Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಇಲ್ಲ

by admin March 27, 2026
written by admin March 27, 2026 0 comments 2 minutes read
0FacebookTwitterPinterestEmail
150

ಎ, ಬಿ, ಸಿ, ಡಿ ಗ್ರೇಡಿಂಗ್ ನೀಡಲಾಗುವುದು: ಸಚಿವ ಮಧುಬಂಗಾರಪ್ಪ

ಬೆಂಗಳೂರು:ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಇನ್ನು ಮುಂದೆ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಇರುವುದಿಲ್ಲ.

ಈ ವರ್ಷದಿಂದಲೇ ತೃತೀಯ ಭಾಷಾ ಪರೀಕ್ಷೆ ಕಡ್ಡಾಯವಲ್ಲ, ಈ ಸಂಬಂಧ ಸರ್ಕಾರ ಇನ್ನೆರಡು ದಿನದಲ್ಲೇ ಅದೇಶ ಹೊರಡಿಸಲಿದೆ.

ಒಟ್ಟು ಅಂಕ 625ಕ್ಕೆ ಬದಲು 525ಕ್ಕೆ ಇಳಿಕೆ

ಸರ್ಕಾರದ ಈ ನಿರ್ಧಾರದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಒಟ್ಟಾರೆ ಅಂಕ 625ಕ್ಕೆ ಬದಲು 525ಕ್ಕೆ ಇಳಿಕೆ ಆಗಲಿದೆ.

ತುರ್ತು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ, ತೃತೀಯ ಭಾಷೆಗಳಿಗೆ ಇನ್ನು ಮುಂದೆ ಅಂಕಗಳ ಬದಲು ಗ್ರೇಡ್ ನೀಡಲಾಗುವುದು, ತೃತೀಯ ಭಾಷೆಯನ್ನು ಗ್ರೇಡಿಂಗ್ ವ್ಯವಸ್ಥೆಗೆ ಒಳಪಡಿಸಲಾಗುವುದು ಎಂದರು.

ಇನ್ನು ಮುಂದೆ ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ, ಅಂತಿಮ ಫಲಿತಾಂಶದ ಅಂಕಗಳಿಗೆ ತೃತೀಯ ಭಾಷೆ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ, ಬದಲಿಗೆ ಎ, ಬಿ, ಸಿ, ಡಿ ಎಂಬ ಗ್ರೇಡಿಂಗ್ ನೀಡಲಾಗುವುದು.

ಎಲ್ಲಾ ತೃತೀಯ ಭಾಷೆಗಳಿಗೆ ನಿಯಮ ಅನ್ವಯ

ಹಿಂದಿ, ಸಂಸ್ಕೃತ, ತುಳು, ಮರಾಠಿ, ಅರೇಬಿಕ್ ಸೇರಿದಂತೆ ಪಠ್ಯಕ್ರಮದಲ್ಲಿರುವ ಎಲ್ಲಾ ತೃತೀಯ ಭಾಷೆಗಳಿಗೂ ಈ ನಿಯಮ ಅನ್ವಯವಾಗಲಿದೆ.

ತೃತೀಯ ಭಾಷಾ ವಿಷಯ ಪರೀಕ್ಷೆಗೆ 100 ಅಂಕಗಳು ನಿಗದಿಪಡಿಸಿದ್ದರೂ, ಅಂಕಪಟ್ಟಿಯಲ್ಲಿ ಒಟ್ಟಾರೆ 525 ಅಂಕಗಳೆಂದು ನಮೂದಿಸಲಾಗುತ್ತದೆ.

ಹಿಂದಿ ಹೇರಿಕೆ ತಡೆಯುವ ಬಗ್ಗೆ ಮುಖ್ಯಮಂತ್ರಿಗಳೂ ಆಸಕ್ತಿ ತೋರಿದ್ದಾರೆ, ಕನ್ನಡ ಪರ ಸಂಘಟನೆಗಳೂ ಪಠ್ಯಕ್ರಮದಿಂದಲೇ ಹಿಂದಿ ಭಾಷೆ ಪಠ್ಯ ಕೈಬಿಡುವಂತೆ ಆಗ್ರಹಿಸಿವೆ.

ಫಲಿತಾಂಶದ ಮೇಲೆ ಭಾರೀ ಪರಿಣಾಮ

ತೃತೀಯ ಭಾಷೆಯಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ಫಲಿತಾಂಶದ ಮೇಲೆ ಭಾರೀ ಪರಿಣಾಮ ಬೀರುತ್ತಿರುವುದಲ್ಲದೆ, ಹಿಂದಿ ತೇರ್ಗಡೆಯಾಗದ ವಿದ್ಯಾರ್ಥಿಗಳ ಕಲಿಕಾ ಭವಿಷ್ಯವೇ ಮಂಕಾಗುತ್ತಿತ್ತು.

ಕಳೆದ ಸಾಲಿನಲ್ಲಿ ತೃತೀಯ ಭಾಷೆಯಲ್ಲಿ 1.64 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ, ಇದರಲ್ಲಿ ಹಿಂದಿ ಪರೀಕ್ಷೆ ತೇರ್ಗಡೆ ಆಗದವರ ಸಂಖ್ಯೆ 1.48 ಲಕ್ಷ ಇದ್ದರು.

ಇದನ್ನು ಗಮನದಲ್ಲಿ ಇಟ್ಟುಕೊಂಡು ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್ ನಿಗದಿ ಪಡಿಸಲಾಗುತ್ತಿದೆ.

ಹಿಂದಿ ಭಾಷಾ ಹೇರಿಕೆ ಅಗತ್ಯವಿಲ್ಲ

ಕನ್ನಡ ಪರ ಸಂಘಟನೆಗಳು ಹಿಂದಿ ಭಾಷಾ ಹೇರಿಕೆ ಅಗತ್ಯವಿಲ್ಲ ಎಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಹಾ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಎಂದಿದ್ದಾರೆ, ಈಗ ತ್ರಿಭಾಷಾ ಸೂತ್ರ ಇದೆ, ಇದನ್ನು ಬದಲಿಸಲು ಕಾನೂನು ತಜ್ಞರು ಮತ್ತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು.

ಕನ್ನಡ ಪರ ಸಂಘಟನೆಗಳು, ಹಿಂದಿ ಹೇರಿಕೆ ವಿರೋಧಿಸಿ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವುದು ಬೇಡ ಎಂದು ಮನವಿ ಮಾಡಿದ ಸಚಿವರು, ಹೋರಾಟಗಾರರ ಕೂಗಿನ ಪರವಾಗಿ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ ಎಂದರು.

ಪ್ರವೇಶ ವಯೋಮಿತಿ ನಿಗದಿ

ಕಳೆದ ಗುರುವಾರ 1ನೇ ತರಗತಿ ಪ್ರವೇಶ ವಯೋಮಿತಿಯನ್ನು 6 ವರ್ಷಕ್ಕೆ ಬದಲಾಗಿ, 5 ವರ್ಷ 10 ತಿಂಗಳಿಗೆ ನಿಗದಿಪಡಿಸಲಾಗಿದೆ.

ಎಲ್‌ಕೆಜಿ ಸೇರ್ಪಡೆಗೆ 3 ವರ್ಷ 10 ತಿಂಗಳು, ಯುಕೆಜಿಗೆ 4 ವರ್ಷ 10 ತಿಂಗಳು ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಂಬರುವ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ’ನೈತಿಕ ಶಿಕ್ಷಣ’ ಪುಸ್ತಕ ಒದಗಿಸಲಾಗುತ್ತದೆ, ಇದು ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಸರ್ಕಾರದ ಹೆಜ್ಜೆಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆ ನಿರ್ಬಂಧ

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಭವಿಷ್ಯ ದೃಷ್ಟಿಯಲ್ಲಿ ಇಟ್ಟುಕೊಂಡು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿರ್ಬಂಧಿಸುವ ಮಹತ್ವದ ಪ್ರಸ್ತಾಪ ಸದನದಲ್ಲಿ ಚರ್ಚಿಸಲಾಗಿದ್ದು, ಎಲ್ಲರಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.

ಈ ಸಮಸ್ಯೆ ಕೇವಲ ಸರ್ಕಾರದ ಮಟ್ಟದಲ್ಲಿ ಬಗೆಹರಿಯುವುದಿಲ್ಲ, ಪೋಷಕರು ತಮ್ಮ ಮಕ್ಕಳ ಮೊಬೈಲ್ ಬಳಕೆ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು.

ಸರ್ಕಾರದ ಪ್ರಮುಖ ಉದ್ದೇಶ ಸರ್ಕಾರಿ ಶಾಲೆಗಳ ಸಬಲೀಕರಣ, ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳನ್ನು ಪರೀಕ್ಷಾ ಒತ್ತಡದಿಂದ ಮುಕ್ತಗೊಳಿಸುವುದಾಗಿದೆ.

ಇದರ ಭಾಗವಾಗಿ ವಾರ್ಷಿಕ 3 ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Minister Madhu Bangarappano marks for third languagesonly gradingssslc exam
0 FacebookTwitterPinterestEmail
admin

previous post
ಒಂದನೇ ತರಗತಿ ಪ್ರವೇಶದ ವಯೋಮಿತಿ ಸಡಿಲಿಕೆ
next post
ಸಚಿವ ಜಮೀರ್ ಹೊರಗಿಟ್ಟು ಉಪಚುನಾವಣೆ ಗೆಲ್ಲೋಣ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ