ವಾಮಿ ದುಡ್ಡು ಕೊಡಿಸಲಿ ಖಾಲಿ ಮಾತು ಬೇಡ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ