Wednesday, June 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

by KM Shivaraju May 1, 2026
written by KM Shivaraju May 1, 2026 0 comments 2 minutes read
0FacebookTwitterPinterestEmail
67

ಬೆಂಗಳೂರು:ಸರ್ಕಾರಿ ನೌಕರರಿಗೂ ವೇತನ ನೀಡಲಾಗದಷ್ಟು ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಆಡಳಿತಯಂತ್ರ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿಲ್ಲ, ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದರಲ್ಲೇ ನಿರತವಾಗಿದೆ ಎಂದರು.

ಅಲ್ಪಸಂಖ್ಯಾತರ ಓಲೈಕೆಗೆ ಹಣ

ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತೆ 650 ಕೋಟಿ ರೂ. ನೀಡಲು ತೀರ್ಮಾನ ಕೈಗೊಳ್ಳಲಾಗಿದೆ, ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಗಳಲ್ಲ, ಆದರೆ ರಾಜ್ಯ ಸರ್ಕಾರ ಪದೇ ಪದೇ ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡುತ್ತಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ಗೆ ಹಿಂದೂಗಳು ಮತ ಹಾಕಿಲ್ಲವೇ, ಹಿಂದೂಗಳಿಗೆ ಅಪಮಾನ ಮಾಡುತ್ತಿರುವುದು ಅಕ್ಷಮ್ಯ ಅಪರಾಧ, ರಾಜ್ಯ ಸರ್ಕಾರದ ಪಾಪದ ಕೊಡ ತುಂಬಿದೆ.

ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರವನ್ನು ಪದೇ ಪದೇ ಕೈಗೊಳ್ಳುತ್ತಿರುವ ಸರ್ಕಾರವನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ, ಹಿಂದೂಗಳಿಗೆ ಅಪಮಾನ ಸಲ್ಲದು ಎಂದರು.

ಕೇಂದ್ರದ ಮೇಲೆ ಆರೋಪ

ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ಕೇಂದ್ರ ಸರ್ಕಾರದ ಮೇಲೆ ಪದೇ ಪದೇ ಆರೋಪ ಮಾಡುತ್ತಿದೆ, ಕೇಂದ್ರದ ಮೇಲೆ ಆರೋಪ ಹೊರಿಸಲು ಸಂಪುಟ ದರ್ಜೆಯ ಒಬ್ಬ ಸಚಿವರನ್ನು ನೇಮಕ ಮಾಡಿಕೊಳ್ಳಲಿ.

ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಕೈಗೊಂಡಿರುವ ಅಭಿವೃದ್ಧಿ ಏನೆಂದು ರಾಜ್ಯದ ಜನರಿಗೆ ಗೊತ್ತಿದೆ, ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದು ಬಿಟ್ಟರೆ ಏನೂ ಮಾಡಿಲ್ಲ.

ಜಲಜೀವನ್ ಮಿಷನ್ ಸೇರಿದಂತೆ ಹಲವು ಯೋಜನೆಗಳಿಗೆ ಕೇಂದ್ರದಿಂದ ಬರುವ ಹಣ ಬಂದೇ ಬರುತ್ತದೆ, ರಾಜ್ಯ ಸರ್ಕಾರ ತನ್ನ ಪಾಲಿನ ಅಭಿವೃದ್ಧಿ ಯೋಜನೆಗೆ ಹಣ ಬಿಡುಗಡೆ ಮಾಡಲಿ.

ಶಾಸಕರಿಗೆ ಹಣ ಬಿಡುಗಡೆ ಮಾಡಿಲ್ಲ

ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ರೂ. ಕೊಡುತ್ತೇವೆ ಎಂಬುದಾಗಿ ಹೇಳಿ ಆರು ತಿಂಗಳಾಯಿತು, ಶಾಸಕರು ಯೋಜನೆ ರೂಪಿಸಿಕೊಂಡು ಕಾಯುತ್ತಿದ್ದಾರೆ, ಆದರೆ ಸರ್ಕಾರ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ.

ರಾಜ್ಯದ ಸರ್ಕಾರಿ ನೌಕರರಿಗೆ ಎರಡು ತಿಂಗಳಿಂದ ವೇತನ ಬಿಡುಗಡೆ ಮಾಡಿಲ್ಲ, ಇದರಿಂದಲೇ ಈ ಸರ್ಕಾರ ಎಷ್ಟು ದಿವಾಳಿ ಆಗಿದೆ ಎಂಬುದು ತಿಳಿಯುತ್ತದೆ, ಗುತ್ತಿಗೆದಾರರು ರಾಜ್ಯ ಸರ್ಕಾರದ ಧೋರಣೆಯಿಂದ ಬೇಸರಗೊಂಡು ಬೇರೆ ರಾಜ್ಯಗಳಿಗೆ ಹೋಗಿದ್ದಾರೆ.

ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ, ಕೇಂದ್ರ ಸರ್ಕಾರವನ್ನು ದೂರುವ ಬದಲು ರಾಜ್ಯ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲಿ.

ಆಂತರಿಕ ಕಚ್ಚಾಟ ಹೆಚ್ಚಾಗಿದೆ

ಆಡಳಿತ ಪಕ್ಷದ ಆಂತರಿಕ ಕಚ್ಚಾಟ ಹೆಚ್ಚಾಗಿ, ಮುಖ್ಯಮಂತ್ರಿ ಕುರ್ಚಿಗೆ ದಿನೇ ದಿನೇ ಪೈಪೋಟಿ ನಡೆಯುತ್ತಿದೆ, ಆಡಳಿತ ಪಕ್ಷದ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಒಮ್ಮೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹೋದರೆ ಮತ್ತೊಮ್ಮೆ ಸಿದ್ದರಾಮಯ್ಯ ಬೆಂಬಲಿಗರು ದೆಹಲಿಯಲ್ಲಿ ಬೀಡು ಬಿಡುತ್ತಾರೆ, ಇವರೇನು ನಮ್ಮ ರಾಜ್ಯದ ಶಾಸಕರೋ ಅಥವಾ ದೆಹಲಿ ಶಾಸಕರೋ ಎಂಬ ಅನುಮಾನ ಬರುತ್ತಿದೆ.

ಪೊಲೀಸರ ಕ್ರಮ ಸರಿಯಲ್ಲ

ಧಾರವಾಡದಲ್ಲಿ ಆದಿತ್ಯ ಮ್ಯಾಗೇರಿ ಎಂಬ ಕಾಲೇಜು ವಿದ್ಯಾರ್ಥಿಯನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ವಿನಾಕಾರಣ ಸಿಲುಕಿಸಿ, ನಿರಪರಾಧಿ ಎಂಬುದಾಗಿ ತಿಳಿದ ನಂತರವೂ ತಂದೆ ಇಲ್ಲದ ಯುವಕನ ತಾಯಿಗೆ ಪೀಡಿಸಿ ಸಾವಿರಾರು ರೂ. ವಸೂಲಿ ಮಾಡಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ ಎಷ್ಟು ಕೀಳುಮಟ್ಟಕ್ಕೆ ಇಳಿದಿದೆ ಎಂಬುದು ಇದರಿಂದ ಗೊತ್ತಾಗುತ್ತದೆ, ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮಾನ ಮರ್ಯಾದೆ ಇದ್ದರೆ ಈ ಘಟನೆಯಿಂದ ಎಚ್ಚೆತ್ತುಕೊಂಡು ಪ್ರಕರಣದ ಹಿಂದೆ ಇರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು, ಮೃತನ ಬಡ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಕೊಡಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabjp state presidentno development worksno salary to govt. employeesstate govt. bankrupt
0 FacebookTwitterPinterestEmail
KM Shivaraju

previous post
ನಾಯಕತ್ವ ಕುರಿತು ಸೋನಿಯಾ, ರಾಹುಲ್ ಜೊತೆ ಚರ್ಚೆ
next post
ಪಂಚರಾಜ್ಯ ಚುನಾವಣೆ: ಬಿಜೆಪಿಗೆ ಗೆಲುವಿನ ನಿರೀಕ್ಷೆ

You may also like

ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

June 16, 2026

ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

June 15, 2026

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (489)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,983)
  • ರಾಜ್ಯ (2,297)
  • ರಾಷ್ಟ್ರ (2,264)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

    June 16, 2026
  • ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

    June 15, 2026
  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026

KMS Special

  • ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

    June 16, 2026
  • ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

    June 15, 2026
  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

June 16, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ