Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

by admin February 26, 2026
written by admin February 26, 2026 0 comments 1 minutes read
0FacebookTwitterPinterestEmail
165

ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ.

ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ.

ತಪ್ಪಿದಲ್ಲಿ ಗಂಭೀರ ಕ್ರಮ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ತತ್‌ಕ್ಷಣದಿಂದಲೇ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ತಪ್ಪಿದಲ್ಲಿ ಗಂಭೀರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಎನ್‌ಸಿಇಆರ್‌ಟಿಯ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ ನ್ಯಾಯಾಂಗ ಭ್ರಷ್ಟಾಚಾರ ವಿಚಾರವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠ, ಈ ಪ್ರಕರಣ ವಕೀಲ ಸಮುದಾಯ ಮತ್ತು ನ್ಯಾಯಾಧೀಶರ ವರ್ಗ ಎರಡನ್ನೂ ವಿಚಲಿತರನ್ನಾಗಿ ಮಾಡಿದೆ ಎಂದಿದ್ದಾರೆ.

ನ್ಯಾಯಾಂಗದ ಘನತೆ ಕುಗ್ಗಿಸಲು ಉದ್ದೇಶ ಪೂರ್ವಕವಾಗಿ ನಡೆಸಲಾದ ಕೃತ್ಯ ಎಂದಿರುವ ಪೀಠ, ಇಂತಹ ದುಷ್ಕೃತ್ಯ ಕ್ರಿಮಿನಲ್ ನ್ಯಾಯಾಂಗನಿಂದನೆ ವ್ಯಾಪ್ತಿಗೆ ಬರುತ್ತದೆ ಎಂದಿದೆ.

ಎನ್‌ಸಿಇಆರ್‌ಟಿಗೆ ನೋಟಿಸ್

ಎನ್‌ಸಿಇಆರ್‌ಟಿ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ, ಈ ಕುರಿತು ತನಿಖೆ ನಡೆಸಲು ನ್ಯಾಯಾಲಯ ಬಯಸುತ್ತದೆ.

ಇದನ್ನು ನಿಯಂತ್ರಿಸದಿದ್ದರೆ ನ್ಯಾಯಾಂಗದ ಮೇಲಿನ ಜನರ ನಂಬಿಕೆಯನ್ನು ಹಾಳು ಮಾಡುತ್ತದೆ, ಸಂಬಂಧಪಟ್ಟವರನ್ನು ಶಿಕ್ಷೆಗೆ ಒಳಪಡಿಸದೆ ಬಿಡುವುದಿಲ್ಲ ಎಂದು ಎಚ್ಚರಿಸಿದೆ.

ಮುಖ್ಯನಾಯಮೂರ್ತಿ ಸೂರ್ಯಕಾಂತ್, ನ್ಯಾಯಾಂಗ ಸಂಸ್ಥೆಯನ್ನು ದೂಷಿಸಲು ಯಾರಿಗೂ ಅವಕಾಶ ನೀಡುವುದಿಲ್ಲ, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದರು.

ಸಂವಿಧಾನದ ಮೇಲೆ ದಾಳಿ

ನ್ಯಾಯಮೂರ್ತಿ ಜೊಯಾಮಲ್ಯ ಬಾಗ್ಚಿ, ಇದು ಸಂವಿಧಾನದ ಮೂಲ ರಚನೆ ಮೇಲೆ ನಡೆಸಿದ ದಾಳಿ ಎಂದು ಕಿಡಿಕಾರಿದರು.

“ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ” ಎಂಬ ಅಧ್ಯಾಯದ ಭಾಗವಾಗಿ “ನ್ಯಾಯಾಂಗದಲ್ಲಿನ ಭ್ರಷ್ಟಾಚಾರ” ಎಂಬ ವಿಷಯವನ್ನು ಪುಸ್ತಕ ಒಳಗೊಂಡಿದೆ ಎಂಬುದಾಗಿ ಆಂಗ್ಲ ದಿನಪತ್ರಿಕೆಯೊಂದು ಸುದ್ದಿ ಪ್ರಕಟಿಸಿತ್ತು.

ನ್ಯಾಯಾಂಗದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ಮತ್ತು ನ್ಯಾಯಾಧೀಶರ ಕೊರತೆ ಸೇರಿದಂತೆ ಅನೇಕ ಕಾರಣಗಳಿಂದಾಗಿ ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಬಾಕಿ ಉಳಿದಿವೆ ಎಂದು ಅಧ್ಯಾಯದಲ್ಲಿ ಉಲ್ಲೇಖಿಸಲಾಗಿತ್ತು.

ಗಂಭೀರ ಕಳವಳಕಾರಿ

ಈ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದ ಹಿರಿಯ ವಕೀಲ ಕಪಿಲ್ ಸಿಬಲ್, 8ನೇ ತರಗತಿ ವಿದ್ಯಾರ್ಥಿಗಳಿಗೆ ನ್ಯಾಯಾಂಗದ ಭ್ರಷ್ಟಾಚಾರ ಬೋಧಿಸುವುದು ಗಂಭೀರ ಕಳವಳಕಾರಿ ಸಂಗತಿ ಎಂದರು.

ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಪಠ್ಯದಲ್ಲಿ ನ್ಯಾಯಾಂಗದ ಭ್ರಷ್ಟಾಚಾರವನ್ನೇ ಆಯ್ದು ಟೀಕಿಸಲಾಗಿದೆ, ಬೇರೆ ಕ್ಷೇತ್ರಗಳಲ್ಲಿ ಸಮಸ್ಯೆಗಳಿದ್ದರೂ ನ್ಯಾಯಾಂಗವನ್ನೇ ಪ್ರತ್ಯೇಕವಾಗಿ ಬಿಂಬಿಸಲಾಗಿದೆ ಎಂದು ಆಕ್ಷೇಪಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
8th standard bookncertsupreme court
0 FacebookTwitterPinterestEmail
admin

previous post
ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್
next post
ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ