Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

5 ವರ್ಷ ಮುಖ್ಯಮಂತ್ರಿ ಆಗಿರಲು ಜನರ ಆಶೀರ್ವಾದ

by admin December 16, 2025
written by admin December 16, 2025 0 comments 1 minutes read
0FacebookTwitterPinterestEmail
182

ಬೆಳಗಾವಿ,ಸುವರ್ಣವಿಧಾನಸೌಧ:’ನಾನು ಹೋದರೆ, ಹೋದೇನು’ ಎಂಬ ಕನಕದಾಸರ ನುಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ನೆನಪಿಸಿ, ನಮ್ಮ ಸರ್ಕಾರ ಸದೃಢವಾಗಿರುತ್ತದೆ ಎಂದಿದ್ದಾರೆ.

ಅಧಿಕಾರ ಹಂಚಿಕೆ ಕುರಿತಂತೆ ಪ್ರತಿಪಕ್ಷದವರು ಎತ್ತಿದ ಪ್ರಸ್ತಾವಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ, ಈಗಲೂ ನಾನೇ ಮುಖ್ಯಮಂತ್ರಿ, ವರಿಷ್ಠರು ಹೇಳುವತನಕವೂ ನಾನೇ ಮುಖ್ಯಮಂತ್ರಿ ಎಂದು ಒತ್ತಿ ಒತ್ತಿ ಹೇಳಿ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರನ್ನು ಮೂದಲಿಸಿದರು.

ಷೇರು ಧನ ತಾರತಮ್ಯ

ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಷೇರು ಧನ ಕೊಡುವ ವಿಚಾರದಲ್ಲಿ ತಾರತಮ್ಯ ಆಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿ ಹಾಗೂ ಅವರ ಬಣದ ರಂಗನಾಥ್ ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, ರಂಗನಾಥ್ ನಮ್ಮ ಮೇಲೆ ವಿಶ್ವಾಸವಿಡಿ, ತಾರತಮ್ಯ ಆಗಿದ್ದರೆ ಪರಿಹರಿಸುತ್ತೇವೆ ಎಂದು ಹೇಳುತ್ತಿದ್ದಂತೆಯೇ, ಪ್ರತಿಪಕ್ಷ ನಾಯಕ ಆರ್.ಅಶೋಕ್, ತಾರತಮ್ಯ ಬೇಕೆಂತಲೇ ಮಾಡಿದ್ದೀರಿ ಎಂದು ದೂರಿದರು.

ನೀವು ಊರಿಯುತ್ತಿರುವ ಬೆಂಕಿಗೆ ತುಪ್ಪ ಹಾಕಬೇಡಿ ಎಂದು ಸಿದ್ದರಾಮಯ್ಯ ಮಾತು ಮುಗಿಸುತ್ತಿದ್ದಂತೆ, ಹಾಗಾದರೆ, ನಿಮ್ಮಲ್ಲಿ ಬೆಂಕಿ ಊರಿಯುತ್ತಿದೆಯೇ ಎಂದು ಅಶೋಕ್ ಕೆಣಕಿದರು.

ವರಿಷ್ಠರ ನಿರ್ಧಾರವೇ ಅಂತಿಮ

ಈ ಸಂದರ್ಭದಲ್ಲಿ ಕನಕದಾಸರ ನುಡಿಯನ್ನು ನೆನಪಿಸಿ, ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ, ಕಾಂಗ್ರೆಸ್‌ನಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ, ಆದರೆ, ಬಿಜೆಪಿ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತವಿಲ್ಲ, ಅವರಿಗೆ ಅಸೂಯೆ ಕಾಡುತ್ತಿದೆ.

ನಮ್ಮ ಸರ್ಕಾರ ಜನರಿಗೆ ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ 2028ರ ಚುನಾವಣೆಯಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ.

2013 ಹಾಗೂ 2023ರಲ್ಲಿಯೂ ಕಾಂಗ್ರೆಸ್‌ಗೆ ಜನ ಆಶೀರ್ವಾದ ಮಾಡಿದ್ದಾರೆ, ಆದರೆ, ಬಿಜೆಪಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ, ಭವಿಷ್ಯದಲ್ಲೂ ದೊರೆಯುವುದಿಲ್ಲ, ನೀವು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರುತ್ತೀರಿ.

ಉರಿಯುವುದರ ಮೇಲೆ ಉಪ್ಪು ಹಾಕಬಾರದು

ಉರಿಯುವುದರ ಮೇಲೆ ಉಪ್ಪು ಹಾಕಬಾರದು ಎಂಬ ಗಾದೆ ಮಾತಿದೆ, ಆದರೆ, ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು.

ವಿರೋಧಪಕ್ಷ ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರು ಯಾರೂ ಪ್ರಚೋದಿತರಾಗುವುದಿಲ್ಲ, ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳುಹಿಸಿದ್ದಾರೆ, 140 ಶಾಸಕರು ನಮ್ಮೊಂದಿಗಿದ್ದಾರೆ, ವಿರೋಧಪಕ್ಷ ಹುಳಿ ಹಿಂಡುವ ಅಗತ್ಯವಿಲ್ಲ.

ಜನರ ನಾಡಿ ಮಿಡಿತ ತಿಳಿದಿದೆ

ಜನರ ನಾಡಿ ಮಿಡಿತ ಸರ್ಕಾರಕ್ಕೆ ತಿಳಿದಿದೆ, ಕರ್ನಾಟಕದ ಜನತೆ ಬಿಜೆಪಿಯನ್ನು ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ.

2008, 2018ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ, ರಾಜ್ಯದ ಜನ ಅವರಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ, 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಸರ್ಕಾರ ರಚಿಸಲಾಯಿತು, ಆದರೆ, ಬಿಜೆಪಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
belagavi assemblycm siddramaiahpeople's mandate
0 FacebookTwitterPinterestEmail
admin

previous post
ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ ತರುವ ಬದ್ಧತೆ
next post
ಸುಳ್ಳು ಕೇಸ್ ದಾಖಲಿಸಿ ಬಿಜೆಪಿ ದ್ವೇಷ ರಾಜಕಾರಣ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ