Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

by KM Shivaraju April 20, 2026
written by KM Shivaraju April 20, 2026 0 comments 1 minutes read
0FacebookTwitterPinterestEmail
113

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸವಾಲಾಗಿರುವ ದಲಿತರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಮಹತ್ವದ ತೀರ್ಮಾನ ಕೈಗೊಳ್ಳಲು ಏಪ್ರಿಲ್ 24ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.

ಮೀಸಲಾತಿ ಪ್ರಮಾಣ ಶೇಕಡ 50 ಮೀರದಂತೆ, ಅದರ ವ್ಯಾಪ್ತಿಯೊಳಗೆ ದಲಿತರಿಗೆ ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಎಡಗೈ ಗುಂಪು ಪಟ್ಟು

ಎಡಗೈ ಗುಂಪು ತಮಗೆ ಶೇಕಡ 6ರಷ್ಟು ಒಳಮೀಸಲಾತಿ ಕಲ್ಪಿಸಬೇಕೆಂಬ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಒಳಗೊಂಡಂತೆ ತಜ್ಞರ ತಂಡ ರಚಿಸಲಾಗಿತ್ತು.

ಈ ತಂಡದ ವರದಿ ಆಧಾರವಾಗಿ ಇಟ್ಟುಕೊಂಡು ಎಡಗೈ-ಬಲಗೈ ಸೇರಿದಂತೆ ದಲಿತ ಸಮುದಾಯದ 101 ಉಪಜಾತಿಗಳಿಗೆ ಶೇಕಡಾ 15 ಮೀಸಲಾತಿಯಲ್ಲೇ ಹಂಚಿಕೆ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಇದರನ್ವಯ ಎಡಗೈ ಮತ್ತು ಬಲಗೈ ಸಮುದಾಯಕ್ಕೆ ತಲಾ ಶೇ.5.29, ಬೋವಿ, ಲಂಬಾಣಿ, ಕೊರವ, ಕೊರಮ ಸಮಾಜದವರಿಗೆ ಶೇ.4.42 ಮೀಸಲಾತಿ ನಿಗದಿಪಡಿಸಿದೆ.

ವರದಿ ಆಧಾರಿಸಿ ಅನುಷ್ಟಾನ

ವರದಿ ಆಧಾರದ ಮೇಲೆ ವಿಶೇಷ ಸಂಪುಟಯಲ್ಲಿ ಸಭೆ ಚರ್ಚೆ ನಡೆಸಿ ಅನುಷ್ಟಾನಕ್ಕೆ ತರಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬುದಾಗಿ ಯುನಜನರು ಪ್ರತಿಭಟನೆ ನಡೆಸಿದ ವೇಳೆ, 56,432 ಹುದ್ದೆಗಳನ್ನು ಮೊದಲ ಹಂತದಲ್ಲಿ ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು.

ಒಳ ಮೀಸಲಾತಿ ಸಮಸ್ಯೆ ಬಗೆಹರಿಯದೆ ನೇಮಕಾತಿ ಹಾಗೂ ಬಡ್ತಿ ಹಾಗೆಯೇ ಉಳಿದಿತ್ತು.

ಉಪಚುನಾವಣೆ ಹಿನ್ನೆಲೆ ಮುಂದೂಡಿಕೆ

ಕಳೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಸಂಬಂಧ ಸುದೀರ್ಘ ಚರ್ಚೆ ನಡೆಸಲಾಯಿತಾದರೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ.

ಅಂದಿನ ಸಭೆಯಲ್ಲಿ ಎಡಗೈ ಸಮುದಾಯಕ್ಕೆ ಸೇರಿದ ಸಚಿವ ಮುನಿಯಪ್ಪ, ಸರ್ಕಾರ ಮೊದಲು ಒಳ ಮೀಸಳಾತಿ ಬಗ್ಗೆ ನಿರ್ಧರಿಸಲಿ, ನಮ್ಮ ಸಮುದಾಯಕ್ಕೆ ಎಷ್ಟು ಮೀಸಲಾತಿ ನೀಡುವಿರೋ ಅಷ್ಟು ನಿಗದಿಪಡಿಸಿ ಆದೇಶ ಮಾಡಿ.

ಈ ಸಮಸ್ಯೆ ಬಗೆಹರಿಯದೆ ನೇಮಕಾತಿ ಮತ್ತು ಬಡ್ತಿ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತಿಲ್ಲ, ಎಲ್ಲದಕ್ಕೂ ಮಿಗಿಲಾಗಿ ನಮ್ಮ ಸಮುದಾಯದವರು, ತೀರ್ಮಾನ ಕೈಗೊಳ್ಳಲಾಗದಿದ್ದರೆ, ಸರ್ಕಾರದಿಂದ ಹೊರಬನ್ನಿ ಎಂಬ ಪಟ್ಟು ಹಿಡಿದಿದ್ದಾರೆ.

ನಿರ್ಧಾರದ ಭರವಸೆ

ಮುಖ್ಯಮಂತ್ರಿ ಅವರು, ತಕ್ಷಣ ಒಂದು ತೀರ್ಮಾನ ಕೈಗೊಂಡು ಸರ್ಕಾರದ ನಿಲುವು ಪ್ರಕಟಿಸಬೇಕು ಎಂಬುದಾಗಿ ಸಭೆಯಲ್ಲಿ ಆಗ್ರಹಿಸಿದಾಗ, ಉಪಚುನಾವಣೆ ನಂತರ ವಿಶೇಷ ಸಂಪುಟ ಸಭೆ ಕರೆದು ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ದಲಿತರಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಲಾಗಿತ್ತು, ಮೀಸಲಾತಿಯನ್ನು ಶೇಕಡ 56ಕ್ಕೆ ಹೆಚ್ಚಿಸಿ ದಲಿತರಿಗೆ ಶೇ.17ರಷ್ಟು ಕಲ್ಪಿಸುವಂತೆ ಶಿಫಾರಸು ಮಾಡಿತ್ತು.

ಮೀಸಲಾತಿ ಪ್ರಮಾಣ ಶೇ.50 ಮೀರದಂತೆ ತೀರ್ಮಾನ ಕೈಗೊಳ್ಳಬೇಕು ಎಂಬ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಮತ್ತೆ ಕಸರತ್ತು ನಡೆಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
april 24thcm siddaramaiahinternal reservationminister muniyappaspecial cabinet meeting
0 FacebookTwitterPinterestEmail
KM Shivaraju

previous post
ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ
next post
ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ