Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಹೈಕಮಾಂಡ್ ಆದೇಶಕ್ಕೆ ತೆಪ್ಪಗಾದ ಶಿವಕುಮಾರ್ !

by KM Shivaraju September 20, 2025
written by KM Shivaraju September 20, 2025 0 comments 1 minutes read
0FacebookTwitterPinterestEmail
54

ಬೆಂಗಳೂರು:ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ್ ವರದಿ ಕಸದ ಬುಟ್ಟಿಗೆ ಸೇರಲು ಕಾರಣರಾಗಿದ್ದ ಎಐಸಿಸಿ ವರಿಷ್ಠರು, ಇದೀಗ ಸಂಪುಟ ಸಚಿವರ ವಿರೋಧದ ನಡುವೆಯೂ ಮಧುಸೂಧನ್ ನಾಯಕ್ ನೇತೃತ್ವದಲ್ಲಿ ಹೊಸದಾಗಿ ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಕ್ಕಲಿಗ ಹಾಗೂ ವೀರಶೈವ ಸಮುದಾಯದ ಸಚಿವರುಗಳು ಹೊಸ ಜಾತಿ ಗಣತಿಯ ಮಾರ್ಗಸೂಚಿಗಳನ್ನು ಸಚಿವ ಸಂಪುಟದಲ್ಲೇ ಖಂಡಿಸಿ ಸಮೀಕ್ಷೆ ತಡೆ ಹಿಡಿಯುವಂತೆ ಒತ್ತಡ ಹೇರಿದ್ದರು.

ಸಮೀಕ್ಷೆಗೆ ತೀವ್ರ ಆಕ್ಷೇಪ

ಶಿವಕುಮಾರ್‌ಗಿಂತ ಮುಖ್ಯಮಂತ್ರಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ ಸಮೀಕ್ಷೆ ಬಗ್ಗೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಸಿದ್ದರಾಮಯ್ಯ ಅವರನ್ನೇ ತರಾಟೆಗೆ ತೆಗೆದುಕೊಂಡಿದ್ದರು.

ಈ ಬೆಳವಣಿಗೆ ಮುಖ್ಯಮಂತ್ರಿ ಅವರಿಗೆ ಘಾಸಿ ಉಂಟು ಮಾಡುತ್ತಿದ್ದಂತೆ ಸಭೆ ನಂತರ ನಾವು-ನೀವು ಹಿಂದುಳಿದ ವರ್ಗದ ಆಯೋಗದ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದು ವಿಷಯಕ್ಕೆ ತೆರೆ ಎಳೆದಿದ್ದರು.

ಸಮೀಕ್ಷೆಗೆ ವಿರೋಧ ಮಾಡಿದ ಸಚಿವರುಗಳು ಆಯೋಗದ ಸದಸ್ಯರೊಂದಿಗೆ ಸಮಾಲೋಚನೆ ನಡೆಸುವ ಸಂದರ್ಭದಲ್ಲೇ ಮುಖ್ಯಮಂತ್ರಿ ಅವರು, ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಂಪರ್ಕಿಸಿ ಸಂಪುಟದಲ್ಲಿ ನಡೆದ ವಿದ್ಯಮಾನಗಳನ್ನು ಗಮನಕ್ಕೆ ತಂದರು.

ಹೊಸ ಸಮೀಕ್ಷೆಗೆ ವಿರೋಧ

ನಿಮ್ಮ ಸಲಹೆಯಂತೆ ಹೊಸ ಸಮೀಕ್ಷೆಗೆ ಸರ್ಕಾರ ಮುಂದಾಗಿದೆ, ಇದೀಗ, ಕಾಂತರಾಜ್ ವರದಿ ವಿರೋಧಿಸಿದವರೇ ನಾವು ಕೈಗೊಂಡಿರುವ ಜಾತಿ ಗಣತಿಯನ್ನೂ ವಿರೋಧ ಮಾಡುತ್ತಿದ್ದಾರೆ.

ಸಮೀಕ್ಷೆಯಿಂದ ಹಿಂದಕ್ಕೆ ಸರಿದರೆ ವೈಯಕ್ತಿಕವಾಗಿ ನನಗೆ ಮತ್ತು ಸರ್ಕಾರಕ್ಕೆ ಸಾರ್ವಜನಿಕವಾಗಿ ಕೆಟ್ಟ ಹೆಸರು ಬರುತ್ತದೆ.

ನೀವು ಹೇಳಿದ ಮಾನದಂಡಗಳನ್ನು ಇಟ್ಟುಕೊಂಡೇ ಜಾತಿ ಗಣತಿ ಕೈಗೆತ್ತಿಕೊಂಡಿದ್ದೇನೆ, ಸಮೀಕ್ಷೆ ಕಾರ್ಯ ಹತ್ತಿರವಾಗುತ್ತಿದ್ದಂತೆ, ಶಿವಕುಮಾರ್, ಎಂ.ಬಿ.ಪಾಟೀಲ್ ಸೇರಿದಂತೆ ಕೆಲವರು ಅಪಸ್ವರ ಎತ್ತಿದ್ದಾರೆ, ನೀವೇ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಿಕೊಂಡರು.

ವೈರತ್ವ ಬಿಟ್ಟು ವೇದಿಕೆ ಹಂಚಿಕೊಂಡ ಡಿಕೆಶಿ-ಎಚ್‌ಡಿಕೆ

ಗೊಂದಲ ಪರಿಹರಿಸಲು ಯತ್ನ

ಮುಖ್ಯಮಂತ್ರಿ ಮನವಿಗೆ ತಕ್ಷಣವೇ ಸ್ಪಂದಿಸಿದ ವೇಣುಗೋಪಾಲ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ನಗರಕ್ಕೆ ಕಳುಹಿಸಿ ಸಿದ್ದರಾಮಯ್ಯ ಮತ್ತು ಸಚಿವರುಗಳ ನಡುವೆ ಸಮೀಕ್ಷೆ ಕುರಿತ ಗೊಂದಲ ಪರಿಹರಿಸಲು ಮುಂದಾದರು.

ಸಮೀಕ್ಷೆಗೆ ವಿರೋಧಿಸಿದ ಸಚಿವರನ್ನು ಸಂಪರ್ಕಿಸಿದ ಸುರ್ಜೇವಾಲ, ತಾವು ತಂಗಿದ್ದ ಪಂಚತಾರಾ ಹೋಟೆಲ್‌ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಕರೆಸಿಕೊಂಡು, ಈ ಕುರಿತು ಮುಖಾಮುಖಿ ಚರ್ಚೆ ಮಾಡಿದರು.

ಇದು ವರಿಷ್ಠರ ಆದೇಶ

ಎಐಇಸಿ ಸಲಹೆ ಮೇಲೆ ಹೊಸ ಸಮೀಕ್ಷೆ ನಡೆಯುತ್ತಿದೆ, ಈಗ ವಿರೋಧ ಸರಿಯಲ್ಲ, ಪ್ರಕ್ರಿಯೆ ಪೂರ್ಣಗೊಳ್ಳಲಿ, ಅದರಲ್ಲೂ ಲೋಪಗಳಿದ್ದರೆ ಸರಿಪಡಿಸೋಣ, ಇದು ವರಿಷ್ಠರ ಆದೇಶ ಎಂದು ಶಿವಕುಮಾರ್‌ಗೆ ತಿಳಿಸಿದರು.

ಸುರ್ಜೇವಾಲ ಮಧ್ಯಪ್ರವೇಶದ ನಂತರ ಯಾವ ಸಚಿವರೂ ಅಪಸ್ವರ ಎತ್ತಲಿಲ್ಲ, ಮುಖ್ಯಮಂತ್ರಿ ಸಣ್ಣ-ಪುಟ್ಟ ಬದಲಾವಣೆಗೆ ಆಯೋಗಕ್ಕೆ ಸೂಚಿಸಿದ್ದಲ್ಲದೆ, ಸೆಪ್ಟೆಂಬರ್ 22 ರಿಂದ ಸಮೀಕ್ಷೆ ಆರಂಭಿಸಲು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censuscm siddaramaiahcongres high commanddcm d k shivakumarrandeep singh surjevala
0 FacebookTwitterPinterestEmail
KM Shivaraju

previous post
ಮತ್ತೆ ಲೋಪವಾದರೆ ಒಕ್ಕಲಿಗರು ಸುಮ್ಮನಿರುವುದಿಲ್ಲ
next post
ಎಒಎಮ್‌ಎಸ್‌ಐ ಪ್ರಧಾನಕಾರ್ಯದರ್ಶಿ ಡಾ.ಗಿರೀಶ್‌ಗೌಡ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ