Wednesday, May 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯ

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ : ಸಿದ್ದರಾಮಯ್ಯ

by KM Shivaraju May 5, 2026
written by KM Shivaraju May 5, 2026 0 comments 2 minutes read
0FacebookTwitterPinterestEmail
26

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು 2028ರ ಚುನಾವಣೆಯ ದಿಕ್ಸೂಚಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

 ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಿಜೆಪಿಯವರು 2028ರ ವಿಧಾನಸಭಾ ಚುನಾವಣೆಗೆ ಉಪ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ಹೇಳಿದ್ದರು.

ಅವರ ಪ್ರಕಾರವೇ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಾಯಿತು.  ಈ ಹಿಂದೆ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಜಯಗಳಿಸಿದೆ.

ಅವುಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವಿಯ ಪ್ರಬಲ ಕ್ಷೇತ್ರಗಳು ಸಹ ಕಾಂಗ್ರೆಸ್ ತೆಕ್ಕೆಗೆ ಬಂದಿದ್ದವು ಎಂದರೆ, ನಮ್ಮ ಜನಪರ ಕಾರ್ಯಕ್ರಮಗಳನ್ನು ಮತದಾರರು ಬೆಂಬಲಿಸಿದ್ದಾರೆ ಅಲ್ಲವೆ ಎಂದು ಪ್ರಶ್ನಿಸಿದರು.

ನಮ್ಮ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಅವುಗಳು ಮತದಾರರ ಮನೆಬಾಗಿಲಿಗೆ ತಲುಪಿವೆ. ಜನರು ನಮ್ಮ ಮೇಲೆ ವಿಶ್ವಾಸ ಮತ್ತು ಅಭಿಮಾನ ಇಟ್ಟುಕೊಂಡಿದ್ಧಾರೆ.

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಅವು ನಮ್ಮ ಕೈ ಹಿಡಿದಿವೆ. ಉಪ ಚುನಾವಣಾ ಫಲಿತಾಂಶವೇ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಮರುಕಳಿಸಿ ನಾವೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ಓಟ್ ಚೋರಿ ಮಾಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಗುರುತರ ಆರೋಪ ಮಾಡಿದರು.

 ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಾಜೇಗೌಡ ಅವರು ಕಳೆದ ಚುನಾವಣೆಯಲ್ಲಿ 201 ಮತಗಳ ಅಂತರದಲ್ಲಿ ಗೆದ್ದಿದ್ದರು. ಅವರಿಗೆ 59,171 ಮತಗಳು ಬಂದಿದ್ದವು.

ಅವರ ಎದುರಾಳಿ ಬಿಜೆಪಿಯ ಜೀವರಾಜ್ ಅವರಿಗೆ 58970 ಮತಗಳು ಬಂದಿದ್ದವು. ಇವಿಎಂನಲ್ಲಿ ರಾಜೇಗೌಡರಿಗೆ 58602ಮತಗಳು ಬಂದಿದ್ದವು. ಅಂಚೆಯಲ್ಲಿ 569 ಮತಗಳು ಬಂದಿದ್ದವು. ಜೀವರಾಜ್ ಅವರಿಗೆ ಇವಿಎಂನಲ್ಲಿ 58278ಮತಗಳು ಬಂದಿದ್ದವು. ಅಂಚೆಯಲ್ಲಿ 692 ಮತಗಳು ಬಂದಿದ್ದವು. ಇವೆಲ್ಲವೂ ಅರ್ಹ ಮತಗಳೆಂದು ಚುನಾವಣಾಧಿಕಾರಿಗಳು, ಏಜೆಂಟ್ಗಳು ಸಹಿ ಮಾಡಿ ಫಲಿತಾಂಶ ಘೋಷಿಸಿದ್ದರು.

ಘೋಷಣೆ ಆದ ಬಳಿಕ ಜೀವರಾಜ್ ಅವರು ಅಕ್ರಮ ಆಗಿದೆ ಎಂದು ರಾಜ್ಯ ಹೈಕೋರ್ಟ್ ನಲ್ಲಿ ಮರು ಎಣಿಕೆಗೆ ದಾವೆ ಹೂಡಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯ ಮರು ಎಣಿಕೆಗೆ ನಿರ್ದೇಶನ ನೀಡಿತ್ತು.

ಮರು ಎಣಿಕೆಯಲ್ಲಿ ರಾಜೇಗೌಡರಿಗೆ 314 ಮತಗಳು ಮಾತ್ರ ಅರ್ಹ ಎಂದು ಆಗುತ್ತದೆ. 255 ಮತಗಳು ಅನರ್ಹ ಎಂದು ಆಗುತ್ತದೆ.  ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಮತಗಳು ಲಭಿಸಿವೆ.  ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿಯಾಗಿದೆ ಎಂದು ಅವರಿ ಆರೋಪಿಸಿದರು.

ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಕೇಂದ್ರದಲ್ಲೂ ಆವರ ಸರ್ಕಾರ ಇತ್ತು. ಅವರು ಹೇಳುವ ಪ್ರಕಾರ ಡಬಲ್ ಇಂಜಿನ್ ಸರ್ಕಾರ ಇತ್ತು. ಬಿಜೆಪಿಯವರು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಿರುವುದು ಖಚಿತವಾಗಿದೆ. ಇದು ಕ್ರಿಮಿನಲ್ ಸಂಚು ಎಂದರು.

ನಮ್ಮ ಪಕ್ಷದಿಂದ ಸುಧೀರ್ ಕುಮಾರ್ ಮರೋಳಿ ಅವರು ಏಜೆಂಟ್ ಆಗಿದ್ದರು. ಎಲ್ಲಾ ಏಜೆಂಟರು 2023ರಲ್ಲಿ ಸಹಿ ಹಾಕಿದ ದಾಖಲೆಯಿದೆ. ಮತಗಳು ಅನರ್ಹವಾಗಿದ್ದರೆ ಆಗಲೇ ಎಲ್ಲರೂ ಆಕ್ಷೇಪ ಎತ್ತಬಹುದಾಗಿತ್ತು. ಆಗ ಯಾರೂ ಆಕ್ಷೇಪ ಎತ್ತಲಿಲ್ಲ ಯಾಕೆ? ಎಂದು ಪ್ರಶ್ನಿಸಿದರು.

ಚುನಾವಣಾಧಿಕಾರಿಗಳು ಚುನಾವಣಾ ವೀಕ್ಷಕರ ಅನುಮತಿಯಿಲ್ಲದೇ ಆತುರಾತುರವಾಗಿ ಫಲಿತಾಂಶ ಘೋಷಿಸಿದ್ದಾರೆ. ತಪ್ಪು ಮಾಡಿದ ಯಾರೇ ಆಗಿದ್ದರೂ, ಅಂತಹ ಅಧಿಕಾರಿಗೆ ಶಿಕ್ಷೆಯಾಗಬೇಕು. ರಾಜೇಗೌಡ ಅವರು ನೀಡಿದ ದೂರಿನ ಮೇಲೆ ಎಫ್ಐಆರ್ ಆಗಿದೆ. ಇದು ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2028 assembly electionscmguidekarnatakaresultsSiddaramaiahState by-election
0 FacebookTwitterPinterestEmail
KM Shivaraju

previous post
ಕಾಂಗ್ರೆಸ್ ತೆಕ್ಕೆಗೆ ದಾವಣಗೆರೆ-ಬಾಗಲಕೋಟೆ ಕ್ಷೇತ್ರ
next post
ಪಂಚರಾಜ್ಯ ಚುನಾವಣೆ ಬಳಿಕ ಆರ್ ಎಸ್ ಎಸ್ ಗೆ ಕರ್ನಾಟಕವೇ ಗುರಿ

You may also like

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

May 11, 2026

ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

May 9, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿಗೆ ದೆಹಲಿ ಬುಲಾವ್

May 7, 2026

ಪಂಚರಾಜ್ಯ ಚುನಾವಣೆ ಬಳಿಕ ಆರ್ ಎಸ್ ಎಸ್ ಗೆ ಕರ್ನಾಟಕವೇ...

May 6, 2026

ಕಾಂಗ್ರೆಸ್ ತೆಕ್ಕೆಗೆ ದಾವಣಗೆರೆ-ಬಾಗಲಕೋಟೆ ಕ್ಷೇತ್ರ

May 4, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

ಪಂಚರಾಜ್ಯ ಚುನಾವಣೆ: ಬಿಜೆಪಿಗೆ ಗೆಲುವಿನ ನಿರೀಕ್ಷೆ

May 2, 2026

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

May 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (459)
  • ಅಂಕಣ (109)
  • ಉದ್ಯೋಗ (330)
  • ದಿನ ಭವಿಷ್ಯ (110)
  • ರಾಜಕೀಯ (1,953)
  • ರಾಜ್ಯ (2,267)
  • ರಾಷ್ಟ್ರ (2,235)
  • ವಿಶ್ಲೇಷಣೆ (189)
  • ಶಿಕ್ಷಣ (394)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

    May 12, 2026
  • ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

    May 11, 2026
  • ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

    May 9, 2026

KMS Special

  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

    May 12, 2026
  • ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

    May 11, 2026
  • ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

    May 9, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ...

May 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ