Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರಶಿಕ್ಷಣ

ಆನೆ, ಹುಲಿ, ಚಿರತೆ ಹಾವಳಿ ತಡೆಗೆ ಸಂತಾನಹರಣ ಚಿಕಿತ್ಸೆ

by KM Shivaraju April 8, 2026
written by KM Shivaraju April 8, 2026 0 comments 1 minutes read
0FacebookTwitterPinterestEmail
58

ಬೆಂಗಳೂರು:ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು ಆನೆ, ಹುಲಿ, ಚಿರತೆ ಸೇರಿದಂತೆ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಸರ್ಕಾರ ಮುಂದಾಗಿದೆ.

ಇಂತಹ ಪ್ರಾಣಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಇಂದಿಲ್ಲಿ ತಿಳಿಸಿದ್ದಾರೆ.

ಮಾನವ-ವನ್ಯಜೀವಿ ಸಂಘರ್ಷ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗರಹೊಳೆ, ಬಂಡೀಪುರ, ಭದ್ರಾ ಸೇರಿದಂತೆ ರಾಜ್ಯಾದ್ಯಂತದ ಕಾಡಂಚಿನ ಭಾಗದಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಿಂದ ಇತ್ತೀಚೆಗೆ ಸಾವು-ನೋವುಗಳು ಹೆಚ್ಚಾಗಿವೆ.

ಆನೆ, ಚಿರತೆ, ಹುಲಿ ಸಂಖ್ಯೆ ಹೆಚ್ಚಳದಿಂದ ಆಹಾರಕ್ಕಾಗಿ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುತ್ತಿವೆ.

ಇಂತಹ ಸಂಘರ್ಷ ತಡೆಯಲು ಕನಿಷ್ಠ ೨ ವರ್ಷ ಆಯ್ದ ವನ್ಯಜೀವಿಗಳ ಸಂತಾನಹರಣ ಚಿಕಿತ್ಸೆ ಅನಿವಾರ್ಯ.

ಸಾರ್ವಜನಿಕ ಚರ್ಚೆ ಅಗತ್ಯ

ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಅಗತ್ಯವಿದ್ದು, ಸಾರ್ವಜನಿಕವಾಗಿ ಚರ್ಚೆಯೂ ನಡೆಯಬೇಕಿದೆ ಎಂದರು.

ಕೆಲವು ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ, ಇವುಗಳ ಸಂಖ್ಯೆಗೆ ಕಡಿವಾಣ ಹಾಕುವ ಅಗತ್ಯವೂ ಕಂಡು ಬರುತ್ತಿದೆ, ವನ್ಯಜೀವಿಗಳ ಸಂರಕ್ಷಣೆಯೂ ಆಗಬೇಕು, ಅಮೂಲ್ಯ ಜೀವಹಾನಿಯೂ ತಪ್ಪಬೇಕು, ಮಾನವರ ಜೀವ ಉಳಿಸುವ ಕೆಲಸವೂ ಆಗಬೇಕಿದೆ.

ಇದು ನಿರ್ಧಾರವಲ್ಲ, ಒಂದು ಚಿಂತನೆ ಮಾತ್ರ, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಅಗತ್ಯವಿದೆ, ಜೊತೆಗೆ ತತ್ಸಂಬಂಧ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿದ್ದು, ತಜ್ಞರು, ಕಾನೂನು ಪಂಡಿತರೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ.

ಒಂದೆರೆಡು ವರ್ಷ ನಿಯಂತ್ರಣ

ಜೀವನವೂ ಇರಬೇಕು, ಜೀವನೋಪಾಯವೂ ಇರಬೇಕು, ಯಾವ ಭಾಗದಲ್ಲಿ ಯಾವ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತದೆಯೋ ಅಲ್ಲಿ ಒಂದೆರೆಡು ವರ್ಷ ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ.

ಬೇರೆ ರಾಜ್ಯಗಳಲ್ಲೂ ಇಂತಹ ಆಲೋಚನೆ, ಚಿಂತನೆ ಇದೆ, ಈ ಬಗ್ಗೆ ಸಾರ್ವಜನಿಕ ಚರ್ಚೆ ನಡೆಯುವ ಅಗತ್ಯವಿದೆ ಎಂದರು.

ಸ್ವಯಂ ಪ್ರೇರಣೆಯಿಂದ ಕಾಡಿನಿಂದ ಹೊರಬರಲು ಇಚ್ಛಿಸುವ ಅರಣ್ಯವಾಸಿಗಳ ಸ್ಥಳಾಂತರ ಬಗ್ಗೆಯೂ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಅಂತಹವರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ.

ಮುಖ್ಯಮಂತ್ರಿ ಜೊತೆ ಚರ್ಚೆ

ಪಟ್ಟಿ ಸಿದ್ಧವಾದ ನಂತರ ಇವರ ಸ್ಥಳಾಂತರಕ್ಕೆ ಎಷ್ಟು ಹಣದ ಅಗತ್ಯವಿದೆ, ಆಯವ್ಯಯದಲ್ಲಿ ಎಷ್ಟು ಮೀಸಲಿಡಲಾಗಿದೆ, ಎಷ್ಟು ಕೊರತೆ ಆಗಲಿದೆ ಎಂಬ ಕುರಿತು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.

ಅರಣ್ಯದಲ್ಲಿನ ವಸತಿಪ್ರದೇಶಗಳ ಸ್ಥಳಾಂತರದಿಂದ ವನ್ಯಜೀವಿಗಳ ಆವಾಸಸ್ಥಾನ ವಿಸ್ತರಣೆ ಆಗುಲಿದೆ, ಮೂಲಭೂತಸೌಕರ್ಯ ಇಲ್ಲದೆ ಬದುಕುತ್ತಿರುವ ಅರಣ್ಯವಾಸಿಗಳನ್ನೂ ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಗಲಿದೆ.

ಆನೆಗಳ ಸಮಸ್ಯೆ ಪರಿಹರಿಸಲು ಆನೆ ಧಾಮ ನಿರ್ಮಾಣ ಕುರಿತು ಸರ್ಕಾರ ಯೋಜನೆ ರೂಪಿಸಿತ್ತು, ಆದರೆ, ಕೇಂದ್ರ ಸರ್ಕಾರದಿಂದ ಅನುಮತಿ ಸಿಗುವಲ್ಲಿ ತೊಡಕಾಗಿದೆ, ಸಮಸ್ಯೆ ಪರಿಹರಿಸಿಕೊಂಡು ಆನೆ ಧಾಮ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
elephantleopardminister eshwar khandretiger
0 FacebookTwitterPinterestEmail
KM Shivaraju

previous post
ನಾಯಕತ್ವ ಬದಲಾವಣೆ ವಿಚಾರ ಕಾಲ ಉತ್ತರಿಸಲಿದೆ
next post
ಕನ್ನಡಿಗರಿಗೆ ಕನ್ನಡದಲ್ಲೇ ರೈಲ್ವೆ ನೇಮಕಾತಿ ಪರೀಕ್ಷೆ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ