Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

by KM Shivaraju April 16, 2026
written by KM Shivaraju April 16, 2026 0 comments 2 minutes read
0FacebookTwitterPinterestEmail
93

ಬೆಂಗಳೂರು:ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮಂಗಳವಾರ ರಾತ್ರಿ ತಮ್ಮ ಕಾವೇರಿ ನಿವಾಸಕ್ಕೆ ಜಮೀರ್ ಅವರನ್ನು ಕರೆಸಿಕೊಂಡ ಮುಖ್ಯಮಂತ್ರಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೀರಿ ಎಂಬ ದೂರಿನ ಹಿನ್ನೆಲೆಯಲ್ಲಿ ನಿಮ್ಮನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಎಐಸಿಸಿಯಿಂದ ನನಗೆ ಸೂಚನೆ ಬಂದಿದೆ.

ಎಐಸಿಸಿ ಆದೇಶ ಪಾಲನೆ ಮಾಡಬೇಕು

ಎಐಸಿಸಿ ಆದೇಶವನ್ನು ನಾನು ಪಾಲನೆ ಮಾಡಬೇಕು, ಈಗಾಗಲೇ ಕಾರ್ಯದರ್ಶಿ ಸ್ಥಾನದ ಕರ್ತವ್ಯದಿಂದ ನಸೀರ್ ಅವರನ್ನು ಮುಕ್ತಗೊಳಿಸಲಾಗಿದೆ.

ರಾಜೀನಾಮೆ ನೀಡಲು ಎರಡು ದಿನ ಕಾಲಾವಕಾಶ ನೀಡುತ್ತೇನೆ, ಅಷ್ಟರಲ್ಲಿ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ, ಅಥವಾ ಸಂಪರ್ಕಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಎಂಬುದಾಗಿ ಮನವರಿಕೆ ಮಾಡಿ, ಅವರು ಏನು ಹೇಳುವರೋ ನೋಡೋಣ ಎಂದಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ, ನೀವು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಹಾಗೂ ಎಸ್‌ಡಿಪಿಐ ಅಭ್ಯರ್ಥಿಯನ್ನು ಬೆಂಬಲಿಸಿದ್ದೀರಿ ಎಂಬುದಕ್ಕೆ ದಾಖಲೆ ಸಹಿತ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಲಿಖಿತ ದೂರು ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಗೆ ವರದಿ

ಇವರ ದೂರು ಆಧರಿಸಿ ಸುರ್ಜೇವಾಲ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸಿದ್ದಾರೆ.

ರಾಜ್ಯ ಉಸ್ತುವಾರಿ ಅವರ ವರದಿ ಆಧಾರದ ಮೇಲೆ ನನ್ನನ್ನು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಂಪರ್ಕಿಸಿ ನಿಮ್ಮನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅವರನ್ನು ಕರ್ತವ್ಯ ಮುಕ್ತಗೊಳಿಸಿ, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಆದೇಶ ಮಾಡಿದ್ದಾರೆ.

ಪಕ್ಷದ ಆದೇಶವನ್ನು ನಾನು ಪಾಲನೆ ಮಾಡಬೇಕು, ಈಗಾಗಲೇ ಇಬ್ಬರ ಮೇಲೆ ಕ್ರಮ ಕೈಗೊಳ್ಳಲಾಗಿದೆ, ನಿಮಗೆ ಎರಡು ದಿನ ಅವಕಾಶ ಕೊಡುತ್ತೇನೆ, ಅಷ್ಟರಲ್ಲಿ ವರಿಷ್ಠರ ಮನವೊಲಿಸಿಕೊಳ್ಳಿ ಎಂಬ ಸಲಹೆ ನೀಡಿ ಕಳುಹಿಸಿದ್ದಾರೆ.

ಮೋಜು-ಮಸ್ತಿಗೆ ಹೋಗಿರಲಿಲ್ಲ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ತಮ್ಮ ವಿರುದ್ಧ ಕೇಳಿ ಬಂದಿರುವ ಪಕ್ಷ ವಿರೋಧಿ ಚಟುವಟಿಕೆ ಆರೋಪಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕೇರಳಕ್ಕೆ ತಾವು ಮೋಜು-ಮಸ್ತಿ ಮಾಡಲು ಹೋಗಿರಲಿಲ್ಲ, ಪಕ್ಷದ ಕೆಲಸಕ್ಕಾಗಿಯೇ ಅಲ್ಲಿಗೆ ಹೋಗಿದ್ದೆ ಎಂದರು.

ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪ್ರವಾಸಕ್ಕೆ ಹೋಗಿದ್ದರೆ ಅದು ತಪ್ಪು, ಕೇರಳಕ್ಕೆ ಕಳ್ಳಾಟ ಆಡಲು, ಮೋಜು ಮಸ್ತಿ ಮಾಡಲು ಹೋಗಿರಲಿಲ್ಲ, ನಾನು ಪಕ್ಷದ ಸೂಚನೆ ಮೇರೆಗೆ ಅಲ್ಲಿಗೆ ಹೋಗಿದ್ದೆ, ಅಲ್ಲಿ ಹಗಲು-ರಾತ್ರಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ.

ಕೇರಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದೇನೆ, ದಿನಕ್ಕೆ 350 ರಿಂದ 400 ಕಿಲೋಮೀಟರ್ ಪ್ರವಾಸ ಮಾಡಿದ್ದೇನೆ, ಹೀಗಿದ್ದರೂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ, ಮುಂದಿನ ಟಾರ್ಗೆಟ್ ನಾನೇ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ ಏಕೆ ಈ ರೀತಿ ಎಂದು ಪ್ರಶ್ನಿಸಿದರು.

ನನ್ನನ್ನು ಏಕೆ ಟಾರ್ಗೆಟ್ ಮಾಡುತ್ತಾರೆ

ನನ್ನನ್ನು ಟಾರ್ಗೆಟ್ ಯಾರು ಮಾಡಬೇಕು, ಮಾಡಿದರೆ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಬೇಕು, ಅವರು ಏಕೆ ಮಾಡುತ್ತಾರೆ, ನಿನ್ನೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ, ನಾಳೆ ಉಪಮುಖ್ಯಮಂತ್ರಿ ಭೇಟಿ ಮಾಡುತ್ತೇನೆ, ಏನಾದರೂ ಹೇಳಿದರೆ, ಅವರು ಹೇಳಬೇಕು, ಬೇರೆ ಯಾರ ಮಾತಿಗೂ ಅರ್ಥ ಇಲ್ಲ ಎಂದರು.

ನಸೀರ್ ಅಹ್ಮದ್ ಪಕ್ಷದಲ್ಲಿ ತುಂಬಾ ಹಿರಿಯರು, ನಮ್ಮ ಸಮುದಾಯದ ನಾಯಕರು, ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಿದ್ದು ನನಗೂ ಬೇಸರ ತಂದಿದೆ, ಅವರಿಗೂ ನೋವಾಗಿದೆ, ಹೀಗಾಗಿ ಅವರನ್ನು ಭೇಟಿ ಮಾಡಿ ಸಮಾಧಾನ ಮಾಡಿದ್ದೇನೆ, ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ, ನಾನು ನಾಯಕ ಅಲ್ಲ, ಪಕ್ಷದ ಸೇವಕ, ಬಹಳ ಚಿಕ್ಕವನು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargeanti party activitycm siddaramaiahminister jamir ahamad khanranadeep singh surjeval
0 FacebookTwitterPinterestEmail
KM Shivaraju

previous post
ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ
next post
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ