Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಜಾತಿಗಣತಿ ಸಮೀಕ್ಷೆ ಅವಧಿ ವಿಸ್ತರಣೆಗೆ ನಿರ್ಧಾರ

by admin October 6, 2025
written by admin October 6, 2025 0 comments 1 minutes read
0FacebookTwitterPinterestEmail
99

ಬೆಂಗಳೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ (ಜಾತಿಗಣತಿ) ಕಾರ್ಯದ ಅವಧಿ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ.

ಸೆಪ್ಟೆಂಬರ್ 22ರಿಂದ ರಾಜ್ಯಾದ್ಯಂತ ಆರಂಭಗೊಂಡ ಜಾತಿಗಣತಿ ಕಾರ್ಯ ಅವಧಿ ಅಕ್ಟೋಬರ್ 7ಕ್ಕೆ ಕೊನೆಗೊಳ್ಳಲಿದ್ದು, ಇದುವರೆಗೆ ಕೇವಲ 63ರಷ್ಟು ಮಾತ್ರ ಸಮೀಕ್ಷೆ ಪೂರ್ಣಗೊಂಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಜಿಲ್ಲಾಡಳಿತಗಳಿಂದ ಮಾಹಿತಿ ಪಡೆದು ನಂತರ ಹಿಂದುಳಿದ ವರ್ಗಗಳ ಆಯೋಗದ ಜೊತೆ ಸಮಾಲೋಚಿಸಿ, ಎಷ್ಟು ದಿನಗಳ ವಿಸ್ತರಣೆ ಮಾಡಬೇಕೆಂಬ ಬಗ್ಗೆ ಪ್ರಕಟಿಸಲಿದ್ದಾರೆ.

ಕನಿಷ್ಟ 10 ದಿನಗಳ ಅಗತ್ಯ

ರಾಜಧಾನಿ ಬೆಂಗಳೂರಿನಲ್ಲಿ ಸಮೀಕ್ಷೆ ಕಾರ್ಯ ಅಕ್ಟೋಬರ್ 3ರಿಂದ ಆರಂಭಗೊಂಡಿದ್ದು, ಕಾರ್ಯ ಪೂರ್ಣಗೊಳಿಸಲು ಕನಿಷ್ಟ 10 ದಿನಗಳ ಅಗತ್ಯವಿದೆ.

ನಗರದಲ್ಲಿ ಸುಮಾರು ಒಂದೂವರೆ ಕೋಟಿ ಜನಸಂಖ್ಯೆಯಿಂದ ಮಾಹಿತಿ ಪಡೆಯಲು ಶಿಕ್ಷಣ ಇಲಾಖೆ ಅಲ್ಲದೆ, ವಿವಿಧ ಇಲಾಖಾ ಸಿಬ್ಬಂದಿಯನ್ನೂ ಬಳಕೆ ಮಾಡಿಕೊಳ್ಳಲಾಗಿದೆ.

ಬೆಂಗಳೂರು ಮಾದರಿಯಲ್ಲೇ ಉಳಿದ ನಗರ ಹಾಗೂ ಗ್ರಾಮೀಣ ಭಾಗದಲ್ಲೂ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ 15 ದಿನಗಳ ಕಾಲವಕಾಶ ಬೇಕಿದೆ ಎಂಬ ಮಾಹಿತಿಯನ್ನು ಆಯೋಗ ಸರ್ಕಾರಕ್ಕೆ ಕೇಳಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಸಾಯನಿಕ ಪಟಾಕಿ ಮಾರಿದರೆ ಲೈಸೆನ್ಸ್ ರದ್ದು
ವಿಡಿಯೊ ಸಂವಾದ

ಕಾಲಾವಧಿ ವಿಸ್ತರಣೆ ಮಾಡುವುದಿಲ್ಲ, ನಿಗದಿತ ಸಮಯದಲ್ಲಿ ಸಮೀಕ್ಷೆ ಪೂರ್ಣಗೊಳಿಸಬೇಕೆಂದು ಮುಖ್ಯಮಂತ್ರಿ ಜಿಲ್ಲಾಡಳಿತದೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಗಡುವು ನೀಡಿದ್ದರು.

ಗಡುವಿನ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಅವಧಿ ವಿಸ್ತರಿಸುವ ಬಗ್ಗೆ ನಾಳೆ ಸಂಜೆ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಅವರೇ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಶೇಕಡ 63ರಷ್ಟು ಸಮೀಕ್ಷೆ ಮುಗಿದಿದೆ, ಮಂಗಳವಾರ ಸಂಜೆ ವೇಳೆಗೆ ಎಷ್ಟು ಪ್ರಮಾಣದಲ್ಲಿ ಸಮೀಕ್ಷೆ ಆಗಲಿದೆ ಎಂಬುದನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಮೀಕ್ಷೆಗೆ ಬಿಜೆಪಿ ವಿರೋಧ

ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆಗೆ ಬಿಜೆಪಿ ಸೇರಿದಂತೆ ಕೆಲವರು ವಿರೋಧ ಮಾಡುತ್ತಿರುವುದಕ್ಕೆ ಕಿಡಿಕಾರಿದ ಮುಖ್ಯಮಂತ್ರಿ, ಸಮೀಕ್ಷೆ ಮಾಡದಿದ್ದರೆ ನಮಗೆ ಯಾವುದೇ ಅಂಕಿ-ಅಂಶ ಸಿಗುವುದಿಲ್ಲ.

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಜನರಿಗೆ ಉದ್ಯೋಗ, ಶಿಕ್ಷಣ ದೊರೆತಿದೆಯೇ ಎನ್ನುವುದನ್ನು ತಿಳಿಯುವುದು ಬೇಡವೇ, ಇದರ ಅಂಕಿ-ಅಂಶ ತಿಳಿಯಬೇಕೆಂದರೆ ಸರ್ಕಾರಕ್ಕೆ ಸಮೀಕ್ಷೆ ಅತ್ಯವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ
ಸಮಸಮಾಜ ನಿರ್ಮಾಣ

ನಾವು ಯಾವುದೇ ಜಾತಿಯನ್ನು ತುಳಿಯುವ ಪ್ರಶ್ನೆಯೇ ಇಲ್ಲ, ಸಮಸಮಾಜ ನಿರ್ಮಾಣ ಮಾಡುವುದಷ್ಟೇ ನಮ್ಮ ಗುರಿ, ಆದರೆ, ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ, ಎಲ್ಲಾ ಕುಟುಂಬಗಳ ಸಮೀಕ್ಷೆ ಮಾಡಲೇಬೇಕೆಂಬ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Backward Classes Commissioncaste censuscm siddaramaiahtime limit to be extended
0 FacebookTwitterPinterestEmail
admin

previous post
ರಾಸಾಯನಿಕ ಪಟಾಕಿ ಮಾರಿದರೆ ಲೈಸೆನ್ಸ್ ರದ್ದು
next post
ಅಭಿವೃದ್ಧಿಯ ನೀಲಿ ನಕಾಶೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ