Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಆಂತರಿಕ ವಿಚಾರ

by admin October 9, 2025
written by admin October 9, 2025 0 comments 2 minutes read
0FacebookTwitterPinterestEmail
75

ಬೆಂಗಳೂರು:ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಈ ಹಿಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕೇಂದ್ರಕ್ಕೆ ಪ್ರಸ್ತಾಪ ಹೋಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಶಿಫಾರಸಿಗೆ ಸಂಬಂಧಿಸಿದಂತೆ ಕೇಂದ್ರದಿಂದ ಕುರುಬ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸುವಂತೆ ಸೂಚಿಸಲಾಗಿತ್ತು, ಆಗ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಆದೇಶ ಮಾಡಿತ್ತು ಎಂದರು.

ಕುಲಶಾಸ್ತ್ರಿಯ ಅಧ್ಯಯನ

ನಂತರ ಬಿಜೆಪಿ ಆಡಳಿತಾವಧಿಯಲ್ಲಿ ಕುಲಶಾಸ್ತ್ರಿಯ ಅಧ್ಯಯನ ವರದಿ ಬಂದಿತು, ಅದನ್ನು ನಮ್ಮ ಸರ್ಕಾರ ಒಪ್ಪಿತ್ತು, ಆಗ ವಿಧಾನಸಭೆಗೆ ಚುನಾವಣೆ ನಡೆದು ನಮ್ಮ ಪಕ್ಷ ಸೋಲನುಭವಿಸಿತು.

ಅಧಿಕಾರಕ್ಕೆ ಬಂದ ಈಗಿನ ಕಾಂಗ್ರೆಸ್ ಸರ್ಕಾರ ಶಿಫಾರಸು ಪರಿಶೀಲಿಸಿ 2023ರ ಜುಲೈ 20ರಂದು ಕೇಂದ್ರ ಸರ್ಕಾರಕ್ಕೆ ಕಳುಹಿಸಿತು, ಬೇಕಿದ್ದರೆ ಸರ್ಕಾರದ ದಾಖಲೆಗಳನ್ನು ಸಿದ್ದರಾಮಯ್ಯ ತೆಗೆದು ನೋಡಲಿ, ಈಗ ಅವರ ಕೈಯಲ್ಲೇ ಅಧಿಕಾರ ಇದೆ, ಏನು ತೀರ್ಮಾನ ಕೈಗೊಳ್ಳುವರೋ ನೋಡೋಣ.

ಪರಿಶಿಷ್ಟ ಪಂಗಡ ಪಟ್ಟಿಗೆ ಕುರುಬ ಸಮುದಾಯ ಸೇರ್ಪಡೆಯಿಂದ ವಾಲ್ಮೀಕಿ ಮತ್ತು ಕುರುಬರ ನಡುವೆ ಸಮಸ್ಯೆ ಆಗದು, ಅಹಿಂದ ನಾಯಕರಾಗಿ ಸಿದ್ದರಾಮಯ್ಯ ಅವರೇ ಇದ್ದಾರಲ್ಲಾ, ಆದರೆ, ಮೀಸಲಾತಿ ಹೆಚ್ಚಳ ಮಾಡುವುದು ಅಷ್ಟು ಸುಲಭದ ವಿಷಯವಲ್ಲ ಎಂದರು.

ರೈತರಿಗೆ 2 ಪಟ್ಟು ಪರಿಹಾರ ನೀಡಿ

ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹ ಹಾನಿಗೆ ಸರ್ಕಾರ ರೈತರಿಗೆ ಕೂಡಲೇ ಎರಡು ಪಟ್ಟು ಪರಿಹಾರ ನೀಡಬೇಕು, ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ಪ್ರವಾಹದಿಂದ ಆದ ಹಾನಿಗೆ 63 ಹೊಸ ಗ್ರಾಮಗಳನ್ನೇ ಕಟ್ಟಿಸಿದರು, ಎರಡನೇ ಬಾರಿ ಪ್ರವಾಹದಿಂದಾದ ಹಾನಿಗೆ ಸುಮಾರು ಮೂರು ಲಕ್ಷ ಮನೆಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಿದ್ದೇವೆ.

ತಾವು ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರ ಸರ್ಕಾರ ನೀಡುವ ಪ್ರವಾಹ ಪರಿಹಾರ ಮೊತ್ತಕ್ಕೆ ಎರಡು ಪಟ್ಟು ಪರಿಹಾರ ನೀಡಿದ್ದೆವು, ಪ್ರತಿ ಎಕರೆಗೆ ಒಣ ಬೇಸಾಯಕ್ಕೆ 13 ಸಾವಿರ ರೂ., ನೀರಾವರಿಗೆ 18 ಸಾವಿರ ರೂ., ತೋಟಗಾರಿಕಾ ಬೆಳೆಗಳಿಗೆ 25 ಸಾವಿರ ರೂ. ನೀಡಿದ್ದೆವು, ಸುಮಾರು ಏಳು ಲಕ್ಷ ರೈತರು ಪರಿಹಾರ ಪಡೆದುಕೊಂಡಿದ್ದರು ಎಂದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆಯಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ, ಪೂರ್ಣ ಪ್ರಮಾಣದಲ್ಲಿ ಸರಿಯಾದ ಸಮೀಕ್ಷೆ ನಡೆಯುತ್ತಿಲ್ಲ, ಗಣತಿದಾರರು ಭೇಟಿ ನೀಡುವ ವೇಳೆ ಬಹಳಷ್ಟು ಜನ ಮನೆಯಲ್ಲಿ ಇರುವುದಿಲ್ಲ, ಗಣತಿಗೆ ಸಹಕಾರವನ್ನೂ ನೀಡುತ್ತಿಲ್ಲ, ಈ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಯಾವುದೇ ಮಹತ್ವ ಉಳಿದಿಲ್ಲ ಎಂದರು.

ಕೇಂದ್ರದಿಂದ ಹೆಚ್ಚು ಅನುದಾನ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯವಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಸರಿಯಲ್ಲ, 15ನೇ ಹಣಕಾಸು ಆಯೋಗದ ಶಿಫಾರಸು ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ, ಇದು 14ನೇ ಹಣಕಾಸು ಆಯೋಗಕ್ಕಿಂತ ಒಂದು ಲಕ್ಷ ಕೋಟಿ ರೂ. ಹೆಚ್ಚು ನೀಡಿದೆ.

ಯುಪಿಎ ಆಡಳಿತಾವಧಿಯಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಐದು ವರ್ಷದಲ್ಲಿ ಒಟ್ಟು 7,000 ಕೋಟಿ ರೂ. ನೀಡಲಾಗಿತ್ತು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪ್ರತಿ ವರ್ಷ 7,000 ಕೋಟಿ ರೂ. ನೀಡುತ್ತಿದೆ, 6,000 ಕಿ.ಮೀ. ಹೆದ್ದಾರಿ ನಿರ್ಮಾಣವಾಗುತ್ತಿದೆ, ಕೇಂದ್ರದ ಅನುದಾನದಿಂದಲೇ ರಾಜ್ಯದಲ್ಲಿ ಯೋಜನೆಗಳು ನಡೆಯುತ್ತಿವೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಬಳಿ ಹಣವೇ ಇಲ್ಲ ಎಂದರು.

ಕಾಂಗ್ರೆಸ್‌ನಲ್ಲಿ ಕ್ರಾಂತಿ ಆಗುತ್ತೋ ಬಿಡುತ್ತೋ

ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಆಗುತ್ತೋ ಬಿಡುತ್ತೋ ಅದು ಆ ಪಕ್ಷದ ಆಂತರಿಕ ವಿಚಾರ, ಆದರೆ, ಆಡಳಿತ ಕಡೆಗಣಿಸಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದರೆ, ಕೆಲವರು ಮುಂದುವರೆಯುವುದಿಲ್ಲ ಎನ್ನುತ್ತಾರೆ, ಆಡಳಿತ ಶಾಸಕರು ಮತ್ತು ಮಂತ್ರಿಗಳ ನಡುವೆ ಸಾಕಷ್ಟು ಗೊಂದಲ ಇದೆ.

ಅಶಿಸ್ತಿಗೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರೂ ಶಾಸಕರು ಸುಮ್ಮನಾಗುತ್ತಿಲ್ಲ, ಆ ಪಕ್ಷದ ಹೈಕಮಾಂಡ್‌ಗೆ ಸ್ಪಷ್ಟತೆ ಇಲ್ಲ, ಸಿದ್ದರಾಮಯ್ಯ ಹಿನ್ನೆಲೆ, ಇಮೇಜ್ ಕುರಿತು ಯೋಚನೆ ಮಾಡುತ್ತಿದ್ದಾರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಾ ಪಕ್ಷ ಕಟ್ಟಿದ್ದು, ಅವರ ಬಗ್ಗೆಯೂ ಯೋಚಿಸಿ ಯಾವುದೇ ನಿರ್ಧಾರಕ್ಕೆ ಬರಲು ಆಗುತ್ತಿಲ್ಲ, ಕ್ರಾಂತಿ ನವೆಂಬರ್‌ನಲ್ಲಿ ಆಗುತ್ತದೋ ಡಿಸೆಂಬರ್‌ನಲ್ಲಿ ಆಗುತ್ತದೋ ಕಾದುನೋಡಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
basavaraja bommaikurubas to st listmore fund to karnataka state
0 FacebookTwitterPinterestEmail
admin

previous post
ಬೆಳೆ ನಷ್ಟ ಪರಿಹಾರಕ್ಕೆ 2,000 ಕೋಟಿ ರೂ. ಬಿಡುಗಡೆ
next post
ದೆಹಲಿಗೆ ಸಿದ್ದರಾಮಯ್ಯ ಬಣ ಸಚಿವರ ನಿಯೋಗ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ