Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿಕಾರ ಹಸ್ತಾಂತರ: ವರಿಷ್ಠರ ಕರೆಗೆ ಕಾಯುತ್ತಿದ್ದೇವೆ

by admin December 20, 2025
written by admin December 20, 2025 0 comments 2 minutes read
0FacebookTwitterPinterestEmail
130

ಬೆಂಗಳೂರು:ಅಧಿಕಾರ ಹಸ್ತಾಂತರ ಕುರಿತು ಚರ್ಚೆ ನಡೆಸಲು ದೆಹಲಿ ವರಿಷ್ಠರ ಕರೆಗೆ ನಾನು ಮತ್ತು ಮುಖ್ಯಮಂತ್ರಿ ಸಿದ್ದಾರಾಮಯ್ಯ ಕಾಯುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರು ನಮ್ಮಿಬ್ಬರನ್ನೂ ಸಂಪರ್ಕಿಸಿ, ನಾವು ಕರೆದಾಗ ದೆಹಲಿಗೆ ಬನ್ನಿ ಎಂಬ ಆದೇಶ ನೀಡಿದ್ದಾರೆ, ಅವರ ಕರೆಗಾಗಿ ಕಾಯುತ್ತಿದ್ದೇವೆ.

ಸೂಕ್ತ ಸಮಯದಲ್ಲಿ ಕರೆಸಲಿದ್ದಾರೆ

ನಮ್ಮ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಮತ್ತು ನನಗೆ, ಇಬ್ಬರಿಗೂ ಏನೋ ಹೇಳಿದ್ದಾರೆ, ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದಿದ್ದಾರೆ, ಆಗ ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದರು.

ಹೈಕಮಾಂಡ್ ನಾಯಕರ ಭೇಟಿ ಮಾಡುವ ವಿಷಯ ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ, ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ, ನಾನು ಕದ್ದುಮುಚ್ಚಿ ಹೋಗುವುದಿಲ್ಲ ಎಂದರು.

ನಾಗಸಾಧುಗಳು ಮನೆಗೆ ಬಂದು ಆಶೀರ್ವಾದ ಮಾಡಿದ್ದಾರೆ, ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ, ರಾಜಕೀಯದಲ್ಲಿರುವ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ಜನರೂ ಬೇಕು.

ಧಾರ್ಮಿಕ ಕೇಂದ್ರಗಳಿಗೂ ನೆರವು

ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ, ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಹಾಕಿದ್ದ ಚಾರ್ಜ್‌ಶೀಟ್ ಕೋರ್ಟ್‌ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್‌ಐಆರ್ ಬಾಕಿ ಉಳಿದಿದೆ, ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂಬುದನ್ನು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ.

ನನಗೆ ನೋಟಿಸ್ ನೀಡಿರುವ ಸಂಬಂಧ ಮಂಗಳವಾರ ದೆಹಲಿಗೆ ಹೋದಾಗ ಪೊಲೀಸರನ್ನು ಭೇಟಿ ಮಾಡುವೆ.

ಕೇಂದ್ರ ಜಲಶಕ್ತಿ ಸಚಿವರ ಸಭೆ

ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರ ಮಂಗಳವಾರ ಸಭೆ ಕರೆದಿದ್ದು, ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರ ಚರ್ಚೆ ಮಾಡುವೆ.

ಇದೇ ವೇಳೆ ಕೇಂದ್ರ ಅರಣ್ಯ, ನಗರಾಭಿವೃದ್ಧಿ ಸಚಿವರನ್ನೂ ಭೇಟಿ ಮಾಡಲು ಸಮಯ ಕೇಳಿರುವೆ, ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ, ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು, ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಯನ್ನೂ ಭೇಟಿ ಮಾಡುವೆ ಎಂದರು.

ವರಿಷ್ಠರ ಆದೇಶದ ಮೇರೆಗೆ ಸಿದ್ದರಾಮಯ್ಯ ಮತ್ತು ನಾನು, ಉಪಹಾರ ಮತ್ತು ಭೋಜನಕೂಟ ಸಂದರ್ಭದಲ್ಲಿ ಇಬ್ಬರೂ ಏನು ಚರ್ಚೆ ಮಾಡಿದ್ದೇವೆ ಎಂಬುದು ನಮ್ಮಿಬ್ಬರಿಗೆ ಗೊತ್ತಿದೆ.

ಕದ್ದು ಮುಚ್ಚಿ ಹೋಗುವುದಿಲ್ಲ

ಡಿಸೆಂಬರ್ 24 ಇಲ್ಲವೇ 27ರಂದು ನಿಮ್ಮಿಬ್ಬರನ್ನು ದೆಹಲಿಗೆ ಬರಲು ಸೂಚಿಸಿದ್ದಾರಾ ಎಂಬ ಪ್ರಶ್ನೆಗೆ ನಾನೇನು ಕದ್ದು ಮುಚ್ಚಿ ಹೋಗುವುದಿಲ್ಲ, ವರಿಷ್ಠರ ಆಹ್ವಾನಕ್ಕೆ ಕಾಯುತ್ತಿದ್ದೇವೆ.

ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಸಚಿವರು ಡಿಸೆಂಬರ್ 23ರಂದು ಸಭೆ ಕರೆದಿದ್ದು ದೆಹಲಿಗೆ ತೆರಳುತ್ತಿರುವೆ ಎಂದರು.

ಜರ್ಮನಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಡಿಸೆಂಬರ್ 23ರಂದು ದೆಹಲಿಗೆ ಹಿಂತಿರುಗಲಿದ್ದಾರೆ.

ಮತ್ತೆ ವಿದೇಶ ಪ್ರವಾಸ


ಡಿಸೆಂಬರ್ 24ರಂದು ಒಂದು ದಿನ ಮಾತ್ರ ದೆಹಲಿಯಲ್ಲಿ ಉಳಿದು ಮತ್ತೆ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ರಾಹುಲ್ ಜನವರಿ 3ಕ್ಕೆ ಹಿಂತಿರುಗಿ 14ರವರೆಗೆ ದೆಹಲಿಯಲ್ಲೇ ಇರಲಿದ್ದಾರೆ, ಆ ನಂತರ ಮತ್ತೆ ವಿದೇಶ ಪ್ರವಾಸ ನಿಗದಿಯಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲವನ್ನು ಡಿಸೆಂಬರ್ 24 ಇಲ್ಲವೇ ಜನವರಿ ಮೊದಲ ವಾರದಲ್ಲಿ ಬಗೆಹರಿಸಬೇಕಿದೆ.

ಸಿದ್ದರಾಮಯ್ಯ ವಿಧಾನಮಂಡಲದ ಅಧಿವೇಶನ ಮುಗಿದ ನಂತರವೂ ಬೆಳಗಾವಿಯ ಸರ್ಕೀಟ್ ಹೌಸ್‌ನಲ್ಲಿ ತಮ್ಮ ಆಪ್ತರೊಂದಿಗೆ ಎರಡು-ಮೂರು ಸುತ್ತಿನ ಚರ್ಚೆ ನಡೆಸಿ ಶನಿವಾರ ಸಂಜೆ ನಗರಕ್ಕೆ ಹಿಂತಿರುಗಿದ್ದಾರೆ.

ಶಿವಕುಮಾರ್ ಶುಕ್ರವಾರ ಬೆಳಗಾವಿ ಅಧಿವೇಶನ ಕಲಾಪದಲ್ಲಿ ಪಾಲ್ಗೊಳ್ಳದೆ, ದೇವಾಲಯಗಳಿಗೆ ತೆರಳಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commanddcm d k shivakumarpower sharingwaiting for delhi call
0 FacebookTwitterPinterestEmail
admin

previous post
ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಒಪ್ಪಂದವೇ ಆಗಿಲ್ಲ
next post
ವರಿಷ್ಠರು ಗೊಂದಲ ನಿವಾರಿಸುವ ಸಂದೇಶ ನೀಡಿದ್ದಾರೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ