Sunday, June 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, June 28, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

by admin May 11, 2026
written by admin May 11, 2026 0 comments 2 minutes read
0FacebookTwitterPinterestEmail
125

ತಮಿಳುನಾಡಿನ ವ್ಯಕ್ತಿಯೊಬ್ಬ ತಂದು ಇರಿಸಿದ ಶಂಕೆ: ಎನ್‌ಐಎ ತನಿಖೆ

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ನಿನ್ನೆ ನಗರದಲ್ಲಿ ಸಂಚರಿಸಿದ ಮಾರ್ಗದಲ್ಲಿ ಪತ್ತೆಯಾದ ಜಿಲೆಟಿನ್ ಕಡ್ಡಿಗಳು ತಮಿಳುನಾಡಿನಿಂದ ಬಂದಿದ್ದವು ಎಂಬ ಶಂಕೆ ವ್ಯಕ್ತವಾಗಿದೆ.

ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ, ತನಿಖೆ ತೀವ್ರಗೊಳಿಸಿದೆ.

ರಾಜ್ಯ ಪೋಲಿಸರು ತಮಿಳುನಾಡಿಗೆ

ವ್ಯಕ್ತಿಯೊಬ್ಬ ಈ ಸ್ಫೋಟಕಗಳನ್ನು ಇರಿಸಿದ ಕುರಿತು ಬಲವಾದ ಮಾಹಿತಿ ದೊರೆತಿದ್ದು, ಇದರ ಆಧಾರದ ಮೇಲೆ ನಗರ ಪೋಲಿಸರು ತಮಿಳುನಾಡಿಗೆ ತೆರಳಿದ್ದಾರೆ.

ಇದರ ಜೊತೆಯಲ್ಲೇ ಕೇಂದ್ರದ ವಿವಿಧ ತನಿಖಾ ತಂಡಗಳು ನಗರಕ್ಕೆ ಧಾವಿಸಿ ವಿವಿಧ ಕೋನಗಳಿಂದ ತನಿಖೆ ನಡೆಸಿವೆ.

ಪ್ರಾಥಮಿಕ ತನಿಖೆಯಿಂದ ಜಿಲೆಟಿನ್ ಕಡ್ಡಿಗಳನ್ನು ಉದ್ದೇಶಪೂರ್ವಕವಾಗಿಯೇ ಇರಿಸಲಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕೇಂದ್ರದ 3 ತನಿಖಾ ಸಂಸ್ಥೆ

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ರಕ್ಷಣಾ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (ಆರ್‌ಎಡಬ್ಲ್ಯೂ-ರಾ) ಜೊತೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಕೇಂದ್ರ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಭದ್ರತಾ ವೈಫಲ್ಯ ಎಂಬುದಾಗಿ ಪರಿಗಣಿಸಲಾಗಿದೆ.

ಪ್ರಧಾನಿ ಅವರನ್ನು ಗುರಿಯಾಗಿಸಿ ನಡೆಸಿರುವ ವ್ಯವಸ್ಥಿತ ಸಂಚು ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ರಾಜ್ಯದಲ್ಲಿ ಭದ್ರತಾ ಉಸ್ತುವಾರಿ ವಹಿಸಿದ್ದ ಹಿರಿಯ ಪೋಲಿಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ ನಡೆದಿದೆ.

ಶಿಸ್ತು ಕ್ರಮದ ಭೀತಿ

ರಾಜ್ಯ ಗುಪ್ತಚರ ವಿಭಾಗದ ಎಡಿಜಿಪಿ ಲಾಬೂರಾಮ್, ಬೆಂಗಳೂರು ದಕ್ಷಿಣ ಜಿಲ್ಲಾ ಎಸ್‌ಪಿ ಶ್ರೀನಿವಾಸ್‌ಗೌಡ ಸೇರಿದಂತೆ ಪ್ರಧಾನಿಗಳ ಭದ್ರತಾ ಉಸ್ತುವಾರಿ ವಹಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ಶಿಸ್ತು ಕ್ರಮದ ಭೀತಿ ಎದುರಾಗಿದೆ.

ಎನ್‌ಐಎ ಡಿವೈಎಸ್‌ಪಿ ನೇತೃತ್ವದ ತಂಡ ಸ್ಫೋಟಕ ಪತ್ತೆಯಾದ ವಡೇರಹಳ್ಳಿಗೇಟ್ ಸಮೀಪದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಎನ್‌ಐಎ ಅಧಿಕಾರಿಗಳು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಅವರಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ತನಿಖಾ ಪ್ರಗತಿ ವರದಿ

ಪ್ರಧಾನಿ ಅವರ ಭದ್ರತೆ ಜವಾಬ್ದಾರಿ ಹೊಂದಿರುವ ಎನ್‌ಎಸ್‌ಜಿ ಪಡೆಯ ಮುಖ್ಯಸ್ಥರು ರಾಜ್ಯ ಪೊಲೀಸ್ ಇಲಾಖೆಯಿಂದ ತನಿಖಾ ಪ್ರಗತಿಯ ವರದಿ ತರಿಸಿಕೊಂಡಿದ್ದಾರೆ.

ರಾಮನಗರ ಡಿವೈಎಸ್‌ಪಿ ಶ್ರೀನಿವಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಾಥಮಿಕ ತನಿಖೆಯಲ್ಲಿ ಕೆಲವು ಆಘಾತಕಾರಿ ಅಂಶಗಳು ವ್ಯಕ್ತವಾಗಿದ್ದು, ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್‌ಗಳನ್ನು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಇಟ್ಟಿದ್ದಾರೆ ಎಂಬುದು ದೃಢಪಟ್ಟಿದೆ.

ಸ್ಫೋಟಕಗಳನ್ನು ಯಾವ ನಿರ್ದಿಷ್ಟ ಸಮಯದಲ್ಲಿ ತಂದು ಇರಿಸಲಾಗಿತ್ತು, ಯಾರು ಇಟ್ಟಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಸಿಸಿಟಿವಿ ಇಲ್ಲದ ಜಾಗ

ಸ್ಫೋಟಕ ಪತ್ತೆಯಾದ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇಲ್ಲದಿರುವುದು ತನಿಖಾ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ, ಆದಾಗ್ಯೂ, ರಸ್ತೆಯ ಪ್ರವೇಶ ಮತ್ತು ನಿರ್ಗಮನ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಒಂದು ತಂಡ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ಮಾಡುತ್ತಿದ್ದು, ಮತ್ತೊಂದು ತಂಡ ಸ್ಥಳಕ್ಕೆ ಜಿಲೆಟಿನ್ ಕಡ್ಡಿ ಹೇಗೆ ಬಂತು, ಯಾರು ತಂದು ರಸ್ತೆ ಪಕ್ಕ ಹಾಕಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದೆ.

ಸ್ಫೋಟಕ ಕಡ್ಡಿಗಳನ್ನು ವಿದ್ವಂಸಕ ಕೃತ್ಯಕ್ಕೆ ಬಳಸಲಾಗಿತ್ತೇ ಅಥವಾ ಕ್ವಾರಿಗೆ ತೆಗೆದುಕೊಂಡು ಹೋಗುವಾಗ ಪೊಲೀಸರನ್ನು ಕಂಡು ಭಯದಿಂದ ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಎಸೆದು ಹೋಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದೆ.

ಗೋದಾಮುಗಳ ತಪಾಸಣೆ

ಜಿಲೆಟಿನ್ ಕಡ್ಡಿ ಬಳಸುವ ಕಲ್ಲು ಕ್ವಾರಿ ಮಾಲೀಕರು ಹಾಗೂ ಕಾರ್ಮಿಕರ ಕುರಿತು ತನಿಖಾ ತಂಡಗಳು ಮಾಹಿತಿ ಕಲೆಹಾಕುತ್ತಿದ್ದು, ಸುತ್ತಮುತ್ತಲ ಗೋದಾಮುಗಳ ತಪಾಸಣೆ ನಡೆಸಲಾಗುತ್ತಿದೆ.

ಕಗ್ಗಲಿಪುರ ಠಾಣೆ ಪೊಲೀಸ್ ಮತ್ತು ಎನ್‌ಐಎ ತಂಡ ಜಂಟಿಯಾಗಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ಇಟ್ಟಿವೆ.

ಕೃತ್ಯದ ಹಿಂದೆ ಅಂತರರಾಜ್ಯ ಅಥವಾ ಅಂತರಜಿಲ್ಲಾ ನಂಟು ಇದೆಯೇ ಎಂಬ ಕುರಿತು ‘ರಾ’ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಭದ್ರತಾ ಲೋಪ

ಅತ್ಯಂತ ಬಿಗಿ ಭದ್ರತೆ ನಡುವೆಯೂ ಭದ್ರತಾ ಲೋಪ ಸಂಭವಿಸಿರುವುದು ಕೇಂದ್ರ ಮತ್ತು ರಾಜ್ಯದ ಭದ್ರತಾ ಏಜೆನ್ಸಿಗಳಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಪ್ರಕರಣ ಸಂಬಂಧ 3 ತಂಡಗಳು ಪ್ರತ್ಯೇಕವಾಗಿ ಜಿಲಿಟಿನ್ ಕಡ್ಡಿ ಹಾಗೂ ಬೆಂಕಿ ಪೊಟ್ಟಣ ಪತ್ತೆಯಾದ ಬೆಂಗಳೂರು ದಕ್ಷಿಣ ಜಿಲ್ಲೆಯ ಕಗ್ಗಲೀಪುರ ಸಮೀಪವಿರುವ ವಡೇರಹಳ್ಳಿ ಕೆರೆಗೆ ಭೇಟಿ ಕೊಟ್ಟು ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆಯುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
gelatin sticks found in the wayinvestigation is onpm narendra modi visit to bengalurusecurity breach
0 FacebookTwitterPinterestEmail
admin

previous post
ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ
next post
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

You may also like

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

June 20, 2026

ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

June 19, 2026

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

June 18, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (500)
  • ಅಂಕಣ (109)
  • ಉದ್ಯೋಗ (334)
  • ದಿನ ಭವಿಷ್ಯ (110)
  • ರಾಜಕೀಯ (1,994)
  • ರಾಜ್ಯ (2,308)
  • ರಾಷ್ಟ್ರ (2,273)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026
  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026

KMS Special

  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026
  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ