Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ನಾಯಕತ್ವ ಗೊಂದಲ ಬಗೆಹರಿಸಿ: ವರಿಷ್ಠರಿಗೆ ಪತ್ರ

by KM Shivaraju March 25, 2026
written by KM Shivaraju March 25, 2026 0 comments 1 minutes read
0FacebookTwitterPinterestEmail
46

ಬೆಂಗಳೂರು:ಪಕ್ಷ ಮತ್ತು ಸರ್ಕಾರಕ್ಕೆ ಹೊಸ ಉತ್ಸಾಹ, ವರ್ಚಸ್ಸು ತಂದುಕೊಡುವಂತಹ ನಾಯಕತ್ವಕ್ಕೆ ಅವಕಾಶ ನೀಡುವಂತೆ ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯರು ಎಐಸಿಸಿ ವರಿಷ್ಠರನ್ನು ಆಗ್ರಹಿಸಿದ್ದಾರೆ.

ಮಂಗಳವಾರ ರಾತ್ರಿ ನಗರದ ಪಂಚತಾರಾ ಹೋಟೆಲ್‌ನಲ್ಲಿ ಸೇರಿದ್ದ ಈ ಶಾಸಕರು, ಪರೋಕ್ಷವಾಗಿ ಪಕ್ಷ ಮತ್ತು ಸರ್ಕಾರದ ಹಿತದೃಷ್ಟಿಯಿಂದ ನಾಯಕತ್ವ ಬದಲಾವಣೆಗೆ ಆಗ್ರಹಿಸಿದ್ದಾರೆ.

ತಕ್ಷಣ ಮಧ್ಯಪ್ರವೇಶಿಸಿ

ಅಧಿಕಾರ ಹಸ್ತಾಂತರ ವಿದ್ಯಮಾನದಿಂದ ಪಕ್ಷ ಸಂಘಟನೆ ಮತ್ತು ಸರ್ಕಾರದ ಮೇಲೆ ಗಂಭೀರ ಸ್ವರೂಪದ ಪರಿಣಾಮ ಬೀರುತ್ತವೆ, ಹೀಗಾಗಿ ತಕ್ಷಣವೇ ಮಧ್ಯಪ್ರವೇಶಿಸಿ, ಇದಕ್ಕೆ ಮಂಗಳ ಹಾಡಬೇಕು ಎಂದು ಪರಿಷತ್‌ನ 20 ಸದಸ್ಯರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಕಳೆದ ಒಂದು ವರ್ಷದಿಂದ ನಾಯಕತ್ವ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ, ಇದರಿಂದ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿದ್ದಾರೆ, ಪಕ್ಷ ಸಂಘಟನೆ ಮೇಲೆ ಪರಿಣಾಮ ಉಂಟಾಗಿದೆ, ಹೀಗೆ ಮುಂದುವರೆದರೆ ಸದ್ಯದಲ್ಲಿಯೇ ನಡೆಯಲಿರುವ ಜಿಲ್ಲಾ, ತಾಲೂಕು ಪಂಚಾಯತ್ ಸೇರಿದಂತೆ ಸ್ಥಳೀಯಸಂಸ್ಥೆ ಚುನಾವಣೆಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಇವರು ಅಭಿಪ್ರಾಯಪಟ್ಟಿದ್ದಾರೆ.

ತಕ್ಷಣವೇ ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬಿಕ್ಕಟ್ಟು ಪರಿಹರಿಸಬೇಕು, ಮುಂಬರುವ ಸ್ಥಳೀಯಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳಬೇಕಿದೆ.

ತುರ್ತಾಗಿ ತೀರ್ಮಾನ ಕೈಗೊಳ್ಳಿ

ಹೀಗಾಗಿ ಪಕ್ಷ ಮತ್ತು ಸರ್ಕಾರಕ್ಕೆ ಹೊಸ ಉತ್ಸಾಹ ಮತ್ತು ವರ್ಚಸ್ಸು ತಂದುಕೊಡುವಲ್ಲಿ ಹೈಕಮಾಂಡ್ ತುರ್ತಾಗಿ ತೀರ್ಮಾನ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗೆ ತಮಗೆ ಪ್ರತ್ಯೇಕವಾಗಿ ಅವಕಾಶ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಪತ್ರದ ಪ್ರತಿ ರವಾನೆ

ಸಿದ್ಧಪಡಿಸಿದ ಮನವಿ ಪತ್ರವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿರುವ ಸದಸ್ಯರು, ಪತ್ರದ ಪ್ರತಿಗಳನ್ನು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ.ವೇಣುಗೋಪಾಲ್ ಅವರಿಗೆ ರವಾನಿಸಿದ್ದಾರೆ.

ಭೋಜನಕೂಟದಲ್ಲಿ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಬಸವನಗೌಡ ಬಾದರ್ಲಿ, ಪುಟ್ಟಣ್ಣ, ಡಿ.ಟಿ.ಶ್ರೀನಿವಾಸ್, ದಿನೇಶ್ ಗೂಳಿಗೌಡ, ಎಸ್.ರವಿ, ಸುಧಾಮ್ ದಾಸ್, ಜಗದೇವ್ ಗುತ್ತೇದಾರ್, ಚಂದ್ರಶೇಖರ್ ಪಾಟೀಲ್, ಮಧು ಮಾದೇಗೌಡ, ವಸಂತ್‌ಕುಮಾರ್, ಚನ್ನರಾಜ ಹಟ್ಟಿಹೊಳಿ, ಸುನಿಲ್‌ಗೌಡ ಪಾಟೀಲ್, ಮಂಜುನಾಥ ಭಂಡಾರಿ ಭಾಗವಹಿಸಿ, ವರಿಷ್ಠರಿಗೆ ಸಲ್ಲಿಸಿರುವ ಮನವಿಗೆ ಸಹಿ ಹಾಕಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
20 members signedcouncil membersletter to congres high command
0 FacebookTwitterPinterestEmail
KM Shivaraju

previous post
ರಾಜ್ಯ ಜಲಾಶಯಗಳ ನೀರು ಕುಡಿಯಲು ಮಾತ್ರ ಬಳಕೆ
next post
ಒಂದನೇ ತರಗತಿ ಪ್ರವೇಶದ ವಯೋಮಿತಿ ಸಡಿಲಿಕೆ

You may also like

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

ಪುತ್ರನನ್ನು ವಸೂಲಿ ದಂಧೆಗೆ ಬಿಟ್ಟಿರುವ ಸಿದ್ದರಾಮಯ್ಯ

April 10, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (442)
  • ಅಂಕಣ (109)
  • ಉದ್ಯೋಗ (325)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,251)
  • ರಾಷ್ಟ್ರ (2,221)
  • ವಿಶ್ಲೇಷಣೆ (189)
  • ಶಿಕ್ಷಣ (392)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

    April 18, 2026

KMS Special

  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

    April 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ