Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ದಾಖಲಿ “ಸಿದ್ದು”!

by admin January 6, 2026
written by admin January 6, 2026 0 comments 3 minutes read
0FacebookTwitterPinterestEmail
157

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ದಾಖಲೆ ಪುಸ್ತಕದಲ್ಲಿ ಬರೆದಿರುವುದು ಕೇವಲ ದಿನಗಳ ಸಂಖ್ಯೆಯನ್ನೇ ಹೊರತು, ಸಾಧನೆಯ ಅಕ್ಷರಗಳನ್ನಲ್ಲ, ಅವರ ತುಘಲಕ್ ಆಡಳಿತದ ದುಸ್ಥಿತಿಯ ದಿನಗಳನ್ನು ಕನ್ನಡಿಗರು ಎಂದಿಗೂ ಮರೆಯುವುದಿಲ್ಲ, ಕ್ಷಮಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಈ ಸಂಬಂಧ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು, ’ದಾಖಲೆ ಬರೆದ “ಅಭಿನವ ಅರಸು”ಗೆ ಅಭಿನಂದನೆಗಳು, ನಿಮ್ಮ ಆಡಳಿತದಲ್ಲಿನ ವೈಫಲ್ಯದ ದಾಖಲೆ ಸಾಧನೆಗಳ ಮೇಲೂ ಒಮ್ಮೆ ಕಣ್ಣಾಡಿಸುವುದು ಉತ್ತಮ ಎಂದಿದೆ.

ಮಿತಿ ಮೀರಿದ ಭ್ರಷ್ಟಾಚಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿನ ವೈಫಲ್ಯಗಳ ಪಟ್ಟಿ ಮಾಡಿರುವ ಬಿಜೆಪಿ, ಮೊದಲ ಸಾಧನೆ 7 ವರ್ಷ 240 ದಿನಗಳ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ, 2ನೇ ದಾಖಲೆ ಸಾಲದ ಹೊರೆ ಅಧಿಕವಾಗಿದೆ.

ಮೂರನೇ ದಾಖಲೆ ಅಭಿವೃದ್ಧಿ ಶೂನ್ಯವಾಗಿದೆ, 4ನೇ ದಾಖಲೆ ಕರುನಾಡು ಗೂಂಡಾ ರಾಜ್ಯವಾಗಿದೆ, 5ನೇ ದಾಖಲೆ ಶಾಲೆಗಳು ಪಾಳು ಬಿದ್ದಿದೆ, 6ನೇ ದಾಖಲೆ ಜಲಾಶಯಗಳು ಹೂಳು ತುಂಬಿವೆ.

ಏಳನೇ ದಾಖಲೆ ನೇಮಕಾತಿ ನಡೆಯದಾಗಿದೆ, 8ನೇ ದಾಖಲೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ, 9ನೇ ದಾಖಲೆ ರೈತರ ಆತ್ಮಹತ್ಯೆ ಲೆಕ್ಕಕ್ಕೆ ಸಿಗದಾಗಿದೆ.

ಮಿತಿಮೀರಿದ ಓಲೈಕೆ ರಾಜಕಾರಣ

ಹತ್ತನೇ ದಾಖಲೆ ರಾಜ್ಯದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ, 11ನೇ ದಾಖಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಮುಟ್ಟಿದೆ, 12ನೇ ದಾಖಲೆ ಓಲೈಕೆ ರಾಜಕಾರಣ ಮಿತಿಮೀರಿದೆ.

ಇದಿಷ್ಟೇ ಅಲ್ಲ, ಸಿದ್ದರಾಮಯ್ಯನವರೇ ಪಟ್ಟಿ ಇನ್ನೂ ಮುಂದುವರಿದಿದೆ.., ಮುಖ್ಯಮಂತ್ರಿ ಆದ ಕೆಲವು ದಿನಗಳಲ್ಲಿಯೇ ಮತಾಂಧ ಟಿಪ್ಪು ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ನಿರ್ಧರಿ “ಸಿದ್ದು”.

ಮುಖ್ಯಮಂತ್ರಿ ಆದ ಕೆಲವು ದಿನಗಳಲ್ಲಿಯೇ ಕರ್ನಾಟಕಕ್ಕೆ ಕಂಡು ಕೇಳರಿಯದಂತಹ ಬರಗಾಲ ಆವರಿ”ಸಿದ್ದು”.

ಸಮರ್ಥವಾಗಿದ್ದ ಲೋಕಾಯುಕ್ತಕ್ಕೆ ಮೊಳೆ ಹೊಡೆದು ದುರ್ಬಲ ಎಸಿಬಿ ಸ್ಥಾಪಿ”ಸಿದ್ದು”.

ದಕ್ಷ ಹಿರಿಯ ಅಧಿಕಾರಿಗಳಿಗೆ ಸಾವಿನ ಭಾಗ್ಯ ಕರುಣಿ”ಸಿದ್ದು”.

ಅತಿಯಾದ ಓಲೈಕೆ ರಾಜಕಾರಣಕ್ಕೆ ಕುಮ್ಮಕ್ಕು ನೀಡಿ”ಸಿದ್ದು”.

ಮಹಾದಾಯಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿ”ಸಿದ್ದು”.

ರಾಜ್ಯದಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಗೆ ಅನುಕೂಲವಾಗುವಂತಹ ವಾತಾವರಣ ನಿರ್ಮಿ”ಸಿದ್ದು”.

ಮುಖ್ಯಮಂತ್ರಿ ಆದ ಮೊದಲ ಅವಧಿಯಲ್ಲಿ ಕರ್ನಾಟಕದ 4,257 ರೈತರಿಗೆ ಆತ್ಮಹತ್ಯೆ ಭಾಗ್ಯ ಕರುಣಿ”ಸಿದ್ದು”.

ವೀರಶೈವ-ಲಿಂಗಾಯತ ಎಂದು ಸಮುದಾಯದೊಳಗೆ ಬೆಂಕಿ ಹಚ್ಚಿ”ಸಿದ್ದು”.

ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿ”ಸಿದ್ದು”.

ಸಮಾಜವಾದಿ ಎಂದು ಹೇಳಿ ದುಬಾರಿ ಹ್ಯುಬ್ಲೋಟ್ ವಾಚ್ ಧರಿ”ಸಿದ್ದು”.

ಗೌಡ-ಲಿಂಗಾಯತ-ಬ್ರಾಹ್ಮಣ(ಜಿಲೇಬಿ)ಫೈಲುಗಳನ್ನು ದೂರವಿರಿ”ಸಿದ್ದು”.

ಅರ್ಕಾವತಿ ಲೇಔಟ್ ನ ರೀ-ಡೂ ಹಗರಣ ಮಾಡಿ”ಸಿದ್ದು”.

ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನ ಮಾಡಿ”ಸಿದ್ದು”.

ಅತಿ ಹೆಚ್ಚು ಸಾಲ ಮಾಡಿ ಕರ್ನಾಟಕವನ್ನು ದಿವಾಳಿ ಮಾಡಿ”ಸಿದ್ದು”.

ಮುಡಾದಲ್ಲಿ ಅಕ್ರಮವಾಗಿ 14 ಸೈಟು ಕಬಳಿ”ಸಿದ್ದು”.

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿಯನ್ನು ಎಗರಿ”ಸಿದ್ದು”.

ಕಾವೇರಿಯನ್ನು ಸ್ಟಾಲಿನ್ ನಾಡಿಗೆ ಹರಿ”ಸಿದ್ದು”.

ಕನ್ನಡಿಗರನ್ನು ಕಡೆಗಣಿಸಿ ವಯನಾಡಿಗೆ ಮನೆ ಹಂಚಿ”ಸಿದ್ದು”.

ತಮ್ಮ ವೈಫಲ್ಯಗಳಿಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿ”ಸಿದ್ದು”

ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿ”ಸಿದ್ದು”.

ಭಯೋತ್ಪಾದಕರಿಗೆ ಅಮಯಾಕ ಪಟ್ಟ ಕಟ್ಟಲು ಪೂರಕ ವಾತಾವರಣ ಕಲ್ಪಿ”ಸಿದ್ದು”.

ಮತಾಂಧ ಔರಂಗಜೇಬನ ಕಟೌಟ್ ಹಾಕಲು ಪ್ರೇರೆಪಿ”ಸಿದ್ದು”.

ದಲಿತರ ಪಾಲಿನ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಹಣವನ್ನು ದುರ್ಬಳಕೆ ಮಾಡಿ”ಸಿದ್ದು”.

ಮಕ್ಕಳಿಗೆ ಹುಳುಯುಕ್ತ ಊಟವನ್ನು ಹಾಕಿ”ಸಿದ್ದು”.

ಪಂಚಮಸಾಲಿಗಳ ಮೇಲೆ ಲಾಠಿಚಾರ್ಜ್ ಮಾಡಿ”ಸಿದ್ದು”

ಬರ ಹಾಗೂ ನೆರೆ ನಿರಾಶ್ರಿತರಿಗೆ ಪರಿಹಾರ ನೀಡದೆ ವಂಚಿ”ಸಿದ್ದು”.

ಕಾರ್ಮಿಕರಿಗೆ ನೀಡುವ ಕಿಟ್ ನಲ್ಲಿ ಹಗರಣ ಮಾಡಿ”ಸಿದ್ದು”.

ಬಡವರಿಗೆ ಹಂಚುವ ಮನೆಗೆ ಲಂಚ ಕೇಳಿ”ಸಿದ್ದು”.

ಎಸ್‌ಡಿಪಿಐ/ಪಿಎಫ್‌ಐ ಮತಾಂಧರ ಕೇಸ್ ವಜಾ ಮಾಡಿ”ಸಿದ್ದು”.

ಗುತ್ತಿಗೆದಾರರ ಬಳಿ 60 ಪರ್ಸೆಂಟ್ ಕಮಿಷನ್ ಗೆ ಕೈ ಚಾಚಿ”ಸಿದ್ದು”.

ವಕ್ಫ್ ಹೆಸರಿನಲ್ಲಿ ರೈತರ ಭೂಮಿ ಕಬಳಿಕೆಗೆ ಸ್ಕೆಚ್ ಹಾಕಿ”ಸಿದ್ದು”.

ಅಬಕಾರಿ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ಲಂಚಾವತಾರ ಸ್ಥಾಪಿ”ಸಿದ್ದು”.

ಗೃಹಲಕ್ಷ್ಮಿ ಹಣವನ್ನು ಎಗರಿ”ಸಿದ್ದು”.

ಎಲ್ಲಾ ವಸ್ತುಗಳ ಬೆಲೆಯೇರಿಕೆ ಮಾಡಿ”ಸಿದ್ದು”

ರೈತರ ಬೋರ್ವೆಲ್‌ಗಳ ಟಿಸಿ ಶುಲ್ಕ ಏರಿ”ಸಿದ್ದು”.

ಜನೌಷಧಿ ಕೇಂದ್ರಗಳನ್ನು ಮುಚ್ಚಲು ಷಡ್ಯಂತ್ರ ರೂಪಿ”ಸಿದ್ದು”.

ಸ್ಮಾರ್ಟ್ ಮೀಟರ್ ಹಗರಣದ ಮೂಲಕ ಜನರನ್ನು ದೋಚಲು ಯತ್ನಿ”ಸಿದ್ದು”.

ಗಂಧದ ನಾಡಾಗಿದ್ದ ಕರ್ನಾಟಕವನ್ನು ನಶೆಯ ನಾಡನ್ನಾಗಿ”ಸಿದ್ದು”.

ದಸರಾ ಕಲಾವಿದರ ಬಳಿ ಮಾಮೂಲು ಕೇಳಿ”ಸಿದ್ದು”.

ಹಿಂದೂ ದೇವಾಲಯಗಳ ಹುಂಡಿ ಕಾಸನ್ನು ಎಗರಿ”ಸಿದ್ದು”.

ಸಾರಿಗೆ ಇಲಾಖೆಗೆ ಡಕೋಟಾ ಬಸ್ಸುಗಳನ್ನು ಕರುಣಿ”ಸಿದ್ದು”.

ಕೊಗಿಲು ಅಕ್ರಮವಾಸಿಗಳಿಗೆ ಐಷಾರಾಮಿ ಫ್ಲ್ಯಾಟ್ ಹಂಚಿ”ಸಿದ್ದು”.

ನೀರಿನ ದರ ಏರಿ”ಸಿದ್ದು” – ಕಸಕ್ಕೆ ಟ್ಯಾಕ್ಸ್ ಹಾಕಿ”ಸಿದ್ದು”.

ಬಾಣಂತಿಯರಿಗೆ ಸಾವಿನ ಭಾಗ್ಯ ಕರುಣಿ”ಸಿದ್ದು”.

ಅನ್ನಭಾಗ್ಯದ 10 ಕೆಜಿ ಅಕ್ಕಿ ನೀಡದೆ ವಂಚಿ”ಸಿದ್ದು”.

ದ್ವೇಷ ಭಾಷಣ ಕಾಯ್ದೆ ಜಾರಿಗೆ ತರಿ”ಸಿದ್ದು”.

ಆರ್‌ಸಿಬಿ ವಿಜಯೋತ್ಸವದಲ್ಲಿ ಕನ್ನಡಿಗರ ಕೊಲೆ ಮಾಡಿ”ಸಿದ್ದು”.

ಬಡವರಿಗೆ ಕಲುಷಿತ ನೀರು ಕುಡಿಸಿ ಸಾಯಿ”ಸಿದ್ದು”.

ಪರಪ್ಪನ ಅಗ್ರಹಾರವನ್ನು ಐಷಾರಾಮಿ ರೆಸಾರ್ಟ್ ಆಗಿ”ಸಿದ್ದು”.

ಇವಿಷ್ಟು ಸಾಧನೆಗಳು ನಮ್ಮ ಕಣ್ಣ ಮುಂದೆ ಕಾಣಿ”ಸಿದ್ದು”

ಇವುಗಳನ್ನು ಹೊರತುಪಡಿಸಿ ಯಾವುದಾದರೂ ಸಾಧನೆ ಬಿಟ್ಟುಹೋದಲ್ಲಿ ದಯವಿಟ್ಟು ನಮೂದಿಸತಕ್ಕದ್ದು ಎಂದು ಬಿಜೆಪಿ ಕುಹಕವಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp tweetcm siddaramaiahcongres partyformer cm devaraj arasurecord administration
0 FacebookTwitterPinterestEmail
admin

previous post
ಅಧಿಕಾರ ಹಂಚಿಕೆ ವಿವಾದಕ್ಕೆ ಸಿದ್ದರಾಮಯ್ಯ ಮೊಳೆ !
next post
ಅರಸು-ಸಿದ್ದರಾಮಯ್ಯ ಆಡಳಿತ ಹೋಲಿಕೆ ಸರಿಯಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ