108
ಬೆಂಗಳೂರು:ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಲಂಕರಿಸಬಹುದಾದರೆ, ಬಾನು ಮುಸ್ತಾಕ್ ದಸರಾ ಮಹೋತ್ಸವ ಉದ್ಘಾಟಿಸುವುದರಲ್ಲಿ ತಪ್ಪೇನಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಇದೇ ಮಣ್ಣಿನಲ್ಲಿ ಹುಟ್ಟಿ ವಿವಿಧ ಚಳವಳಿಗಳಲ್ಲಿ ಭಾಗವಹಿಸಿ ಕನ್ನಡ ಸಾಹಿತ್ಯದಲ್ಲಿ ತೊಡಗಿಸಿಕೊಂಡವರು, ಎಲ್ಲದಕ್ಕೂ ಮಿಗಿಲಾಗಿ ಜಾತ್ಯತೀತ ಮನೋಭಾವದವರು.
ರಾಜ್ಯಕ್ಕೆ ಕೊಡುಗೆ
ತಮ್ಮ ಧರ್ಮದ ಜೊತೆ ಬೇರೆ ಧರ್ಮಗಳನ್ನು ಸಮನಾಗಿ ಕಾಣುತ್ತಾರೆ, ಅವರಿಗೆ ಬಂದಿರುವ ವಿಶ್ವಮಟ್ಟದ ಪ್ರಶಸ್ತಿ ಮತ್ತು ಅವರು ರಾಜ್ಯಕ್ಕೆ ನೀಡಿರುವ ಕೊಡುಗೆಗಳನ್ನು ಗಮನಿಸಿ ಸರ್ಕಾರ ಸರಿಯಾದ ತೀರ್ಮಾನ ಕೈಗೊಂಡಿದೆ ಎಂದು ಸಮರ್ಥಿಸಿಕೊಂಡರು.

