Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ತಾಣವಾಗಲಿದೆ

by admin November 18, 2025
written by admin November 18, 2025 0 comments 2 minutes read
0FacebookTwitterPinterestEmail
98

ಬೆಂಗಳೂರು:ಸರ್ಕಾರದ ಸ್ಪಷ್ಟ ಕೈಗಾರಿಕಾ ನೀತಿಗಳು, ಸರಳೀಕೃತ ಅನುಮತಿ, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣ, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.

‘ಬೆಂಗಳೂರು ಟೆಕ್ ಸಮ್ಮಿಟ್’ 28ನೇ ಆವೃತ್ತಿ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ, ಬಾಹ್ಯಾಕಾಶ ತಂತ್ರಜ್ಞಾನ ನೀತಿ, ಸ್ಟಾರ್ಟ್‌ಅಪ್‌ನಂತಹ ಪ್ರಮುಖ ನೀತಿ ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆ ಇಡಲಾಗಿದೆ ಎಂದರು.

25,000 ಸ್ಟಾರ್ಟ್‌ಅಪ್ ಗುರಿ

ಕರ್ನಾಟಕವನ್ನು 2034ರ ವೇಳೆಗೆ ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾ ನೀತಿ ಸಹಕಾರಿಯಾಗಲಿದೆ, ಹೊಸ ಸ್ಟಾರ್ಟ್‌ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿ ಕ್ರಮಗಳ ಮೂಲಕ 25,000 ಸ್ಟಾರ್ಟ್‌ಅಪ್‌ಗಳ ಸ್ಥಾಪನೆ ಗುರಿ ಸರ್ಕಾರ ಹೊಂದಿದೆ.

ಈ ವರ್ಷದ ಶೃಂಗಸಭೆಯ ಧ್ಯೇಯವಾಕ್ಯ, ’ಭವಿಷ್ಯೀಕರಣಗೊಳ್ಳಿ-ಅಜ್ಞಾತವನ್ನು ರೂಪಿಸುತ್ತಾ, ಊಹಿಸಿಲಾಗದ್ದನ್ನು ಅಳೆಯುತ್ತಾ, ಜಗತ್ತನ್ನು ಮುಂದೆ ಕೊಂಡೊಯ್ಯುವುದು” ಎಂಬುದಾಗಿದೆ.

ಕರ್ನಾಟಕ ಜ್ಞಾನಕಾಶಿಯಾಗಿದ್ದು 85 ವಿಶ್ವವಿದ್ಯಾಲಯಗಳು, 243 ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಸುಮಾರು 1,800 ಐಟಿಐಗಳಿಗೆ ನೆಲೆಯಾಗಿದೆ, ರಾಜ್ಯದ ನಿರುದ್ಯೋಗ ಪ್ರಮಾಣ 4.3% ರಷ್ಟು ಮಾತ್ರ ಇದ್ದು, ರಾಜ್ಯದ ಸಮರ್ಥ ಉತ್ಪಾದಕತೆ ಮತ್ತು ಉದ್ಯೋಗಾವಕಾಶಗಳನ್ನು ಎತ್ತಿ ತೋರಿಸುತ್ತದೆ.

16,000ಕ್ಕೂ ಹೆಚ್ಚು ನವೋದ್ಯಮ ನೆಲೆ

ಕರ್ನಾಟಕ 16,000ಕ್ಕೂ ಹೆಚ್ಚು ನವೋದ್ಯಮಗಳ ನೆಲೆಯಾಗಿದೆ, ಭಾರತದ ಒಟ್ಟು ನವೋದ್ಯಮ ನಿಧಿಗೆ 47% ರಷ್ಟು ರಾಜ್ಯದ ಕೊಡುಗೆಯಾಗಿದೆ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದ್ದು, ಘಟಕ ಸ್ಥಾಪಿಸುವ ಕಂಪನಿಗಳಿಗೆ ಎಲ್ಲ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು.

ಸೆಮಿಕಂಡಕ್ಟರ್ ಪಾರ್ಕ್ ದೇಶ ಮತ್ತು ರಾಜ್ಯ ಮಟ್ಟದಲ್ಲಿ ಎಲ್ಲ ನಾವೀನ್ಯತಾ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ, ಡ್ರೋನ್, ಸೆಮಿಕಂಡಕ್ಟರ್ ಸಾಧನಗಳು ಮತ್ತು ಸೌರ ವಿದ್ಯುತ್ ಉತ್ಪಾದನೆಯನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ, ಜೊತೆಗೆ ಇಂಡಸ್ಟ್ರಿ-5.0 ಮತ್ತು ಇತರ ಅತ್ಯಾಧುನಿಕ ಕೈಗಾರಿಕಾ ವಿಧಾನಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.

18,300 ನವೋದ್ಯಮಗಳಿವೆ

ಕೈಗಾರಿಕೆಗಳು ಬೆಳೆಯಬೇಕು, ಹೂಡಿಕೆದಾರರು ನಮ್ಮಲ್ಲಿಗೆ ಬರಬೇಕೆಂದರೆ, ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಪರಿಸರ ಉತ್ತಮವಾಗಿರಬೇಕು, ನಮ್ಮಲ್ಲಿ 800ಕ್ಕೂ ಹೆಚ್ಚು ಆರ್ ಅಂಡ್ ಡಿ ಕೇಂದ್ರಗಳು, 100ಕ್ಕೂ ಅಧಿಕ ಚಿಪ್ ವಿನ್ಯಾಸ ಕಂಪನಿಗಳು, 18,300 ನವೋದ್ಯಮಗಳಿವೆ.

ಉದ್ದೇಶಿತ ಕ್ವಿನ್ ಸಿಟಿಯ 5,000 ಎಕರೆ ಜಾಗದಲ್ಲಿ ಆರ್ ಅಂಡ್ ಡಿ ಕೇಂದ್ರಗಳಿಗೆ ಅಗತ್ಯವಿರುವ ಸ್ಥಳ ಮೀಸಲಿಟ್ಟು, ಸೂಕ್ತ ಕಾರ್ಯಪರಿಸರ ಅಭಿವೃದ್ಧಿ ಪಡಿಸಲಿದ್ದೇವೆ.

ರಾಜ್ಯದಲ್ಲಿ ಹಲವು ತಂತ್ರಜ್ಞಾನ ಕಂಪನಿಗಳು ಎಐ, ಎಂಎಲ್ (ಮಷೀನ್ ಲರ್ನಿಂಗ್), ಕ್ವಾಂಟಂ, ರೋಬೋಟಿಕ್ಸ್, ಆಧುನಿಕ ತಯಾರಿಕೆ ಮತ್ತು ಸುಸ್ಥಿರ ನಾವೀನ್ಯತಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿವೆ, ಈ ಕಂಪನಿಗಳಿಗೆ ಬೆಂಬಲಿಸಲು ಸರ್ಕಾರ 600 ಕೋಟಿ ರೂ. ಒದಗಿಸಿದೆ.

ಪುರೋಗಾಮಿ ನೀತಿ

ಜೈವಿಕ ತಂತ್ರಜ್ಞಾನ, ಸೈಬರ್ ಸೆಕ್ಯೂರಿಟಿಯಂತಹ ಕ್ಷೇತ್ರಗಳಿಗೆ ಸಂಬಂಧಿಸಿದ ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳೊಂದಿಗೆ ಕೈಜೋಡಿಸಿದ್ದು, ರಾಜ್ಯವು ಇಎಸ್‌ಡಿಎಂ, ಸಂಚಾರ ವ್ಯವಸ್ಥೆ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮ ಪರಿಪೋಷಣೆಗೆ ಪುರೋಗಾಮಿ ನೀತಿ ಹೊಂದಿದ್ದು, ಜಪಾನ್, ಅಮೆರಿಕ, ಜರ್ಮನಿ ಮತ್ತು ಸಿಂಗಪುರ ರಾಷ್ಟ್ರಗಳೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ವಿವಿಧ ದೇಶದ ಉದ್ಯಮಿಗಳು ಮುಂದೆ ಬಂದಿದ್ದಾರೆ, ಜಾಗತಿಕ ಉದ್ಯಮಿಗಳು ಘಟಕ ಆರಂಭಕ್ಕೆ ಉತ್ಸುಕರಾಗಿದ್ದು, ಬೆಂಗಳೂರು ಟೆಕ್ ಸಮಾವೇಶದಲ್ಲಿ 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ ಎಂದರು.

ಅರವತ್ತು ದೇಶಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು 50 ಸಾವಿರ ಪ್ರಮುಖರು ಭಾಗವಹಿಸಲಿದ್ದಾರೆ, ಉದ್ಯೋಗ ಸೃಷ್ಟಿ ಹಾಗೂ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru 28th tech summitcm siddaramaiahdcm d k shivakumarminister m b patiminister priyank kharge
0 FacebookTwitterPinterestEmail
admin

previous post
ನವೆಂಬರ್‌ನಲ್ಲೇ ಮುಖ್ಯಮಂತ್ರಿ ಗಾದಿಗೆ ಡಿಕೆಶಿ ಒತ್ತಡ
next post
ಅಧಿಕಾರಕ್ಕೆ ಅಂಟಿಕೊಂಡು ಕುಳಿತಿರಲು ಸಾಧ್ಯವಿಲ್ಲ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ