Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ

by KM Shivaraju July 11, 2025
written by KM Shivaraju July 11, 2025 0 comments 2 minutes read
0FacebookTwitterPinterestEmail
128

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಖಾರವಾಗಿ ತಿಳಿಸಿದ್ದಾರೆ.

ದೆಹಲಿಯಿಂದ ಹಿಂತಿರುಗುತ್ತಿದ್ದಂತೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ, ಇದಕ್ಕೆಲ್ಲಾ ನಾನು ಏಕೆ ಪ್ರತಿಕ್ರಿಯಿಸಲಿ ಎಂದರು.

ನನಗಿಲ್ಲದ ಚಿಂತೆ ನಿಮಗೇಕೆ

ನನಗಿಲ್ಲದ ಚಿಂತೆ ನಿಮಗೇಕೆ, ನನ್ನ ಬಗ್ಗೆ ನೀವೇ ಗಾಬರಿ ಆದಂತಿದೆ, ಮುಖ್ಯಮಂತ್ರಿ ನೀಡಿರುವ ಹೇಳಿಕೆಗೆಲ್ಲಾ ನಾನು ಉತ್ತರಿಸುವ ಅಗತ್ಯವಿಲ್ಲ, ನಾನು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥನಾಗಿದ್ದೇನೆ.

ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬುದಾಗಿ ಅವರೇನೂ ಸ್ವಯಂ ಪ್ರೇರಿತರಾಗಿ ಹೇಳಿಲ್ಲ, ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗಷ್ಟೇ ಉತ್ತರಿಸಿದ್ದಾರೆ, ಅದನ್ನೇ ಮುಂದಿಟ್ಟುಕೊಂಡು ನನ್ನನ್ನು ಕೆದಕುವುದರಿಂದ ನಿಮಗೆ ಏನೂ ಸಿಗುವುದಿಲ್ಲ ಎಂದರು.

ಸಿದ್ದರಾಮಯ್ಯ ಈ ಹಿಂದೆ ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬುದಾಗಿ ಹೇಳಿದ್ದಾಗ, ನೀವು ನನ್ನ ಬಳಿ ಆಯ್ಕೆ ಇಲ್ಲ ಎಂದಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿ ಇದ್ದೀರಾ ಎಂಬ ಪ್ರಶ್ನೆಗೆ, ನಿಮಗೆ ನಮ್ಮ ವಿಚಾರದಲ್ಲಿ ಗಾಬರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ, ನಮಗೆ ದೆಹಲಿಯಲ್ಲಿ ದೇವಸ್ಥಾನವಿದೆ ಎಂದು ಮಾರ್ಮಿಕವಾಗಿ ತಿಳಿಸಿದರು.

ಪಕ್ಷ ಜವಾಬ್ದಾರಿ ನೀಡಿದೆ

ಪಕ್ಷ ನನಗೆ ಸಂಘಟನೆ ಹಾಗೂ ಉಪಮುಖ್ಯಮಂತ್ರಿ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ.

ನಾಯಕತ್ವ ಬದಲಾವಣೆ ವಿಚಾರವಾಗಿ ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ನಿಮ್ಮ ತಂತ್ರಗಳಿಗೆ ಬಲಿಯಾಗುವುದಿಲ್ಲ, ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ, ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ.

ಮಲ್ಲಿಕಾರ್ಜುನ ಖರ್ಗೆ ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಸಂತೋಷವಾಗಿ ಸ್ವೀಕರಿಸಿದ್ದೇವೆ, ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.

ಹೈಕಮಾಂಡ್ ಭೇಟಿಯಾಗಿಲ್ಲ

ಸುರ್ಜೇವಾಲ ಹೊರತಾಗಿ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ, ರಾಜ್ಯ ಉಸ್ತುವಾರಿಗಳ ಜೊತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ.

ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ, ಸಚಿವರ ಅಭಿಪ್ರಾಯ ಸಂಗ್ರಹಿಸಬೇಕಿದೆ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ.

ಈ ಪ್ರಕ್ರಿಯೆ ಈಗಾಗಲೇ ತಡವಾಗಿದೆ, ಈಗ ಅಂತಿಮ ಹಂತಕ್ಕೆ ಬಂದಿದೆ, ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಗೆ ಶ್ರಮಿಸಿದವರ ಹೆಸರನ್ನು ಸೇರಿಸಿ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು ಎಂದರು.

ಮುಖ್ಯಮಂತ್ರಿ ಆಸೆ ಇರುತ್ತದೆ

ಮುಖ್ಯಮಂತ್ರಿ ಆಗಬೇಕೆಂಬ ಆಸೆ ಅನೇಕರಿಗೆ ಇರುತ್ತದೆ, ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ, ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ಅದರ ಅವಶ್ಯಕತೆ ಇಲ್ಲ, ಸದ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ.

2028ರ ಚುನಾವಣೆಗೂ ನನ್ನದೇ ನಾಯಕತ್ವ ಎಂಬ ಸಿದ್ದರಾಮಯ್ಯ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ, ಅದನ್ನು ಹೇಳುವ ಸಂಪೂರ್ಣ ಅಧಿಕಾರ ಅವರಿಗಿದೆ, ಪಕ್ಷದ ಅಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುವುದು ನನ್ನ ಜವಾಬ್ದಾರಿ, ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಯುವುದು ನನ್ನ ಗುರಿ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ಈ ವಿಚಾರದ ಬಗ್ಗೆ ನೀವು ಅವರನ್ನೇ ಕೇಳಿ, ನಾನು ಪಕ್ಷದ ವಕ್ತಾರನೇ ಹೊರತು, ಬೇರೆ ಯಾವುದೇ ವ್ಯಕ್ತಿಯ ವಕ್ತಾರನಲ್ಲ, ಪಕ್ಷ ಇದ್ದರೆ ನಾನು, ಪಕ್ಷ ಇಲ್ಲವೆಂದರೆ ನಾನಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm postcongres high commanddcm d k shivakumar
0 FacebookTwitterPinterestEmail
KM Shivaraju

previous post
ಶಿವಕುಮಾರ್ ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ
next post
ಶಿವಕುಮಾರ್‌ಗೆ ಅಧಿಕಾರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ