ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಮನೆಗೆ
previous post
ಬೆಂಗಳೂರು:ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಯಿಂದ ಮನೆಗೆ ಹಿಂತಿರುಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.