Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮೋಹನ್‌ದಾಸ್ ಪೈಗೆ ರಾಮಲಿಂಗಾ ರೆಡ್ಡಿ ಸವಾಲು

by admin January 30, 2026
written by admin January 30, 2026 0 comments 2 minutes read
0FacebookTwitterPinterestEmail
168

ಬಿಜೆಪಿ ಮನಃಸ್ಥಿತಿ ಬಿಟ್ಟು ಜನಸಾಮಾನ್ಯರ ಬದುಕಿನೆಡೆ ಗಮನಹರಿಸಿ

ಬೆಂಗಳೂರು:ಬಿಜೆಪಿ ಮನಃಸ್ಥಿತಿ ಬಿಟ್ಟು ಜನಸಾಮಾನ್ಯರ ಬದುಕಿನ ಕಡೆ ಗಮನಹರಿಸಿ ಎಂದು ಉದ್ಯಮಿ ಮೋಹನ್‌ದಾಸ್ ಪೈ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಿವಿಮಾತು ಹೇಳಿದ್ದಾರೆ.

ರಸ್ತೆಗಳ ಬಗ್ಗೆ ತಕರಾರು ಎತ್ತುತ್ತಿದ್ದ ಪೈ, ಸಾರಿಗೆ ವ್ಯವಸ್ಥೆ ಬಗ್ಗೆ ಎತ್ತಿರುವ ಅಪಸ್ವರಕ್ಕೆ ಉತ್ತರಿಸಿರುವ ರೆಡ್ಡಿ, ಸಾರ್ವಜನಿಕ ಸೇವೆಯನ್ನು ಕೇವಲ ಲಾಭ-ನಷ್ಟದ ಮೂಲಕ ನೀವು ನೋಡುತ್ತೀರಿ, ಆದರೆ, ನಾನು ಅದನ್ನು ನಾಗರಿಕರ ಹಿತದೃಷ್ಟಿಯಿಂದ ನೋಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಪ್ರಶ್ನೆ ಮಾಡಲಿಲ್ಲ

ಈ ಹಿಂದೆ ಬಿಜೆಪಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಸಾರಿಗೆ ಸಂಸ್ಥೆಯ ಯಾವುದೇ ನಿಗಮಗಳಿಗೆ ಹೊಸ ಬಸ್‌ಗಳ ಸೇರ್ಪಡೆ ಆಗಿರಲಿಲ್ಲ, ನಿಗಮಗಳು ಸೊರಗುತ್ತಿದ್ದಾಗ ನೀವು ಒಂದೇ ಒಂದು ಪ್ರಶ್ನೆ ಮಾಡಲಿಲ್ಲ ಏಕೆ ಎಂದು ಪೈ ಅವರನ್ನು ಪ್ರಶ್ನಿಸಿದ್ದಾರೆ.

ಸಾರಿಗೆ ವ್ಯವಸ್ಥೆ ಬಗ್ಗೆ ಟ್ವೀಟ್ ಮೂಲಕ ಅಭಿಪ್ರಾಯ ಹೇಳುವ ಬದಲಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ.

ಜನಪರ ಸರ್ಕಾರ ಉತ್ತಮ ಕೆಲಸ ಮಾಡುತ್ತಿರುವಾಗ ಮಾತ್ರ ನಿಮ್ಮ ಈ ’ಕಾರ್ಪೊರೇಟ್ ಕಾಳಜಿ’ ಎಚ್ಚರಗೊಳ್ಳುವುದು ಏಕೆ, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಸೇರಿದಂತೆ, ಬಿಜೆಪಿ ಆಡಳಿತದ ಯಾವುದಾದರೂ ಒಂದು ರಾಜ್ಯ ಅಥವಾ ನಗರ ಈ ಮಟ್ಟದ ಸಾರಿಗೆ ವ್ಯಾಪ್ತಿ ಮತ್ತು ದಕ್ಷತೆ ಹೊಂದಿದ್ದರೆ ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಪೂರ್ವಾಗ್ರಹಪೀಡಿತ ದೃಷ್ಟಿಕೋನ

ಕಳೆದ ಎರಡು ವರ್ಷಗಳಲ್ಲಿ ನಾವು 5,800ಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಸೇರಿಸಿದ್ದೇವೆ, ಮಾರ್ಚ್ 2026ರ ವೇಳೆಗೆ ಇನ್ನೂ 2,000 ಬಸ್‌ಗಳು ರಸ್ತೆಗಿಳಿಯಲಿವೆ, ನಿಮ್ಮ ದೃಷ್ಟಿಕೋನ ಕೇವಲ ಪೂರ್ವಾಗ್ರಹಪೀಡಿತ.

ರಾಜ್ಯದಲ್ಲಿ ಶೇಕಡಾ 30ರಷ್ಟು ಬಸ್ ಸಂಚಾರ ಮಾರ್ಗಗಳು ನಷ್ಟದಲ್ಲಿದ್ದರೂ, ಹಳ್ಳಿಯ ಸಾಮಾನ್ಯ ಮನುಷ್ಯ ಮತ್ತು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಸುಲಭವಾಗಿ ಸಿಗಲಿ ಎನ್ನುವುದು ನಮ್ಮ ಆಶಯ, ಈ ಕಾರಣಕ್ಕೆ ನಾವು ಅವುಗಳನ್ನು ನಡೆಸುತ್ತಿದ್ದೇವೆ.

ಶೇ.30ರಷ್ಟು ಮಾರ್ಗಗಳು ಲಾಭವೂ ಇಲ್ಲದ, ನಷ್ಟವೂ ಇಲ್ಲದ ಸ್ಥಿತಿಯಲ್ಲಿವೆ, ದೂರ ಪ್ರಯಾಣದ ಬಸ್ ಮಾರ್ಗಗಳಿಂದ ಶೇ.40ರಷ್ಟು ಲಾಭ ಸಿಗುತ್ತಿದೆ, ರಾಜ್ಯದ ಶೇ.98ರಷ್ಟು ಹಳ್ಳಿಗಳಿಗೆ ಬಸ್ ಸಂಪರ್ಕ ಕಲ್ಪಿಸಲಾಗಿದೆ, ಸಮಾಜಕ್ಕೆ ಸೇವೆ ಸಲ್ಲಿಸುವುದು ಹೀಗೆಯೇ ಹೊರತು, ಕೇವಲ ಬೋರ್ಡ್ ಆಫ್ ಡೈರೆಕ್ಟರ್‌ಗಳ ಲಾಭಕ್ಕಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ನಿಗಮಗಳಲ್ಲಿ ಒಟ್ಟು 26,054 ಬಸ್

ಕರ್ನಾಟಕ ಸಾರಿಗೆ ನಿಗಮಗಳು ಒಟ್ಟು 26,054 ಬಸ್‌ಗಳ ಕಾರ್ಯಾಚರಣೆ ಮಾಡುತ್ತಿದೆ, ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 45 ಲಕ್ಷ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದೇವೆ, 7,108 ಬಸ್‌ಗಳ ಪೈಕಿ 1,686 ಎಲೆಕ್ಟ್ರಿಕ್ ಬಸ್‌ಗಳಿವೆ, ದಿನಕ್ಕೆ 13 ಲಕ್ಷ ಕಿ.ಮೀ. ಸಂಚರಿಸುತ್ತಾ 66,000 ಟ್ರಿಪ್ ಪೂರೈಸುತ್ತಿದ್ದೇವೆ, ಇದು ಇಡೀ ಭಾರತದಲ್ಲೇ ಅತಿ ಹೆಚ್ಚು.

ಮೋಹನ್‌ದಾಸ್ ಪೈ ಅವರೇ, ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆ ನಡೆಸಲು ನಮ್ಮ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಒಬ್ಬರೇ ಸಾಕು, ದಯವಿಟ್ಟು ಬನ್ನಿ, ಅವರೊಂದಿಗೆ ನೇರವಾಗಿ ಸತ್ಯಾಸತ್ಯತೆಗಳ ಬಗ್ಗೆ ಚರ್ಚಿಸಿ, ನೀವು ಈ ಸವಾಲು ಸ್ವೀಕರಿಸಲು ಸಿದ್ಧರಿದ್ದೀರಾ ಅಥವಾ ಕೇವಲ ಟ್ವೀಟ್ ಮಾಡುವುದಕ್ಕಷ್ಟೇ ಸೀಮಿತವಾಗುತ್ತೀರಾ ಎಂದಿದ್ದಾರೆ.

ಸಾರಿಗೆ ಸೌಲಭ್ಯ ಕೊರತೆ

ಪೈ ತಮ್ಮ ಟ್ವೀಟ್‌ನಲ್ಲಿ ರಾಮಲಿಂಗಾರೆಡ್ಡಿಯವರೇ ಸಾರಿಗೆ ಸಚಿವರಾಗಿ ನಿಮ್ಮ ಸಿದ್ಧಾಂತ ಮತ್ತು ನಡೆಯಿಂದ ರಾಜ್ಯಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ನೀಡುವಲ್ಲಿ ವಿಫಲರಾಗಿದ್ದೀರಿ, ಸಾರ್ವಜನಿಕರು ಸಾರಿಗೆ ಸೌಲಭ್ಯ ಕೊರತೆಯಿಂದ ಪರದಾಡುತ್ತಿದ್ದಾರೆ, ದಯವಿಟ್ಟು ಖಾಸಗಿ ವಲಯಕ್ಕೆ ಅವಕಾಶ ನೀಡಿ ಎಂಬ ಸಲಹೆ ನೀಡಿದ್ದರು.

ಕಳೆದ ಕೆಲವು ವರ್ಷಗಳಿಂದ ಬಸ್‌ಗಳ ವ್ಯವಸ್ಥೆ ಸರಿಯಿಲ್ಲ, ಬಸ್‌ಗಳ ಸಂಚಾರ ಕಡಿಮೆಯಾಗಿದೆ, ಕೇವಲ ಸರ್ಕಾರಿ ಸಂಸ್ಥೆಗಳೇ ಕೆಲಸ ಮಾಡಬೇಕು ಎಂಬ ನಿಮ್ಮ ಹಠಮಾರಿತನ ಏಕೆ, ಜನರಿಗೆ ಸಾರ್ವಜನಿಕ ಸಾರಿಗೆ ಬೇಕು, ಅದನ್ನು ಯಾರು ಒದಗಿಸುತ್ತಾರೆ ಎಂದು ಪೋಸ್ಟ್ ಮಾಡಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
busesmohan das pairamalinga reddy
0 FacebookTwitterPinterestEmail
admin

previous post
ಸರ್ಕಾರದಿಂದ ರಾಜ್ಯಪಾಲರ ಕಚೇರಿ ಫೋನ್ ಟ್ಯಾಪಿಂಗ್ !
next post
ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ