Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರಶಿಕ್ಷಣ

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆ ಅಂಕ ಇಳಿಕೆ

by admin October 15, 2025
written by admin October 15, 2025 0 comments 2 minutes read
0FacebookTwitterPinterestEmail
83

ವಿದ್ಯಾರ್ಥಿಗಳಿಗೆ ಸಚಿವ ಮಧುಬಂಗಾರಪ್ಪ ದೀಪಾವಳಿ ಕೊಡುಗೆ

ಬೆಂಗಳೂರು:ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಪ್ರತಿ ವಿಷಯದಲ್ಲಿ ಶೇಕಡ 33 ಅಂಕ ಗಳಿಸಿದರೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇಕಡಾ 33 ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ, ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇಕಡಾ 30 ಅಂಕ ಪಡೆದಂತಹ ವಿದ್ಯಾರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.

ಒಟ್ಟಾರೆ ಶೇಕಡಾ 33

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪ್ರತಿ ವಿಷಯದ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 30 ಅಂಕಗಳನ್ನು ಪಡೆಯಬೇಕು ಹಾಗೂ ಪ್ರತಿ ವಿಷಯದಲ್ಲೂ ಲಿಖಿತ ಮತ್ತು ಪ್ರಾಯೋಗಿಕ/ಆಂತರಿಕ ಅಂಕಗಳು ಸೇರಿ ಕನಿಷ್ಠ 30 ಅಂಕಗಳನ್ನು ಪಡೆದು ಒಟ್ಟಾರೆ ಶೇಕಡಾ 33 (600ಕ್ಕೆ 198) ಅಂಕಗಳನ್ನು ಪಡೆದ ವಿದ್ಯಾರ್ಥಿ ಉತ್ತೀರ್ಣರಾಗುತ್ತಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಜಾರಿಗೊಳ್ಳಲಿದೆ, ಇದುವರೆಗೂ ಪ್ರತಿ ವಿಷಯದಲ್ಲಿ ಕನಿಷ್ಟ 35 ಅಂಕಗಳನ್ನು ಪಡೆಯಬೇಕಿತ್ತು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಮತ್ತು ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ದಾರಿ ತಪ್ಪದಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಟ ದರ್ಶನ್ ಗೆ ಮತ್ತೆ ಬೆನ್ನು ನೋವು: ಚಿಕಿತ್ಸೆಗೆ ಮನವಿ
18,000 ಶಿಕ್ಷಕರ ನೇಮಕಾತಿ

ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ 18,000 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆರಂಭಿಸುವುದಾಗಿ ಘೋಷಿಸಿದ ಸಚಿವರು, 800 ಸರ್ಕಾರಿ ಶಾಲೆಗಳನ್ನು 3,000 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವುದಾಗಿ ತಿಳಿಸಿದರು.

ಪ್ರತಿ ಪಬ್ಲಿಕ್ ಶಾಲೆಗೆ 4 ಕೋಟಿ ರೂ. ವೆಚ್ಚ ಮಾಡಿ ಮೂಲಸೌಕರ್ಯ ಕಲ್ಪಿಸುವ ಜೊತೆಗೆ ಶಿಕ್ಷಕರ ಕೊರತೆ ನೀಗಿಸಲು ದೊಡ್ಡ ಪ್ರಮಾಣದಲ್ಲಿ ನೇಮಕಾತಿಗೂ ಚಾಲನೆ ನೀಡಲಾಗಿದೆ.

ಸಿಬಿಎಸ್‌ಇ ಮತ್ತು ನೆರೆ ರಾಜ್ಯಗಳಲ್ಲಿ ಉತ್ತೀರ್ಣತೆ ಅಂಕಗಳಿಗೆ ಸಂಬಂಧಿಸಿದಂತೆ ಎಲ್ಲಾ ವಿಷಯಗಳಲ್ಲೂ ಹಾಗೂ ಪ್ರತಿ ವಿಷಯದಲ್ಲಿ ಕನಿಷ್ಟ ಶೇಕಡ 33ರಷ್ಟು ಅಂಕಗಳನ್ನು ಪಡೆಯಬೇಕೆಂಬ ಮಾನದಂಡಗಳನ್ನು ಅಳವಡಿಸಿಕೊಳ್ಳಲಾಗಿದೆ.

ಸುಧಾರಣಾ ಆಯೋಗ ವರದಿ

ಕರ್ನಾಟಕ ಆಡಳಿತ ಸುಧಾರಣಾ ಆಯೋಗದ 4ನೇ ವರದಿಯಲ್ಲೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣತಾ ಅಂಕಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಿದ್ದಾರೆ.

ಪ್ರಸ್ತುತ ಎರಡು ತರಗತಿಗಳಲ್ಲೂ ತೇರ್ಗಡೆಯಾಗಲು ಕನಿಷ್ಟ 35 ಅಂಕ ಪಡೆಯಬೇಕೆಂಬ ನಿಯಮವಿದೆ.

ಉತ್ತೀರ್ಣ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್‌ಇ ಹಾಗೂ ನೆರೆ ರಾಜ್ಯಗಳ ಉತ್ತೀರ್ಣ ಮಾನದಂಡವನ್ನು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಅನ್ವಯ ಆಗುವಂತೆ ಏಕರೂಪ ಪದ್ಧತಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೊಳಿಸಲಾಗುವುದು ಎಂದರು.

ಸಕಾರಾತ್ಮಕ ಪರಿಣಾಮ ಆಶಯ

ಈ ಬದಲಾವಣೆಯು ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಸಚಿವರು ತಿಳಿಸಿದರು.

ಪರಿವರ್ತಿತ ಪಬ್ಲಿಕ್ ಶಾಲೆಗಳಲ್ಲಿ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2 ರಿಂದ 3 ಹಾಗೂ ಕಲ್ಯಾಣ ಕರ್ನಾಟಕಕ್ಕೆ 4 ರಿಂದ 5 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Minister Madhu Bangarappapassing marks reducedPUCSSLC
0 FacebookTwitterPinterestEmail
admin

previous post
ನಟ ದರ್ಶನ್ ಗೆ ಮತ್ತೆ ಬೆನ್ನು ನೋವು: ಚಿಕಿತ್ಸೆಗೆ ಮನವಿ
next post
ಖಾತಾ ಪರಿವರ್ತನೆ ಹೆಸರಲ್ಲಿ 15,000 ಕೋಟಿ ರೂ. ಲೂಟಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ