Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಜಣ್ಣ ‘ವೈಟ್ ಹೌಸ್’ನಲ್ಲಿ ನವೆಂಬರ್ ಕ್ರಾಂತಿ ಸಭೆ !

by KM Shivaraju November 5, 2025
written by KM Shivaraju November 5, 2025 0 comments 1 minutes read
0FacebookTwitterPinterestEmail
177

ಬೆಂಗಳೂರು:ಅಧಿಕಾರ ಹಸ್ತಾಂತರ ಕೂಗಿನ ಬೆನ್ನಲ್ಲೇ ಮುಖ್ಯಮಂತ್ರಿ ಆಪ್ತ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ತಮ್ಮ ತುಮಕೂರಿನ ಕ್ಯಾತ್ಸಂದ್ರ ನಿವಾಸದಲ್ಲೇ ಅಹಿಂದ ಸಭೆ ನಡೆಸುವ ಮೂಲಕ ನವೆಂಬರ್ ಕ್ರಾಂತಿಗೆ ಮುನ್ನುಡಿ ಬರೆಯುತ್ತಿದ್ದಾರೆ.

ನವೆಂಬರ್ 7ರಂದು ತುಮಕೂರು ವಿಶ್ವ ವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಹಾಗೂ ಅಲ್ಲಿನ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಆವರಣದಲ್ಲಿ 300 ಹಾಸಿಗೆಗಳ ನೂತನ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಹೋದ್ಯೋಗಿಗಳು ಭಾಗಿಯಾಗಲಿದ್ದಾರೆ.

ಡಿ.ಕೆ.ಶಿವಕುಮಾರ್‌ಗೂ ಆಹ್ವಾನ

ಸರ್ಕಾರಿ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಆಹ್ವಾನ ನೀಡಿದ್ದಾರೆ.

ಆದರೆ, ಶಿವಕುಮಾರ್ ಈ ಕಾರ್ಯಕ್ರದಲ್ಲಿ ಭಾಗಿಯಾಗದೆ, ಇಂದಿನಿಂದ ಮೂರು ದಿನ ದೆಹಲಿ ಹಾಗೂ ಬಿಹಾರ ಪ್ರವಾಸ ಕೈಗೊಂಡಿದ್ದಾರೆ.

ರಾಜಣ್ಣ ಈ ಅವಕಾಶವನ್ನೇ ಬಳಸಿಕೊಂಡು, ಮುಖ್ಯಮಂತ್ರಿ ಅವರಿಗೆ ಬಲ ತುಂಬುವ ಮತ್ತು ಸದ್ಯಕ್ಕೆ ನಾಯಕತ್ವ ಬದಲಾವಣೆ ಬೇಡ ಎಂಬ ನಿರ್ಣಯ ಕೈಗೊಳ್ಳುವ ಉದ್ದೇಶದಿಂದ ಅಹಿಂದ ಸಭೆ ಕರೆದಿದ್ದಾರೆ.

’ವೈಟ್ ಹೌಸ್’ನಲ್ಲಿ ಬೋಜನಕೂಟ

ಕ್ಯಾತ್ಸಂದ್ರದಲ್ಲಿನ ರಾಜಣ್ಣ ನಿವಾಸ ’ವೈಟ್ ಹೌಸ್’ನಲ್ಲಿ ಮಧ್ಯಾನ್ಹ 1-30ರಿಂದ 3ರ ಸಮಯದಲ್ಲಿ ಅಹಿಂದ ನಾಯಕರ ಸಭೆ ಮತ್ತು ಬೋಜನಕೂಟ ಏರ್ಪಡಿಸಲಾಗಿದೆ.

ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಹಿರಿಯ ಸಹೋದ್ಯೋಗಿಗಳಾದ ಡಾ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಜಮೀರ್ ಅಹಮದ್ ಖಾನ್ ಸೇರಿದಂತೆ 70 ಮಂದಿ ಅಹಿಂದ ಸಚಿವರು, ಶಾಸಕರಿಗೆ ರಾಜಣ್ಣ ಬೋಜನಕೂಟಕ್ಕೆ ಆಹ್ವಾನಿಸಿದ್ದಾರೆ.

ರಾಜಣ್ಣ 150 ಮುಖಂಡರಿಗೆ ಬೋಜನಕೂಟದ ವ್ಯವಸ್ಥೆ ಮಾಡಿದ್ದು, 70ಕ್ಕೂ ಹೆಚ್ಚು ಸಚಿವರು, ಶಾಸಕರು ಭಾಗವಹಿಸಲಿದ್ದಾರಂತೆ.

ಕ್ರಾಂತಿಯ ಮೊದಲ ಸಭೆ

ಸಿದ್ದರಾಮಯ್ಯ ಅವರನ್ನು ಬೆಂಬಲಿಸುವುದು ಹಾಗೂ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರಬೇಕು, ಅವರ ಹಿಂದೆ ನಾವಿದ್ದೇವೆ ಎಂಬುದನ್ನು ವರಿಷ್ಠರ ಗಮನಕ್ಕೆ ತರುವ ನವೆಂಬರ್ ಕ್ರಾಂತಿಯ ಮೊದಲ ಸಭೆ ಇದಾಗಲಿದೆ.

’ವೈಟ್‌ಹೌಸ್’ನಲ್ಲಿ ಬೋಜನಕೂಟ ಹಾಗೂ ಸಭೆ ನಂತರ ಸಿದ್ದರಾಮಯ್ಯ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ, ಅವರು ತೆರಳಿದ ನಂತರ ಉಳಿದ ನಾಯಕರು ತಮ್ಮ ಗೌಪ್ಯ ಸಭೆ ಮುಂದುವರೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಾ.ಪರಮೇಶ್ವರ್ ತುಮಕೂರಿನಲ್ಲೇ ಬಿಡಾರ

ಸರ್ಕಾರಿ ಸಮಾರಂಭ ಮತ್ತು ರಾಜಣ್ಣ ಅವರ ಮನೆಯಲ್ಲಿನ ಬೋಜನಕೂಟ ಯಶಸ್ವಿಗೊಳಿಸುವ ಉದ್ದೇಶದಿಂದ ಡಾ.ಪರಮೇಶ್ವರ್ ಸಹಾ ಕಳೆದ ಮೂರು ದಿನಗಳಿಂದ ತುಮಕೂರಿನಲ್ಲೇ ಬಿಡಾರ ಹೂಡಿದ್ದಾರೆ.

ಈ ಮಧ್ಯೆ, ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು ರಾಜಣ್ಣ ಊಟಕ್ಕೆ ಕರೆದಿದ್ದಾರೆ, ನಾನು ಸಿದ್ದರಾಮಯ್ಯ ಸೇರಿದಂತೆ ಕೆಲವು ಸಚಿವರು ಮತ್ತು ಶಾಸಕರು ಹೋಗುತ್ತಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
byrati sureshcm siddaramaiahdr.g.parameshwardr.h c mahadevappajamir ahamad khank n rajanna dinner partysatish jarakiholitumakuru kytasandra
0 FacebookTwitterPinterestEmail
KM Shivaraju

previous post
ಮುಖ್ಯಮಂತ್ರಿ ಗಾದಿ ಸಮರ: ರೈತರ ಬಗ್ಗೆ ದಿವ್ಯ ನಿರ್ಲಕ್ಷ್ಯ
next post
‘ವೈಟ್‌ಹೌಸ್’ ಸಭೆಗೆ ನಾನು, ಸಿದ್ದರಾಮಯ್ಯ ಹೋಗುತ್ತೇವೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ