154
ಬೆಂಗಳೂರು:ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸುವಂತೆ ಮನವಿ ಸಲ್ಲಿಸಲು ಸಚಿವರ ದಂಡು ದೆಹಲಿ ಯಾತ್ರೆ ಕೈಗೊಂಡಿದೆ.
ವಿಧಾನಮಂಡಲದ ಮಳೆಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಿಯೋಗ ದೆಹಲಿಗೆ ತೆರಳಲಿದೆ.
ಅನಿವಾರ್ಯತೆ ವಿವರಣೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧಿನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಲು ಅನಿವಾರ್ಯತೆ ಏನೆಂಬ ಬಗ್ಗೆ ವಿವರಣೆ ನೀಡಲಿದ್ದಾರೆ.
ಜನ ನಾಯಕನಿಂದ ಅಧಿಕಾರ ಕಸಿದುಕೊಂಡರೆ ಮುಂದಾಗಬಹುದಾದ ಪರಿಣಾಮಗಳ ಬಗ್ಗೆಯೂ ವರಿಷ್ಠರಿಗೆ ಮಾಹಿತಿ ನೀಡಲು ಸಿದ್ದರಾಮಯ್ಯ ಆಪ್ತ ಸಚಿವರು ನಿರ್ಧರಿಸಿದ್ದಾರೆ.

