Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಡಾ.ಪರಮೇಶ್ವರ್ ಮುಖ್ಯಮಂತ್ರಿ ಮಾಡಿ: ಸಿದ್ದರಾಮಯ್ಯ

by KM Shivaraju December 8, 2025
written by KM Shivaraju December 8, 2025 0 comments 2 minutes read
0FacebookTwitterPinterestEmail
43

ಬೆಂಗಳೂರು:ಅಧಿಕಾರ ಹಸ್ತಾಂತರಕ್ಕೆ ಸಮ್ಮತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮಿಂದ ತೆರವಾಗುವ ಸ್ಥಾನಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ತನ್ನಿ ಎಂದು ಎಐಸಿಸಿ ವರಿಷ್ಠರಿಗೆ ಶಿಫಾರಸು ಮಾಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಧಾವಿಸಿದ್ದ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗಾಪಾಲ್ ಅವರಿಗೆ ತಮ್ಮ ನಿಲುವನ್ನು ತಿಳಿಸಿದ್ದಾರೆ.

ವೇಣುಗೋಪಾಲ್‌ಗೆ ಶಿಫಾರಸು

ಡಾ.ಪರಮೇಶ್ವರ್ ಸೇರಿದಂತೆ ತಮ್ಮ ಬೆಂಬಲಿತ ಸಚಿವರ ಜೊತೆಗೂಡಿ ಮಂಗಳೂರು ವಿಶ್ವವಿದ್ಯಾಲಯದ ಅತಿಥಿಗೃಹದಲ್ಲಿ ವೇಣುಗೋಪಾಲ್ ಭೇಟಿ ಮಾಡಿದ ಮುಖ್ಯಮಂತ್ರಿ, ವರಿಷ್ಠರು ತೆಗೆದುಕೊಳ್ಳುವ ತೀರ್ಮಾನದಂತೆ ಅಧಿಕಾರ ಹಸ್ತಾಂತರ ಮಾಡುತ್ತೇನೆ.

ನನ್ನಿಂದ ತೆರವಾಗುವ ಸ್ಥಾನಕ್ಕೆ ದಲಿತ ಸಮುದಾಯಕ್ಕೆ ಸೇರಿದ ಡಾ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿ, ಇದರಿಂದ ಕಾಂಗ್ರೆಸ್‌ಗೆ ರಾಷ್ಟ್ರದಲ್ಲಿ ಬಲ ಬರುತ್ತದೆ, ಜೊತೆಗೆ ನಾವು ಸಂದೇಶ ನೀಡಿದಂತಾಗುತ್ತದೆ.

ಹೊಸ ನಾಯಕನ ಆಯ್ಕೆ ಸಂದರ್ಭದಲ್ಲಿ ಕರೆಯಲಾಗುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಾ.ಪರಮೇಶ್ವರ್ ಹೆಸರನ್ನು ನಾನೇ ಅನುಮೋದಿಸುತ್ತೇನೆ ಎಂದಿದ್ದಾರೆ.

ರಾಜಕೀಯ ಪರಿಣಾಮ

ಉಪಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ಉಂಟಾಗಬಹುದಾದ ರಾಜಕೀಯ ಪರಿಣಾಮಗಳನ್ನೂ ವೇಣುಗೋಪಾಲ್ ಗಮನಕ್ಕೆ ತಂದಿದ್ದಾರೆ.

ಪಕ್ಷ ಮತ್ತು ಸರ್ಕಾರವನ್ನು ಮತ್ತಷ್ಟು ಗಟ್ಟಿ ಮಾಡಲು ಈ ಬಾರಿ ದಲಿತ ಸಮುದಾಯಕ್ಕೆ ಅವಕಾಶ ಮಾಡಿಕೊಡಿ, ಕರ್ನಾಟಕ ಆಡಳಿತದಲ್ಲಿ ಮೊದಲಿನಿಂದಲೂ ಈ ಸಮಾಜದ ನಾಯಕರಿಗೆ ಅವಕಾಶ ಸಿಕ್ಕಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಮಾತಿಗೆ ಸಭೆಯಲ್ಲೇ ಇದ್ದ ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್ ಸೇರಿದಂತೆ ಇತರರು ಧ್ವನಿಗೂಡಿಸಿದರು.

https://kmskannada.com/2025/12/08/new-delhi-central-minister-h-d-kumaraswamy-press-conference/
ಅಭಿಪ್ರಾಯ ವರಿಷ್ಠರ ಗಮನಕ್ಕೆ

ಸಿದ್ದರಾಮಯ್ಯ ಮಾತುಗಳನ್ನು ಆಲಿಸಿದ ವೇಣುಗೋಪಾಲ್ ನಿಮ್ಮೆಲ್ಲಾ ಅಭಿಪ್ರಾಯಗಳನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಿಡುತ್ತೇನೆ.

ಕರ್ನಾಟಕಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಬಹುತೇಕ ಡಿಸೆಂಬರ್ 6ರಂದು ಸಭೆ ಕರೆದು ಚರ್ಚಿಸಲಿದ್ದು, ಅಂದು ಎಲ್ಲರ ಗಮನಕ್ಕೆ ತರುವೆ ಎಂಬ ಆಶ್ವಾಸನೆ ನೀಡಿದ್ದರು.

ಡಾ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಗಾದಿಗೆ ತರಲು ಸಿದ್ದರಾಮಯ್ಯ ಹೊರಟಿರುವ ಬೆನ್ನಲ್ಲೇ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಬೆಳಗಾವಿಯ ವಿಧಾನಮಂಡಲ ಅಧಿವೇಶನ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ತಂದೆ ಐದು ವರ್ಷ ಅಧಿಕಾರದಲ್ಲಿ ಇರುತ್ತಾರೆ ಎಂದಿದ್ದಾರೆ.

ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ

ತಮಗೆ ಅಧಿಕಾರ ಹಸ್ತಾಂತರಿಸಿ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಳಿದ್ದು ನಿಜ, ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ, ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂಬುದಾಗಿ ಹೈಕಮಾಂಡ್ ಹೇಳಿದೆ, ಇದು ಮುಗಿದ ಅಧ್ಯಾಯ ಎಂದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ, ಆದರೆ, ಅದು ಕನಸು.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ದೆಹಲಿಯ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಬೆಂಗಳೂರಿನಲ್ಲೂ ಚರ್ಚೆ ನಡೆದಿಲ್ಲ, ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಕರೆದಿಲ್ಲ, ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumark c venugopalmallikarjuna khargepower sharingRahul Gandhisoniya gandhi
0 FacebookTwitterPinterestEmail
KM Shivaraju

previous post
ಸಿದ್ದರಾಮಯ್ಯ ಈಗಲೂ ಜನನಾಯಕ: ಸಮೀಕ್ಷೆ
next post
ಯತೀಂದ್ರ ಹೇಳಿಕೆಗೆ ಶಿವಕುಮಾರ್ ಬಣ ಗರಂ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ