Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮಾರ್ಚ್-ಏಪ್ರಿಲ್ ವೇಳೆಗೆ ಮಧ್ಯಂತರ ಚುನಾವಣೆ ?

by KM Shivaraju July 12, 2025
written by KM Shivaraju July 12, 2025 0 comments 1 minutes read
0FacebookTwitterPinterestEmail
236

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಂತರಿಕ ಬಿಕ್ಕಟ್ಟಿನಿಂದ ಪತನಗೊಳ್ಳಲಿದ್ದು ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗದಂತೆ ರಾಜ್ಯ ನಾಯಕರಿಗೆ ಬಿಜೆಪಿ ವರಿಷ್ಠರು ಸಂದೇಶ ನೀಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಒಳಜಗಳ ಮತ್ತಷ್ಟು ಉಲ್ಬಣಗೊಂಡು ಸರ್ಕಾರ ಪತನಗೊಳ್ಳುವ ಸ್ಥಿತಿಯೆಡೆಗೆ ಸಾಗುತ್ತಿದೆ.

ಅಧಿಕಾರ ಕಸಿದು ಶಿವಕುಮಾರ್‌ಗೆ

ಎಐಸಿಸಿ ಅಕ್ಟೋಬರ್-ನವೆಂಬರ್‌ನಲ್ಲಿ ಸಿದ್ದರಾಮಯ್ಯ ಅವರಿಂದ ಅಧಿಕಾರ ಕಸಿದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹಸ್ತಾಂತರಿಸಲಿದೆ.

ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರವನ್ನೂ ವಹಿಸಿಕೊಳ್ಳುತ್ತಾರೆ, ಆದರೆ, ಇದು ಹೆಚ್ಚು ದಿನ ಉಳಿಯುವುದಿಲ್ಲ.

ನಮಗೆ ಬಂದಿರುವ ಮಾಹಿತಿಯಂತೆ ಅಧಿಕಾರ ಹಸ್ತಾಂತರವಾದ ದಿನದಿಂದಲೇ ಸಿದ್ದರಾಮಯ್ಯ ಆಪ್ತ ಸಚಿವರು ಮತ್ತು ಶಾಸಕರು ಭಿನ್ನಮತಕ್ಕೆ ನಾಂದಿ ಹಾಡಲಿದ್ದಾರೆ.

ಕಾಂಗ್ರೆಸ್‌ನಿಂದ ಸಿಡಿಯಲಿರುವ ಗುಂಪು

ಇದು ಯಾವ ಸ್ವರೂಪಕ್ಕಾದರೂ ತಿರುಗಬಹುದು, ಅಂತಹ ಸನ್ನಿವೇಶದಲ್ಲಿ ಕಾಂಗ್ರೆಸ್‌ನಿಂದ ಸಿಡಿಯುವ ಯಾವುದೇ ಗುಂಪಿನೊಂದಿಗೆ ಕೈಜೋಡಿಸಿ ಸರ್ಕಾರ ರಚನೆ ಪ್ರಯತ್ನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ವರಿಷ್ಠರು, ಕರ್ನಾಟಕ ವಿಧಾನಸಭೆಗೆ 2026ರ ಮಾರ್ಚ್-ಏಪ್ರಿಲ್ ವೇಳೆಗೆ ಮಧ್ಯಂತರ ಚುನಾವಣೆ ಎದುರಾಗಬಹುದು, ಇದಕ್ಕಾಗಿ ಸಿದ್ಧರಾಗಿ ಎಂದಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಬೆಳವಣಿಗೆ ಬಗ್ಗೆ ವಿಜಯೇಂದ್ರ, ಅಶೋಕ್ ಅಲ್ಲದೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಅವರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ.

ಬಿಜೆಪಿ ವರಿಷ್ಠರ ಚಿಂತನೆ

ಕಳೆದ ಕೆಲವು ದಿನಗಳ ಹಿಂದೆ ವಿಜಯೇಂದ್ರ ಮತ್ತು ಅಶೋಕ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ವರಿಷ್ಠರು, ಆರು ದಿನ ಅಲ್ಲಿಯೇ ಉಳಿಸಿಕೊಂಡು, ಎಲ್ಲಾ ಮಗ್ಗುಲುಗಳಿಂದ ಮಾಹಿತಿ ಪಡೆದಿದ್ದಾರೆ.

ಇದಾದ ನಂತರ ಕುಮಾರಸ್ವಾಮಿ ಬಳಿಯೂ ಮಾಹಿತಿ ಪಡೆದಿದ್ದಾರೆ, ಈ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡರೆ ನಾವು ಯಾವುದೇ ಗುಂಪಿನೊಂದಿಗೆ ಸೇರಿ ಮೈತ್ರಿ ಆಡಳಿತ ನಡೆಸುವುದು ಬೇಡ.

ಸಿದ್ದರಾಮಯ್ಯ ಆಡಳಿತ ವೈಖರಿಗೆ ಅಧಿಕಾರಿಗಳು ತಿರುಗಿಬಿದ್ದಿರುವುದಲ್ಲದೆ, ಜನರೂ ಬೇಸರಗೊಂಡಿದ್ದಾರೆ.

ಮಧ್ಯಂತರ ಚುನಾವಣೆ

ಸರ್ಕಾರ ಪತನ ಸನ್ನಿವೇಶದಲ್ಲಿ ಮಧ್ಯಂತರ ಚುನಾವಣೆ ಎದುರಿಸಿದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಮಾಹಿತಿ ನೀಡಿದ್ದಾರೆ.

ಕುಮಾರಸ್ವಾಮಿ ಅನಿಸಿಕೆಗೆ ಬೊಮ್ಮಾಯಿ, ಶೋಭಾ ಅದೇ ದಾಟಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬೆಳವಣಿಗೆ ನಂತರ ಪ್ರಲ್ಹಾದ್ ಜೋಷಿ ಅವರನ್ನು ರಾಜ್ಯಕ್ಕೆ ಕಳುಹಿಸಿದ ವರಿಷ್ಠರು, ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಪರಿಹರಿಸುವ ಹೊಣೆಗಾರಿಕೆ ನೀಡಿದ್ದಾರೆ.

ಕಾಂಗ್ರೆಸ್ ಆಂತರಿಕ ಕಚ್ಚಾಟ

ಅವರು ಈ ದಿಸೆಯಲ್ಲಿ ಈಗಾಗಲೇ ಎರಡು ಸಭೆ ನಡೆಸಿದ್ದಾರೆ, ಕರ್ನಾಟಕದ ರಾಜಕೀಯ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಲ್ಲದೆ, ಕಾಂಗ್ರೆಸ್‌ನ ಆಂತರಿಕ ಕಚ್ಚಾಟದ ಪೂರ್ಣ ಚಿತ್ರಣ ಹೊರಬರುವವರೆಗೂ ರಾಜ್ಯ ಬಿಜೆಪಿ ನಾಯಕತ್ವ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದಿರಲು ತೀರ್ಮಾನಿಸಿದ್ದಾರೆ.

ಈ ಬೆಳವಣಿಗೆ ನಡುವೆ, ವಿಜಯೇಂದ್ರ ಅವರನ್ನು ವರಿಷ್ಠರು ಮತ್ತೆ ದೆಹಲಿಗೆ ಕರೆಸಿಕೊಂಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp observing political developmentcm siddaramaiahcongres govt.dcm d k shivakumar
0 FacebookTwitterPinterestEmail
KM Shivaraju

previous post
ಶಿವಕುಮಾರ್‌ಗೆ ಅಧಿಕಾರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ
next post
ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣಾ ರಣನೀತಿ ಸಭೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ