Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

by admin February 25, 2026
written by admin February 25, 2026 0 comments 1 minutes read
0FacebookTwitterPinterestEmail
123

ಬೆಂಗಳೂರು:ಮುಖ್ಯಮಂತ್ರಿ ಗಾದಿ ನಿಭಾಯಿಸಲು ನಾನು ಸಮರ್ಥನಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ.

ನಾನು ಸಮರ್ಥ ಇರುವುದರಿಂದಲೇ ಪಕ್ಷದ ವರಿಷ್ಠರು ಉಪಮುಖ್ಯಮಂತ್ರಿ ಹುದ್ದೆ ಹಾಗೂ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿ ಎಂಟು ವರ್ಷ

ಅಲ್ಲದೆ, ಎರಡು ಬಾರಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಎಂಟು ವರ್ಷ ಪಕ್ಷದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ, ಸಾಮರ್ಥ್ಯ ವಿಷಯದಲ್ಲಿ ನನ್ನನ್ನು ಯಾರೂ ಪ್ರಶ್ನಿಸುವಂತಿಲ್ಲ.

ಮಾಜಿ ಸಚಿವ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆಯಲ್ಲಿ ಏನು ತಪ್ಪಿದೆ, ದಲಿತರು ಮುಖ್ಯಮಂತ್ರಿ ಯಾಕಾಗಬಾರದು, ನನಗೆ ಅರ್ಹತೆ ಇದೆಯೆಂದೇ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ.

ಅವರು ತಪ್ಪು ಮಾತನಾಡಿದ್ದರೆ ಹೇಳಿ ಸರಿಪಡಿಸೋಣ, ಸಾರ್ವಜನಿಕವಾಗಿ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ, ನಾಯಕತ್ವ ವಿಷಯ ಏನಿದ್ದರೂ ವರಿಷ್ಠರು ನಾಲ್ಕು ಗೋಡೆ ಮಧ್ಯೆ ಚರ್ಚಿಸಿ ತೀರ್ಮಾನಿಸುತ್ತಾರೆ.

ಶಾಸಕಾಂಗ ಸಭೆ ತೀರ್ಮಾನ

ಇಲ್ಲವೇ ಶಾಸಕಾಂಗ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಆಗುತ್ತದೆ, ನನ್ನ ಹೆಸರು ಕೂಗಿದ ತಕ್ಷಣ ಆಗುವುದಿಲ್ಲ, ಹಾಗಂತಾ ಅದು ತಪ್ಪು ಎಂದೂ ಹೇಳಲಾಗದು ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ.

ಮಾಧ್ಯಮದ ಮುಂದೆ ನಾನು ಸಿಎಂ ಆಗಬೇಕೆಂದ ತಕ್ಷಣ ಆಗಲು ಸಾಧ್ಯವಿಲ್ಲ, ಅದು ಸಾರ್ವಜನಿಕ ಚರ್ಚೆಯಾಗಿಯೇ ಉಳಿಯುತ್ತದೆ.

ನಾನು ಸಮರ್ಥ, ಎರಡು ಮಾತಿಲ್ಲ

ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲು ನಾನು ಸಮರ್ಥನಿದ್ದೇನೆ, ಅದರಲ್ಲಿ ಎರಡು ಮಾತಿಲ್ಲ ಎಂದು ಬಹಿರಂಗವಾಗಿಯೇ ತಮ್ಮ ಹಕ್ಕು ಮಂಡಿಸಿದರು.

ಮತ್ತೊಂದೆಡೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ, ಸುದ್ದಿಗಾರರೊಂದಿಗೆ ಮಾತನಾಡಿ, ದಲಿತ ಮುಖ್ಯಮಂತ್ರಿ ಚರ್ಚೆ ಅಪ್ರಸ್ತುತ, ಈಗ ಅದಕ್ಕೆ ಕಾಲವೂ ಅಲ್ಲ ಎಂದು ಒಂದೇ ಮಾತಿನಲ್ಲಿ ಹೇಳಿ ಮುಗಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಳೆದ ಎರಡು-ಮೂರು ತಿಂಗಳಿಂದ ಭಾರೀ ಚರ್ಚೆಗಳು ನಡೆಯುತ್ತಿದ್ದರೂ, ಎಐಸಿಸಿ ವರಿಷ್ಠರು ಮಾತ್ರ ಇನ್ನೂ ಮೌನವಾಗಿದ್ದಾರೆ.

ಸಿದ್ದರಾಮಯ್ಯ ಬಹಿರಂಗ ಟ್ವೀಟ್

ಆದರೆ, ಒಂದು ವಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಾ ತಾವು ಕುರುಬ ಸಮುದಾಯದವನು ಎಂಬ ಕಾರಣಕ್ಕೆ ಅಧಿಕಾರದಿಂದ ಇಳಿಸುವ ಪ್ರಯತ್ನ ನಡೆಯುತ್ತಿದೆ ಎಂಬುದಾಗಿ ಬಹಿರಂಗವಾಗಿಯೇ ಟ್ವೀಟ್ ಮಾಡಿದ್ದರು.

ಈ ಬೆಳವಣಿಗೆ ನಂತರ ದಲಿತರು ಮುಖ್ಯಮಂತ್ರಿ ಆಗಬೇಕೆಂಬ ಕೂಗು ಆ ಸಮುದಾಯದ ಸಚಿವರಿಂದಲೇ ಸಾರ್ವಜನಿಕವಾಗಿ ಹೇಳಿಕೆ ಮತ್ತು ಹಕ್ಕೋತ್ತಾಯ ಬರುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm post racecongres high commanddcm d k shivakumardr.g.parameshwarPriyank Kharge
0 FacebookTwitterPinterestEmail
admin

previous post
ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !
next post
ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ