Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಪೀಕ್ ಕ್ಯಾಪ್‌ಗೆ ಬದಲಾದ ಪೋಲಿಸ್ ಖಾಕಿ ಟೋಪಿ

by admin October 28, 2025
written by admin October 28, 2025 0 comments 2 minutes read
0FacebookTwitterPinterestEmail
54

ಬೆಂಗಳೂರು:ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪೋಲಿಸರು ಧರಿಸುವ ಕ್ಯಾಪ್ ಮಾದರಿಯ ಪೀಕ್ ಕ್ಯಾಪ್ ರಾಜ್ಯ ಪೋಲಿಸರಿಗೂ ನೀಡಲಾಗಿದೆ.

ಕಳೆದ ಏಳು ದಶಕಗಳಿಂದ ನಮ್ಮ ಪೋಲಿಸರು ಧರಿಸುತ್ತಿದ್ದ ಖಾಕಿ ಟೋಪಿಗೆ ಗುಡ್‌ಬೈ ಹೇಳಿರುವ ರಾಜ್ಯ ಸರ್ಕಾರ ನಮ್ಮವರಿಗೂ ನೀಲಿ ಬಣ್ಣದ ಗತ್ತಿನ ಪೀಕ್ ಕ್ಯಾಪ್ ನೀಡಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಾಂಕೇತಿಕವಾಗಿ ಕೆಲವು ಪೋಲಿಸ್ ಅಧಿಕಾರಿಗಳಿಗೆ ಪೀಕ್ ಕ್ಯಾಪ್ ತೊಡಿಸುವ ಮೂಲಕ ಖಾಕಿ ಟೋಪಿಗೆ ಗುಡ್‌ಬೈ ಹೇಳಿದರು.

ಕಟಿಬದ್ಧ ನಿಲುವು ತಳೆಯಬೇಕು

ನಂತರ ಮಾತನಾಡಿದ ಮುಖ್ಯಮಂತ್ರಿ, ಮಾದಕದ್ರವ್ಯ ಮುಕ್ತ ಕರ್ನಾಟಕ ನಿಮ್ಮ ಗುರಿ ಆದಾಗ ಕರ್ನಾಟಕದ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತದೆ, ಯುವಶಕ್ತಿ, ವಿದ್ಯಾರ್ಥಿಗಳ ಚೈತನ್ಯ, ಸಾಮರ್ಥ್ಯ ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂಬ ಕಟಿಬದ್ಧ ನಿಲುವು ಪೊಲೀಸ್ ಇಲಾಖೆಯದ್ದಾಗಬೇಕು ಎಂದರು.

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ, ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಿದರೆ ಕರ್ನಾಟಕ ಪೊಲೀಸ್ ಘನತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ.

ರಿಯಲ್ ಎಸ್ಟೇಟ್‌ದಾರರು, ಮಾದಕವಸ್ತು ಜಾಲದ ಜೊತೆ ಕೆಲವು ಪೊಲೀಸರು ಶಾಮೀಲು ಆಗಿರುತ್ತಾರೆ, ರೌಡಿ ಚಟುವಟಿಕೆಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕಬೇಕು, ಪೊಲೀಸರ ಬಗ್ಗೆ ಅಪರಾಧ ಜಗತ್ತಿನಲ್ಲಿ ಭಯ ಕಡಿಮೆಯಾಗಿದೆ, ಏಕೆ ಯಾಕೆ ಹೀಗಾಯ್ತು ಎಂಬುದಾಗಿ ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ.

ಡ್ರಗ್ ಮುಕ್ತ ಕರ್ನಾಟಕ

ಮಾದಕವಸ್ತು ಮಾರುವವರು, ತರುವವರು, ಎಲ್ಲಿಂದ ಬರುತ್ತದೆ, ಜಾಲದ ಏಜೆಂಟ್ ಯಾರ‍್ಯಾರು ಎಂದೂ ನಿಮಗೇ ಗೊತ್ತಿರುತ್ತದೆ, ಆದಷ್ಟು ಬೇಗ ’ಡ್ರಗ್ ಮುಕ್ತ ಕರ್ನಾಟಕ’ ಮಾಡಿ ತೋರಿಸಿ ಎಂದರು.

ಪೋಲಿಸ್ ಸಿಬ್ಬಂದಿಗೆ ಪೀಕ್ ಕ್ಯಾಪ್ ಮಾದರಿ ಆಯ್ಕೆ ಮಾಡಿದ್ದು ನಾನೇ, ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿ ಟೋಪಿ ಬದಲಾಯಿಸಿದ್ದೇವೆ, ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದೆ, ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಲಿ, ಕೇವಲ ಕ್ಯಾಪ್ ಬದಲಾಗುವುದಲ್ಲ, ನಿಮ್ಮ ಕಾರ್ಯಕ್ಷಮತೆಯೂ ಬದಲಾಗಬೇಕು.

ಪೊಲೀಸ್ ಇಲಾಖೆ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎಂಬುದು ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ತವ್ಯ ನಿಷ್ಠೆಯಲ್ಲಿ ರಾಜಿ ಬೇಡ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಯಾವ ಸರ್ಕಾರ ಬಂದರೂ ನಿಮ್ಮ ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿ ಆಗಬಾರದು, ರಾಜಿ ಮಾಡಿಕೊಂಡರೆ ವ್ಯವಸ್ಥೆ ಸಂಪೂರ್ಣ ಕುಸಿಯಲಿದೆ ಎಂದು ಕಿವಿ ಮಾತು ಹೇಳಿದರು.

ಪೊಲೀಸರ ಮೇಲೆ ಸಮಾಜ ಹಾಗೂ ಸರ್ಕಾರ ಬಹಳ ವಿಶ್ವಾಸ ಇಟ್ಟಿರುತ್ತದೆ, ನೀವು ಸಮಾಜ ರಕ್ಷಕರು, ಅಧಿಕಾರ ಪ್ರಮಾಣವಚನ ಸ್ವೀಕಾರ ವೇಳೆ ನಾನು ಸ್ವಲ್ಪ ಖಾರವಾಗಿಯೇ ಮಾತನಾಡಿದ್ದೆ.

ಕಳೆದ ಸರ್ಕಾರದ ಅವಧಿಯಲ್ಲಿ ಆಯಧಪೂಜೆ ವೇಳೆ ವಿಜಯಪುರ ಹಾಗೂ ಉಡುಪಿಯಲ್ಲಿ ಕೆಲವರು ಸಮವಸ್ತ್ರ ತೆಗೆದು ಕೇಸರಿ ವಸ್ತ್ರ ಧರಿಸಿದ್ದರು, ರಾಜಕೀಯ ಒತ್ತಡ ಹಾಗೂ ಬೇರೆಯವರನ್ನು ಮೆಚ್ಚಿಸಲು ಈ ರೀತಿ ಮಾಡಿದರೆ ನಿಮ್ಮನ್ನು ನೀವು ಮಾರಿಕೊಂಡಂತೆ.

ವ್ಯಕ್ತಿತ್ವ, ಘನತೆ ನಾಶವಾಗುತ್ತದೆ

ನಿಮ್ಮ ವ್ಯಕ್ತಿತ್ವ, ಇಲಾಖೆಗೆ ಇರುವ ಘನತೆ ನಾಶವಾಗುತ್ತದೆ, ನೀವು ರಾಜಕೀಯ ಹಿಂಬಾಲಕರಾಗುತ್ತೀರಿ, ಆಗ ನಿಮ್ಮನ್ನು ಯಾರು ನಂಬುತ್ತಾರೆ, ಇಂತಹ ಪದ್ಧತಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬೇಡಿ.

ಹೆಚ್ಚುತ್ತಿರುವ ಸೈಬರ್ ಅಪರಾಧ ಹತೋಟಿಗೆ ಮೇಲಾಧಿಕಾರಿಗಳು, ಕೆಳ ಹಂತದ ಅಧಿಕಾರಿಗಳು ತಯಾರಾಗಬೇಕು, ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಮನೆಗೆಲಸದವರು, ಚಾಲಕರು, ಕಾವಲುಗಾರರ ವಿವರ ನೋಂದಾಯಿಸಿಕೊಳ್ಳಬೇಕು, ಆಗ ಬಹುಮಟ್ಟಿಗೆ ಅಪರಾಧ ನಿಯಂತ್ರಣಕ್ಕೆ ಬರುತ್ತದೆ.

ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ, ಇವರಿಬ್ಬರೂ ನಾಡಿನ ರಕ್ಷಕರು, ರಾಜ್ಯ ಪೊಲೀಸ್ ಇಲಾಖೆಗೆ ಬಹಳ ಗೌರವ ಇದೆ, ಪೊಲೀಸರ ಯಶಸ್ಸಿನಲ್ಲೇ, ಸರ್ಕಾರದ ಯಶಸ್ಸು ಇದೆ, ರಾಜ್ಯ ಪೊಲೀಸ್ ಸಿಬ್ಬಂದಿ ಸಮರ್ಥರಿದ್ದಾರೆ.

ದೇಶಕ್ಕಾಗಿ ಪೋಲಿಸ್ ಕೆಲಸ

ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ 1988ರಲ್ಲಿ ವಿಶ್ವ ಯುವ ಸಮ್ಮೇಳನಕ್ಕೆ ಉತ್ತರ ಕೊರಿಯಾದ ಪ್ಯೋಂಗ್ಯಾಂಗ್‌ಗೆ ತೆರಳಿದ್ದೆ, ಆಗ ಅಲ್ಲಿನ ಪ್ರಮುಖ ವೃತ್ತವೊಂದರಲ್ಲಿ ಮಹಿಳಾ ಪೊಲೀಸ್ ಒಬ್ಬರು ಏಕಾಂಗಿಯಾಗಿ ಸಂಚಾರ ದಟ್ಟಣೆ ನಿಭಾಯಿಸುತ್ತಿದ್ದರು, ನಾನು ಆಕೆಯ ಸಂಬಳ ಎಷ್ಟು ಎಂದು ಕೇಳಿದೆ, ಆಕೆ ಕೋಪಗೊಂಡು ನಾನು ದೇಶಕ್ಕಾಗಿ ಕೆಲಸ ಮಾಡುತ್ತಿದ್ದೇನೆ, ಸಂಬಳಕ್ಕಾಗಿ ಅಲ್ಲ ಎಂದರು.

ಡಾ.ಪರಮೇಶ್ವರ್ ಗೃಹ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಹೊಸ ರೂಪ ನೀಡಿದ್ದಾರೆ, ಪೋಲಿಸರಿಗಾಗಿ ವಸತಿ ನಿಲಯ, ಸೇವೆ ವೇಳೆ ಮೃತರಾದರೆ ಪರಿಹಾರ, ಸನ್ಮಿತ್ರ ಕಾರ್ಯಕ್ರಮ ತರಲಾಗುತ್ತಿದೆ, ಪೋಲಿಸ್ ಕುಟುಂಬಕ್ಕಾಗಿ ಅನೇಕ ಯೋಜನೆ ತರಲಾಗಿದೆ.

ಬೆಂಗಳೂರಿನ ಜನಸಂಖ್ಯೆ 1.40 ಕೋಟಿ, ವಾಹನಗಳ ಸಂಖ್ಯೆ 1.23 ಕೋಟಿ, ಜನತೆ ಸಾರ್ವಜನಿಕ ಸಾರಿಗೆಗಿಂತ ಸ್ವಂತ ಸಾರಿಗೆ ಮೇಲೆ ಆಸಕ್ತಿ ಹೊಂದಿದ್ದಾರೆ, ದೊಡ್ಡ ಪ್ರಮಾಣದಲ್ಲಿ ಬಿಬಿಸಿ ರಸ್ತೆ, ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ಸೇರಿದಂತೆ ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ. ಸಂಚಾರ ದಟ್ಟಣೆ ನಿವಾರಣೆಗೆ ಸಲಹೆಗಳನ್ನು ಸರ್ಕಾರಕ್ಕೆ ನೀಡಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdcm d k shivakumarhome minister dr.g.parameshwarpolice peak cap
0 FacebookTwitterPinterestEmail
admin

previous post
ಕರ್ನಾಟಕ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅನಿವಾರ್ಯ
next post
ಮುಖ್ಯಮಂತ್ರಿ ಗಾದಿಗೆ ನಿಲ್ಲದ ತೆರೆಮರೆ ಕಸರತ್ತು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ