Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಿವಕುಮಾರ್ ಬಣ !

by KM Shivaraju January 19, 2026
written by KM Shivaraju January 19, 2026 0 comments 1 minutes read
0FacebookTwitterPinterestEmail
110

ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಮುನ್ನ ಬಂಡಾಯ ಬಾವುಟ

ಬೆಂಗಳೂರು:ಅಧಿಕಾರ ಹಸ್ತಾಂತರ ತೀರ್ಮಾನ ಕೈಗೊಳ್ಳುವಲ್ಲಿ ವರಿಷ್ಠರ ವಿಳಂಬ ಧೋರಣೆಯಿಂದ ತಾಳ್ಮೆ ಕಳೆದುಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ಬುಧವಾರವೇ ಸಭೆ ಸೇರಿ ಬಂಡಾಯ ಬಾವುಟ ಹಾರಿಸಲಿದ್ದಾರೆ.

ಗುರುವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಪ್ರಾರಂಭವಾಗುತ್ತಿದ್ದು, ಅದಕ್ಕೂ ಮುನ್ನಾ ದಿನವೇ ಸಭೆ ಸೇರಿ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಒತ್ತಾಯಿಸಿ ವರಿಷ್ಠರಿಗೆ ಸಂದೇಶ ರವಾನಿಸಲಿದ್ದಾರೆ.

ಬಂಡಾಯ ಬಣಕ್ಕೆ ವೇದಿಕೆ

ಬೆಂಬಲಿಗ ಶಾಸಕರ ಒತ್ತಾಯಕ್ಕೆ ಮಣಿದಿರುವ ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್, ಬಂಡಾಯ ಬಣಕ್ಕೆ ವೇದಿಕೆ ಸಿದ್ಧಪಡಿಸುತ್ತಿದ್ದಾರೆ,

ಆದರೆ, ಅಂದಿನ ಸಭೆಯಲ್ಲಿ ಸಹೋದರರಿಬ್ಬರ ಅನುಪಸ್ಥಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ಮತ್ತು ದೆಹಲಿಯಲ್ಲಿ ಕಾರ್ಯಕ್ರಮ ಇರುವುದರಿಂದ ತಾವು ದಾವೋಸ್ ಪ್ರವಾಸ ರದ್ದುಗೊಳಿಸುತ್ತಿರುವುದಾಗಿ ಹೇಳಿಕೆ ನೀಡಿದ್ದ ಶಿವಕುಮಾರ್, ಹಠಾತ್ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ದಾವೋಸ್ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಶಿವಕುಮಾರ್ ವಿದೇಶ ಪ್ರವಾಸ

ತಮ್ಮ ಬೆಂಬಲಿತ ಶಾಸಕರ ಸಭೆ ಸಂದರ್ಭದಲ್ಲಿ ತಾವು ನಗರದಲ್ಲೇ ಉಳಿದರೆ ಇದರ ಹಿಂದೆ ತಾವಿದ್ದೇವೆ ಎಂಬ ಸಂದೇಶ ಹೋಗುವುದೆಂಬ ಕಾರಣಕ್ಕೆ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ.

ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್‌ನ ಸುಮಾರು 40ರಿಂದ 50 ಮಂದಿ ವಿಧಾನಸಭಾ ಸದಸ್ಯರು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಸಭೆ ಸೇರಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ನಮಗೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ, ಆದರೆ, ಕರ್ನಾಟಕದಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ನಡೆದ ಒಪ್ಪಂದದಂತೆ ಸಿದ್ದರಾಮಯ್ಯ ಎರಡೂವರೆ ವರ್ಷ ಆಡಳಿತ ಪೂರ್ಣಗೊಂಡಿದೆ.

ಉಳಿದ ಅವಧಿಗೆ ಶಿವಕುಮಾರ್

ಉಳಿದ ಅವಧಿಗೆ ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಬೇಕು ಎಂಬುದೇ ನಮ್ಮ ಒತ್ತಾಯ ಎಂದು ತಿಳಿಸಲಿದ್ದಾರೆ.

ಕಳೆದ ನವೆಂಬರ್ 20ಕ್ಕೆ ಸಿದ್ದರಾಮಯ್ಯ ಅವಧಿ ಪೂರ್ಣಗೊಂಡ ನಂತರವೂ ಅಧಿಕಾರ ಹಸ್ತಾಂತರ ಮಾಡಲು ಮುಂದಾಗುತ್ತಿಲ್ಲ, ಈ ಬಗ್ಗೆ ಶಿವಕುಮಾರ್ ಅವರೇ ಎಐಸಿಸಿಯ ಎಲ್ಲಾ ಮುಖಂಡರ ಗಮನಕ್ಕೆ ತಂದರೂ ಆಗಿರುವ ಒಪ್ಪಂದ ಜಾರಿ ಮಾಡುತ್ತಿಲ್ಲ.

ಸಿದ್ದರಾಮಯ್ಯ ಅವರಷ್ಟೇ ಶಿವಕುಮಾರ್ ಸಹಾ ವಿಧಾನಸಭಾ ಚುನಾವಣೆಯಲ್ಲಿ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ, ಈ ಹಿನ್ನೆಲೆಯಲ್ಲಿ ಅವರಿಗೆ ಪ್ರತಿಫಲ ದೊರೆಯಲೇಬೇಕು.

ಸಾಕಷ್ಟು ಶಾಸಕರ ಬೆಂಬಲ

ಶಿವಕುಮಾರ್ ಅವರಿಗೆ ಸಾಕಷ್ಟು ಶಾಸಕರ ಬೆಂಬಲ ಇದೆ ಎಂಬುದನ್ನು ತೋರಿಸಲು ನಾವು ಸೇರಿದ್ದೇವೆಯೇ ಹೊರತು ಪಕ್ಷದ ವಿರುದ್ಧವಲ್ಲ.

ಅಗತ್ಯ ಬಿದ್ದರೆ ಈ ಅಧಿವೇಶನದಲ್ಲೇ ಬಲ ಪ್ರದರ್ಶನಕ್ಕೂ ಸಿದ್ಧ ಎಂದು ಶಿವಕುಮಾರ್ ಬಣ ವರಿಷ್ಠರಿಗೆ ಪರೋಕ್ಷ ಎಚ್ಚರಿಕೆ ನೀಡಲಿದೆ.

ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನ ವೇಳೆ ಸಿದ್ದರಾಮಯ್ಯ ಪೂರ್ಣಾವಧಿ ಆಡಳಿತ ನಡೆಸುವುದಾಗಿ ಸಂದೇಶ ರವಾನಿಸಿದ್ದರು.

ಹಠಾತ್ತಾಗಿ ಸದನದಲ್ಲಿ ಸಿದ್ದರಾಮಯ್ಯ ನೀಡಿದ ಹೇಳಿಕೆ ಶಿವಕುಮಾರ್ ಅವರಿಗೆ ಬೇಸರ ತರಿಸಿದ ಹಿನ್ನೆಲೆಯಲ್ಲಿ ಇದೀಗ, ವಿಧಾನಮಂಡಲ ಅಧಿವೇಶನದಲ್ಲೇ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres high commandd k sureshdcm d k shivakumarh c balakrishna
0 FacebookTwitterPinterestEmail
KM Shivaraju

previous post
ಜಂಟಿ ಅಧಿವೇಶನ ನಂತರ ಶಿವಕುಮಾರ್‌ಗೆ ಸಿಹಿ ಸುದ್ದಿ !
next post
ಅಧಿಕಾರವೂ ಶಾಶ್ವತ ಅಲ್ಲ, ತಾಳ್ಮೆಯೂ ಶಾಶ್ವತ ಅಲ್ಲ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ