Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

by KM Shivaraju April 13, 2026
written by KM Shivaraju April 13, 2026 0 comments 1 minutes read
0FacebookTwitterPinterestEmail
135

ಬಹಿರಂಗ ಹೇಳಿಕೆ ನೀಡುವ ಶಾಸಕರ ವಿರುದ್ಧ ಶಿಸ್ತು ಕ್ರಮ:ಶಿವಕುಮಾರ್

ಬೆಂಗಳೂರು:ಸಂಪುಟ ಪುನರ್ ರಚನೆಗೆ ಆಗ್ರಹಿಸಿ ಬಹಿರಂಗ ಹೇಳಿಕೆಗಳನ್ನು ನೀಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪಿಲ್ಲ, ಮಂತ್ರಿ ಸ್ಥಾನ ಕೇಳುವುದಕ್ಕೂ ನಮ್ಮ ಅಭ್ಯಂತರ ಇಲ್ಲ, ಆದರೆ, ಹಾದಿ ಬೀದಿಯಲ್ಲಿ ಈ ಸಂಬಂಧ ಹೇಳಿಕೆ ನೀಡಿದರೆ ಪಕ್ಷ ಕಠಿಣ ತೀರ್ಮಾನ ಕೈಗೊಳ್ಳುತ್ತದೆ.

ದೆಹಲಿಯಲ್ಲಿ ಬಿಡಾರ

ಮಂತ್ರಿ ಸ್ಥಾನಕ್ಕೆ ಒತ್ತಾಯಿಸಿ ದೆಹಲಿಯಲ್ಲಿ ಬಿಡಾರ ಹೂಡಿರುವ ಶಾಸಕರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮದಿಂದಲ್ಲ.

ಮಾಧ್ಯಮಗಳಲ್ಲಿ ನಾಯಕರಾಗಲು ಏನೇನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ, ನಿಮ್ಮ ಭವಿಷ್ಯ ಅಲ್ಲಿಲ್ಲ, ಪಕ್ಷದಲ್ಲಿದೆ ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ.

ಕೆಲವು ಶಾಸಕರು ದೆಹಲಿಗೆ ತೆರಳುವುದಕ್ಕೂ ಮುನ್ನ ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿದ್ದಾರೆ, ಅವರಿಗೆ ಮುಖ್ಯಮಂತ್ರಿ ಏನೋ ಹೇಳಿದ್ದಾರೆ.

ಚುನಾವಣೆ ಮಾಡೋಣ

ಇದು ಸಂಪುಟ ಪುನರ್ ರಚನೆಗೆ ಕೇಳುವ ಸಮಯ ಅಲ್ಲ, ಮೊದಲು ಚುನಾವಣೆ ಮಾಡೋಣ, ಮಂತ್ರಿಗಳಾಗಬಾರದು ಎಂಬುದೇನಿಲ್ಲ, ನಮ್ಮ ನಾಯಕರು ಪಂಚರಾಜ್ಯ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ, ಇಂತಹ ವೇಳೆ ಮಂತ್ರಿ ಸ್ಥಾನ ಕೇಳಿ ದೆಹಲಿಗೆ ತೆರಳುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ಸುದ್ದಿಗಾರರ ಭೇಟಿಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸುಮಾರು 30 ನಿಮಿಷಗಳ ಕಾಲ ಮುಖಾಮುಖಿ ಚರ್ಚೆ ನಡೆಸಿದರು.

ಮಾತುಕತೆ ವೇಳೆ ಅಧಿಕಾರ ಹಸ್ತಾಂತರ ಕುರಿತ ವಿಷಯ ಬಗೆಹರಿಯುವವರೆಗೂ ಸಂಪುಟ ಪುನರ್ ರಚನೆಗೆ ಅವಕಾಶ ನೀಡಬಾರದು ಎಂದು ಖರ್ಗೆ ಅವರಲ್ಲಿ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ಅಧಿಕಾರ ಹಸ್ತಾಂತರಕ್ಕೆ ಮುಂದಾಗುತ್ತಿಲ್ಲ

ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡು ಬರುವ ಮೇ 20ಕ್ಕೆ ಮೂರು ವರ್ಷ ಪೂರ್ಣಗೊಳ್ಳಲಿದೆ, ಅವರು ತಮಗೆ ಕೊಟ್ಟ ಭರವಸೆಯಂತೆ ಅಧಿಕಾರ ಹಸ್ತಾಂತರ ಮಾಡಲು ಮುಂದಾಗುತ್ತಿಲ್ಲ.

ನೀವು ಮಧ್ಯಪ್ರವೇಶ ಮಾಡಿ, ನನಗೆ ಅಧಿಕಾರ ಕೊಡಿಸಿ, ಅಲ್ಲಿಯವರೆಗೂ ಸಿದ್ದರಾಮಯ್ಯ ಯಾವುದೇ ರಾಜಕೀಯ ನಿರ್ಧಾರಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರಂತೆ.

ಇದೇ ಸಂದರ್ಭದಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕೆಲವು ಅಲ್ಪಸಂಖ್ಯಾತ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದೂ ಸೇರಿದಂತೆ ಕೆಲವು ಮಾಹಿತಿಗಳನ್ನು ಖರ್ಗೆ ಅವರಿಗೆ ಶಿವಕುಮಾರ್ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongres mlasdcm d k shivakumarMallikarjun Khargepower sharing
0 FacebookTwitterPinterestEmail
KM Shivaraju

previous post
ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್
next post
ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

You may also like

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

August 3, 2026

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (531)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,025)
  • ರಾಜ್ಯ (2,339)
  • ರಾಷ್ಟ್ರ (2,304)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026

KMS Special

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ