ಬೆಂಗಳೂರು:ನಾಡಹಬ್ಬ ದಸರಾ ಉದ್ಘಾಟನೆಗೆ ಮುಸ್ಲಿಂ ವ್ಯಕ್ತಿಯನ್ನು ಆಹ್ವಾನಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಮೂಲಕ ಲಜ್ಜೆಗೆಟ್ಟ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ.
ಹಣೆಯಲ್ಲಿ ಕುಂಕುಮ ಇಲ್ಲದವರು
ಹಣೆಯಲ್ಲಿ ಕುಂಕುಮ ಇಲ್ಲದಿದ್ದರೂ ಪರವಾಗಿಲ್ಲ, ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದಿದ್ದರೂ ಪರವಾಗಿಲ್ಲ, ಹಿಂದೂ ದೇವತೆಗಳ ಬಗ್ಗೆ ಶ್ರದ್ಧೆ ಇಲ್ಲದಿದ್ದರೂ ಪರವಾಗಿಲ್ಲ.
ಇಫ್ತಾರ್ ಕೂಟಕ್ಕೆ ಹೋಗುವವರು ಮಾತ್ರ ತಲೆಗೆ ಮುಸ್ಲಿಂ ಟೋಪಿ ಧರಿಸದಿದ್ದರೆ ಗಂಟಲಿನಲ್ಲಿ ಬಿರಿಯಾನಿ ಇಳಿಯುವುದಿಲ್ಲ, ಅಲ್ಲವೇ ಎಂದು ಮುಖ್ಯಮಂತ್ರಿ ಅವರನ್ನು ಅಶೋಕ್ ಛೇಡಿಸಿದ್ದಾರೆ.