Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಚಿವ ಸತೀಶ್ ಜಾರಕಿಹೊಳಿ ಪರ್ಯಾಯ ನಾಯಕ !

by admin October 23, 2025
written by admin October 23, 2025 0 comments 1 minutes read
0FacebookTwitterPinterestEmail
111

ರಾಜಕೀಯ ಸಂಧ್ಯಾಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಾ.ಯತೀಂದ್ರ

ಬೆಂಗಳೂರು:ತಂದೆಯವರು ರಾಜಕೀಯ ಸಂಧ್ಯಾಕಾಲದಲ್ಲಿದ್ದು ಪರ್ಯಾಯವಾಗಿ ಸಚಿವ ಸತೀಶ್ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಭವಿಷ್ಯ ನುಡಿದಿದ್ದಾರೆ.

ನವೆಂಬರ್‌ನಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಾಂತಿ ಉಂಟಾಗುತ್ತದೆ ಎಂಬ ಹೇಳಿಕೆಗಳ ಬೆನ್ನಲ್ಲೇ ಡಾ.ಯತೀಂದ್ರ ಇಂತಹ ಮಾತುಗಳನ್ನಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಡಾ.ಯತೀಂದ್ರ ಹೇಳಿಕೆ

ಡಾ.ಯತೀಂದ್ರ ಹೇಳಿಕೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಆಡಳಿತ ಪಕ್ಷದ ಕೆಲವು ಸಚಿವರು ಮತ್ತು ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಗಾದಿಗೇರಲು ತಮ್ಮ ರಾಜಕೀಯ ದಾಳಗಳನ್ನು ಹೂಡುತ್ತಿರುವ ಬೆನ್ನಲ್ಲೇ ಡಾ.ಯತೀಂದ್ರ, ತಮ್ಮ ತಂದೆ ಸಿದ್ದರಾಮಯ್ಯ ನಂತರ ಜಾರಕಿಹೊಳಿಯೇ ನಾಯಕರು ಎಂದು ಘೋಷಿಸಿದ್ದಾರೆ.

ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟವರು, ಅದೇ ಸಿದ್ಧಾಂತದಲ್ಲಿ ಸತೀಶ್ ಜಾರಕಿಹೊಳಿ ಸಹಾ ನಂಬಿಕೆ ಇಟ್ಟಿದ್ದಾರೆ.

ನಮ್ಮನ್ನು ಮುನ್ನಡೆಸಲಿ

ಸೈದ್ಧಾಂತಿಕ ರಾಜಕಾರಣ ಮಾಡುವ ನಾಯಕರು ನಮ್ಮನ್ನು ಮುನ್ನಡೆಸಲಿ ಎಂಬುದಾಗಿ ಹೇಳಿದ್ದೇನೆಯೇ ಹೊರತು ಇದರಲ್ಲಿ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಜೊತೆಗೂಡಿ ಬೆಳಗಾವಿಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲೇ ಇಂತಹ ಹೇಳಿಕೆ ನೀಡಿರುವ ಡಾ.ಯತೀಂದ್ರ, ನಮ್ಮ ತಂದೆ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯದೆ, ಚುನಾವಣಾ ರಾಜಕೀಯದಿಂದ ದೂರ ಉಳಿಯಲಿದ್ದಾರೆ.

ಇಂತಹ ಸನ್ನಿವೇಶದಲ್ಲಿ ನಮ್ಮನ್ನು ಮುನ್ನಡೆಸಲು ಸತೀಶ್ ಸಮರ್ಥ ನಾಯಕರು, ಮುಖ್ಯಮಂತ್ರಿಯ ಪ್ರಸಕ್ತ ಅವಧಿಯನ್ನು ನಮ್ಮ ತಂದೆ ಪೂರ್ಣಗೊಳಿಸಲಿದ್ದಾರೆ ಎಂದರು.

ಸಾಮಾಜಿಕ ನ್ಯಾಯದಲ್ಲಿ ನಂಬಿಕೆ

ದೇವರಾಜ ಅರಸು ನಂತರ ಹಲವು ನಾಯಕರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟು ರಾಜಕೀಯ ಮಾಡಿದ್ದಲ್ಲದೆ, ಸಂಘಟನೆಯನ್ನೂ ಮಾಡಿದರು.

ತದನಂತರ ಸಿದ್ದರಾಮಯ್ಯ ಇದೇ ಸಿದ್ಧಾಂತದಲ್ಲಿ ರಾಜಕೀಯ ಮಾಡಿಕೊಂಡು ಬಡವರು, ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸಲ್ಲಬೇಕಾದ ನ್ಯಾಯ ಕೊಡಿಸುವಲ್ಲಿ ಶ್ರಮ ವಹಿಸಿದ್ದಾರೆ.

ಇದು ನಿಂತ ನೀರಾಗಬಾರದು, ಈ ವರ್ಗದ ಜನರ ಕಲ್ಯಾಣಕ್ಕೆ ಸಿದ್ದರಾಮಯ್ಯ ಅಂತಹ ನಾಯಕರ ಅಗತ್ಯವಿದೆ, ಅಂತಹ ಗುಣವನ್ನು ಸತೀಶ್ ಅವರಲ್ಲಿ ಕಂಡು ನಿಮ್ಮಲ್ಲಿ ಬಹಿರಂಗವಾಗಿಯೇ ಹೇಳುತ್ತಿದ್ದೇನೆ.

ಸತೀಶ್‌ಗೆ ಚುನಾವಣಾ ನಾಯಕತ್ವ

2028ರ ವಿಧಾನಸಭಾ ಚುನಾವಣಾ ನಾಯಕತ್ವವನ್ನೂ ಸತೀಶ್ ಅವರೇ ವಹಿಸಿಕೊಳ್ಳಲಿ, ಅವರ ಹಿಂದೆ ನನ್ನಂತಹ ಲಕ್ಷಾಂತರ ಕಾರ್ಯಕರ್ತರು ಮತ್ತು ಮುಖಂಡರು ಬೆನ್ನಲುಬಾಗಿ ನಿಲ್ಲಲಿದ್ದಾರೆ ಎಂದರು.

ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಯತೀಂದ್ರ, ಪರ್ಯಾಯ ನಾಯಕ ಎಂದ ತಕ್ಷಣ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುತ್ತಾರೆ ಎಂಬ ಅರ್ಥದಲ್ಲಿ ಹೇಳಿಲ್ಲ.

ನವೆಂಬರ್ ಕ್ರಾಂತಿ ಊಹಾಪೋಹ

ನವೆಂಬರ್‌ನಲ್ಲಿ ಕ್ರಾಂತಿ ಎನ್ನುವುದು ಊಹಾಪೋಹ, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಅಂತಹ ಚರ್ಚೆಯೂ ನಡೆದಿಲ್ಲ.

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಗುವ ಹಲವು ಸಮರ್ಥ ನಾಯಕರಿದ್ದಾರೆ, ಶಾಸಕರು ಮತ್ತು ಪಕ್ಷದ ವರಿಷ್ಠರು, ಶಾಸಕಾಂಗ ಪಕ್ಷದ ನಾಯಕ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತಾರೆ, ಪ್ರಸ್ತುತ ನಡೆಯುತ್ತಿರುವ ಎಲ್ಲಾ ವಿಚಾರಗಳೂ ಊಹಾಪೋಹ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.yatindra statementminister satish jarakiholisiddaramaiah full time chief ministersocial justice
0 FacebookTwitterPinterestEmail
admin

previous post
ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ನಿರ್ಧಾರ
next post
ಕೆಎಸ್‌ಡಿಎಲ್ ಡಿವಿಡೆಂಡ್ 135 ಕೋಟಿ ರೂ. ಅರ್ಪಣೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ