Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಚಿವ ಜಮೀರ್ ಹೊರಗಿಟ್ಟು ಉಪಚುನಾವಣೆ ಗೆಲ್ಲೋಣ

by KM Shivaraju March 28, 2026
written by KM Shivaraju March 28, 2026 0 comments 1 minutes read
0FacebookTwitterPinterestEmail
146

ಬಾಗಲಕೋಟೆಯಲ್ಲಿ ಜಮೀರ್ ವಿರುದ್ಧ ’ಗೋ ಬ್ಯಾಕ್’ ಘೋಷಣೆ

ಬೆಂಗಳೂರು:ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಿಂದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ದೂರ ಇಡುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕ್ಷೇತ್ರಗಳಲ್ಲಿ ಸತತ 8 ದಿನ ಪ್ರಚಾರ ಕೈಗೊಳ್ಳಲಿದ್ದಾರೆ.

ಮಾರ್ಚ್ 30ರಿಂದ ಏಪ್ರಿಲ್ 7 ರವರೆಗೆ ಬಿಡುವಿಲ್ಲದೆ, ಈ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳುವ ಮುಖ್ಯಮಂತ್ರಿ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮೂರು ದಿನ ಹಾಗೂ ಬಾಗಲಕೋಟೆಯಲ್ಲಿ ಐದು ದಿನ ಪ್ರಚಾರ ನಡೆಸಲು ಕೆಪಿಸಿಸಿ ಕಾರ್ಯಕ್ರಮ ಪಟ್ಟಿ ಸಿದ್ಧಪಡಿಸಿದೆ.

ಮುಖ್ಯಮಂತ್ರಿ ಚುನಾವಣಾ ಸಾರಥ್ಯ

ಸರ್ಕಾರದ ವಿರುದ್ಧ ಜನ ವಿರೋಧಿ ಅಲೆ ಇದೆ, ಪಕ್ಷದ ಅಭ್ಯರ್ಥಿಗಳಿಗೆ ಗೆಲುವು ಕ್ಲಿಷ್ಟವಾಗಬಹುದು ಎಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರೇ ಸ್ವತಃ ಚುನಾವಣಾ ಪ್ರಚಾರ ಸಾರಥ್ಯ ವಹಿಸಿಕೊಂಡಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಹಿರಿಯ ನಾಯಕ ಸಾಧಿಕ್ ಪೈಲ್ವಾನ್ ನಾಮಪತ್ರ ನಿಗದಿತ ಸಮಯದೊಳಗೆ ಹಿಂದೆ ಪಡೆಯುವಲ್ಲಿ ಜಮೀರ್ ಕರ್ತವ್ಯ ನಿರ್ವಹಿಸಲಿಲ್ಲ ಎಂಬ ಕೋಪ ಮುಖ್ಯಮಂತ್ರಿ ಅವರಲ್ಲಿದೆ.

ಜಮೀರ್ ಅವರಿಗೆ ಇದರ ಹೊಣೆ ವಹಿಸಿಕೊಟ್ಟಿದ್ದರೂ, ನಾಮಪತ್ರ ಹಿಂಪಡೆಯುವ ದಿನದಂದು ದಾವಣಗೆರೆಗೆ ಭೇಟಿ ನೀಡದೆ, ಕೇರಳ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು.

ರಿಜ್ವಾನ್, ಸಲೀಂಗೆ ಹೊಣೆಗಾರಿಕೆ

ಈ ಮಾಹಿತಿ ತಿಳಿಯುತ್ತಿದ್ದಂತೆ ಕೊನೆ ಗಳಿಗೆಯಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹಮದ್ ಅವರುಗಳಿಗೆ ಹೊಣೆಗಾರಿಕೆ ವಹಿಸಲಾಯಿತು.

ಇವರು ದಾವಣಗೆರೆ ತಲುಪುವ ವೇಳೆಗೆ ನಾಮಪತ್ರ ಹಿಂಪಡೆಯುವ ಸಮಯ ಕೊನೆಗೊಂಡಿತ್ತು.

ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ವಿರೋಧದ ನಡುವೆಯೂ ಉಭಯ ಶಾಸಕರು, ಸಾಧಿಕ್ ಮನವೊಲಿಸಿ ನಗರಕ್ಕೆ ಕರೆತಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಸಿ, ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದರು.

ಸಿದ್ದರಾಮಯ್ಯ ಕೋಪ

ಜಮೀರ್ ಚಿತಾವಣೆಯಿಂದಲೇ ಸಾಧಿಕ್ ನಾಮಪತ್ರ ಹಿಂಪಡೆಯಲಿಲ್ಲ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಸಿದ್ದರಾಮಯ್ಯ ಕೋಪಗೊಂಡಿದ್ದಲ್ಲದೆ, ಪಕ್ಷದ ಕಚೇರಿಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲೇ ಸಾಧಿಕ್ ಅವರಿಂದ ನಿವೃತ್ತಿ ಘೋಷಿಸುವ ಜೊತೆಗೆ ಸಲೀಂ ಹಾಗೂ ರಿಜ್ವಾನ್ ಅವರ ಪ್ರಯತ್ನದಿಂದಲೇ ಇದು ಸಾಧ್ಯವಾಯಿತು ಎಂಬ ಪ್ರಶಂಸೆ ವ್ಯಕ್ತಪಡಿಸಿದರು.

ಸಾಧಿಕ್ ಅವರನ್ನು ಪರಿಚಯಿಸುವ ಸಂದರ್ಭದಲ್ಲಿಯೂ ಜಮೀರ್ ಹೆಸರನ್ನೂ ಪ್ರಸ್ತಾಪಿಸಲಿಲ್ಲ, ಅಲ್ಲದೆ, ಅವರನ್ನು ದೂರವಿಟ್ಟು ಚುನಾವಣೆ ಗೆಲ್ಲೋಣ ಎಂಬುದಾಗಿ ಮುಖಂಡರಿಗೆ ಸಂದೇಶ ರವಾನಿಸಿದರು.

ಇದರ ಪರಿಣಾಮವಾಗಿ ಬಾಗಲಕೋಟೆ ಪ್ರಚಾರಕ್ಕೆ ತೆರಳಿದ್ದ ಜಮೀರ್ ವಿರುದ್ಧ ಅಲ್ಲಿನ ಅಲ್ಪಸಂಖ್ಯಾತ ಮುಖಂಡರುಗಳೇ ’ಗೋ ಬ್ಯಾಕ್’ ಘೋಷಣೆ ಕೂಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdavanagere-bagalakote by-electionminister jameer ahamad khanrijvan arshadsaleem ahamad
0 FacebookTwitterPinterestEmail
KM Shivaraju

previous post
ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಇಲ್ಲ
next post
ಮಾಜಿ ಪ್ರಧಾನಿ ದೇವೇಗೌಡರ ಹಳೇ ಫೋಟೋ ಕೊಡಿ

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ