Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

by KM Shivaraju February 7, 2026
written by KM Shivaraju February 7, 2026 0 comments 2 minutes read
0FacebookTwitterPinterestEmail
145

ಬೆಂಗಳೂರು:ಗ್ಯಾರಂಟಿ ಯೋಜನೆಗಳು ಬದುಕು ಕಟ್ಟುತ್ತಿದ್ದು, ನೀವು ಸಂಪಾದಿಸುವ ಹಣವನ್ನು ಉಳಿತಾಯದಲ್ಲಿ ತೊಡಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಇಂದಿಲ್ಲಿ ಕಿವಿಮಾತು ಹೇಳಿದ್ದಾರೆ.

ಹಣ ಇದ್ದರೆ ಎಲ್ಲರೂ ನಿಮ್ಮನ್ನು ನೋಡುತ್ತಾರೆ, ಇಲ್ಲ ಎಂದರೆ ಯಾರೂ ನಿಮ್ಮ ಬಳಿ ಸುಳಿಯುವುದಿಲ್ಲ.

ಕಷ್ಟಕಾಲದಲ್ಲಿ ಬಳಸಿ

ದೈನಂದಿನ ಬದುಕಿಗೆ ಗ್ಯಾರಂಟಿ ಯೋಜನೆ ಸಹಕಾರಿ ಆಗಿರುವುದರಿಂದ ಹಣ ಉಳಿತಾಯ ಮಾಡಿ ಕಷ್ಟಕಾಲದಲ್ಲಿ ಬಳಸಿಕೊಳ್ಳುವಂತೆ ಸಲಹೆ ಮಾಡಿದರು.

ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಇಂದು ಎಂಎಸ್‌ಐಎಲ್ ಚಿಟ್ಸ್ ಹೊಸ ಸಾಫ್ಟ್‌ವೇರ್ ಹಾಗೂ ಮೊಬೈಲ್ ಆಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾಸಿಕ ಚೀಟಿಗೆ ಹಣ ಹಾಕಿ ಕಳೆದುಕೊಳ್ಳಬೇಡಿ ಎಂದರು.

ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಿಟ್ ಫಂಡ್ ಯೋಜನೆ ಜಾರಿಗೊಳಿಸಿದೆ, ಇಲ್ಲಿ ನಿಮ್ಮ ಹಣ ಹೂಡಿಕೆ ಮಾಡಿದರೆ ಮೋಸ ಆಗುವುದಿಲ್ಲ.

ಬಂಡವಾಳ ಹೂಡಿಕೆಗೂ ಅನುಕೂಲ

ನೀವು ಪಾವತಿಸಿದ ಹಣಕ್ಕೆ ಒಳ್ಳೆಯ ಲಾಭ ಬರುತ್ತದೆ, ಕಷ್ಟ ಕಾಲದಲ್ಲಿ ಉಪಯೋಗ ಆಗಲಿದೆ, ಅಲ್ಲದೆ, ಯಾವುದಾದರೂ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೂ ಅನುಕೂಲವಾಗುತ್ತದೆ.

ಜಾತಿ-ವರ್ಗಗಳ ಬೇಧವಿಲ್ಲದೇ ಜಾರಿಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯದಿಂದ ಉಳಿತಾಯವಾಗುವ ಹಣವನ್ನು ಜನರು, ಅದಲ್ಲೂ ವಿಶೇಷವಾಗಿ ಮಹಿಳೆಯರು ಹೂಡಿಕೆ ಮಾಡಬೇಕು.

ಎಂಎಸ್‌ಐಎಲ್ ಸರ್ಕಾರಿ ಸಂಸ್ಥೆಯಾಗಿದೆ, ಜನರ ಹೂಡಿಕೆಗೆ ಭದ್ರತೆ ಒದಗಿಸುತ್ತದೆ, ತಮ್ಮ ಹೂಡಿಕೆಯ ಕೇವಲ ಶೇ.5ರಷ್ಟು ಲಾಭ ಪಡೆಯುವ ಸಂಸ್ಥೆ ಜನರ ಆರ್ಥಿಕ ಭದ್ರತೆಗೆ ನೆರವಾಗಲಿದೆ.

ವಹಿವಾಟು ಹೆಚ್ಚಿಸುವ ಗುರಿ

ಕೇರಳದಲ್ಲಿ 47,000 ಕೋಟಿ ರೂ. ವಹಿವಾಟು ನಡೆಯುತ್ತದೆ, ಕರ್ನಾಟಕದಲ್ಲಿ ಕೇವಲ 500 ಕೋಟಿ ರೂ. ವ್ಯವಹಾರ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಮೊತ್ತ 10,000 ಕೋಟಿ ರೂ.ಗೆ ವಹಿವಾಟು ಹೆಚ್ಚಿಸುವ ಗುರಿಯನ್ನು ಸಂಸ್ಥೆ ಹೊಂದಿದೆ.

ಶಿಕ್ಷಣ, ಆರೋಗ್ಯ, ಮದುವೆ, ಮನೆ ಖರೀದಿ ಹಾಗೂ ಹೂಡಿಕೆಗಳಿಗೆ ಉಳಿತಾಯ ಮೊತ್ತ ಸುಭದ್ರವಾಗಿರುವ ಗ್ಯಾರಂಟಿ ಇದೆ, ಹಣ ಗಳಿಸುವುದು ಹಾಗೂ ಸುಭದ್ರ ಹೂಡಿಕೆ ಮಾಡುವುದೂ ಮುಖ್ಯ ಎಂದರು.

ಮೈಕ್ರೋ ಫೈನಾನ್ಸ್ ಸಾಲದ ಸುಳಿಯಲ್ಲಿ ಅನೇಕ ಜನರು ಸಿಲುಕುತ್ತಾರೆ, ಕಿರು ಸಾಲ ಮತ್ತು ಸಣ್ಣ ಸಾಲ ಅಧ್ಯಾದೇಶ 2025ರಲ್ಲಿ ರಕ್ಷಣೆ ನೀಡಲಾಗಿದೆ, ಸಾಲ ಪಡೆದು ಕಿರುಕುಳ ಅನುಭವಿಸುತ್ತಿರುವ ಜನರ ರಕ್ಷಣೆಗೆ ಕಾಯ್ದೆ ಜಾರಿಗೊಳಿಸಲಾಗಿದೆ ಎಂದರು.

ಎಂಎಸ್‌ಐಎಲ್ ಚಿಟ್ಸ್

ಇದೇ ಸಂದರ್ಭದಲ್ಲಿ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸುಗಮ ಮತ್ತು ಪಾರದರ್ಶಕ ವ್ಯವಹಾರಕ್ಕೆಂದೇ ಎಂಎಸ್‌ಐಎಲ್ ಚಿಟ್ಸ್ ಸಾಫ್ಟ್‌ವೇರ್ ಮತ್ತು ಮೊಬೈಲ್ ಆಪ್ ಅಭಿವೃದ್ಧಿ ಪಡಿಸಲಾಗಿದೆ ಎಂದರು.

ಸಂಸ್ಥೆ 27 ಶಾಖೆಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಿಗೂ ವಿಸ್ತರಿಸಲಾಗುವುದು, ಮುಖ್ಯವಾಗಿ ಗ್ರಾಮೀಣ ಭಾಗ ಮತ್ತು ಮಹಿಳೆಯರ ಉಳಿತಾಯದ ಮೇಲೆ ನಮ್ಮ ಗಮನವಿದೆ, ಬ್ಯಾಂಕ್‌ಗಳಲ್ಲಿ ಕೊಡುವುದಕ್ಕಿಂತ ಹೆಚ್ಚಿನ ಲಾಭ ಸಿಗಲಿದೆ.

ಸುಗಮ ಚಿಟ್ ವ್ಯವಹಾರಕ್ಕಾಗಿ ಸಂಸ್ಥೆ ಏಜೆಂಟರನ್ನು ನೇಮಿಸಲಿದ್ದು, ಇದರಿಂದ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ, ಸ್ವಸಹಾಯ ಸಂಘಗಳ ಮಹಿಳೆಯರಿಗೆ ವಿಶೇಷ ಉಳಿತಾಯ ಯೋಜನೆಗಳನ್ನು ತರಲಾಗುವುದು.

ಸರ್ಕಾರಿ ನೌಕರರಿಗೆ ಆದ್ಯತೆ

ಸಂಘಗಳ ಸಖಿಯರೇ ಏಜೆಂಟರಾಗಿ ನೇಮಕಗೊಳ್ಳಲಿದ್ದಾರೆ, ಇವರಲ್ಲದೆ, ಹೋಟೆಲ್, ಕಿರಾಣಿ ಅಂಗಡಿಗಳು ಏಜೆಂಟ್ ರೀತಿ ಕಾರ್ಯನಿರ್ವಹಿಸಲು ವ್ಯವಸ್ಥೆ ರೂಪಿಸಲಾಗುವುದು, ಸರ್ಕಾರಿ ನೌಕರರ ಹೂಡಿಕೆಗೆ ಆದ್ಯತೆ ನೀಡಲಾಗುವುದು, ಒಟ್ಟಿನಲ್ಲಿ ಮನೆ ಮನೆಗೂ ಎಂಎಸ್‌ಐಎಲ್ ಚಿಟ್ ತಲುಪಿಸಲು ಪ್ರಯತ್ನ ನಡೆಯಲಿದೆ ಎಂದರು.

ಚಿಟ್‌ನಲ್ಲಿ ಹೂಡೊಕೆ ಮಾಡುವವರು, ತಮ್ಮ ಕಂತನ್ನು ಆಪ್ ಮೂಲಕ ಯುಪಿಐ, ವೆಬ್‌ಸೈಟ್ ಹಾಗೂ ಆನ್‌ಲೈನ್ ಮೂಲಕವೂ ಪಾವತಿಸಬಹುದಾಗಿದೆ, ಅನ್‌ಲೈನ್ ಮೂಲಕ ಬಿಡ್‌ನಲ್ಲೂ ಭಾಗವಹಿಸುವ ಸೌಲಭ್ಯಗಳಿವೆ.

ಸೇನಾ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಎಲ್ಲ ವಸ್ತುಗಳು ಸಬ್ಸಿಡಿ ದರದಲ್ಲಿ ಸಿಗುವಂತೆ ಎಂಎಸ್‌ಐಎಲ್ ಸ್ಟೋರ್ ತೆರೆಯುವ ಚಿಂತನೆ ಇದ್ದು, ಸಾಧಕ-ಬಾಧಕ ಅಧ್ಯಯನ ಮಾಡಲಾಗುತ್ತಿದೆ, ಇದು ಸಾಕಾರಗೊಂಡರೆ 20 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahMinister M B Patilmsil chit fund
0 FacebookTwitterPinterestEmail
KM Shivaraju

previous post
ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ
next post
ತಾರಕಕ್ಕೆ ಏರುತ್ತಿರುವ ಅಧಿಕಾರ ಹಂಚಿಕೆ ಗೊಂದಲ !

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ