Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

by KM Shivaraju May 19, 2026
written by KM Shivaraju May 19, 2026 0 comments 2 minutes read
0FacebookTwitterPinterestEmail
70

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ. ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರ್ಕಾರ ಕಣ್ತೆರೆಯುತ್ತದೆ ಎಂದು ಭಾವಿಸಿದ್ದೆ. ಆದರೆ, ಸಾಧನಾ ಸಮಾವೇಶಗಳನ್ನು ಮಾಡುವುದರಲ್ಲಿ ಸಂಭ್ರಮಿಸುತ್ತಿರುವ ಈ ಸರ್ಕಾರಕ್ಕೆ ರೈತರ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಿಡಿಕಾರಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ರಾಜ್ಯದಲ್ಲಿ 2023ರಲ್ಲಿ 2,423 ಹಾಗೂ 2024ರಲ್ಲಿ 2,971 ರೈತರು, ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಒಟ್ಟು 5,394 ರೈತರು ಜೀವ ಚೆಲ್ಲಿದ್ದಾರೆ. ಕರ್ನಾಟಕ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯ ಸರ್ಕಾರಕ್ಕೆ ಈ ಅಂಕಿ ಅಂಶಗಳು ಗೊತ್ತಿಲ್ಲವೇ? ಅಥವಾ ಗೊತ್ತಿದ್ದರೂ ಮುಚ್ಚಿಟ್ಟಿದಿಯೇ ಎನ್ನುವ ಅನುಮಾನ ಕಾಡುತ್ತಿದೆ ಎಂದು ಅವರು ದೂರಿದರು.

ಇಷ್ಟು ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಟೀಕಿಸಿದರು.

ಕೇವಲ ಹತ್ತು ನಿಮಿಷಗಳ ಕಾಲ ಮಳೆ ಬಂದರೆ ನೀರು ನಿಲ್ಲುತ್ತದೆ. ಈ ಸಮಾವೇಶಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಮಾಡಿದೆ. ಜನರನ್ನೂ ಸರ್ಕಾರವೇ ಕರೆತರಬೇಕು. ಅದಕ್ಕೆ ಅಧಿಕಾರಿಗಳಿಗೆ ಇಂತಿಷ್ಟು ಜನರನ್ನು ಕರೆದುಕೊಂಡು ಬರುವುದಕ್ಕೆ ಟಾರ್ಗೆಟ್ ಫಿಕ್ಸ್ ಮಾಡಿದ್ದರು. ಕಾಂಗ್ರೆಸ್ ನವರ ಕಾರ್ಯಕ್ರಮಗಳಿಗೆ ಜನ ಬರಬೇಕಲ್ಲ, ಅದಕ್ಕಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಈ ಸರ್ಕಾರ ರೈತರ ಜೀವನದ ಮೇಲೆ ಸಮಾಧಿ ಕಟ್ಟಿ, ಅದರ ಮೇಲೆ ತಮ್ಮ ವೈಭವ ಪ್ರದರ್ಶನ ಮಾಡುತ್ತಿದ್ದಾರೆ. ಇವರನ್ನು ಜನ ಕ್ಷಮಿಸುವುದಿಲ್ಲ. ಒಂದೆಡೆ ರೈತರು ನಿತ್ಯವೂ ಸಾಯುತ್ತಿದ್ದಾರೆ. ಇವರು ಗ್ಯಾರಂಟಿ ಹೆಸರಿನಲ್ಲಿ ಹಬ್ಬ ಮಾಡುತ್ತಿದ್ದಾರೆ. ಇವರ ಗ್ಯಾರಂಟಿಗಳು ಉತ್ತಮವಾಗಿ ಇದ್ದಿದ್ದರೆ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಅವರು ಅತ್ಯಂತ ತೀಕ್ಷ್ಣವಾಗಿ ಪ್ರಶ್ನಿಸಿದರು.

ಸಮಾವೇಶದ ಹೆಸರಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಕಳೆದ ವರ್ಷ ಕೂಡ ಹಕ್ಕು ಪತ್ರಗಳ ಬಗ್ಗೆಯೇ ಹೆಚ್ಚು ಚರ್ಚೆ ಮಾಡಿದ್ದರು. ನಮ್ಮ ಬಳಿ ಬರುವ ರೈತರು ಹಾಗೂ ಅನೇಕ ಜಿಲ್ಲೆಗಳಲ್ಲಿ ನಾವು ಹೋದಾಗ ಕಂದಾಯ ಇಲಾಖೆಯ ಬಗ್ಗೆಯೇ ಹೆಚ್ಚು ದೂರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಕೊಡುತ್ತಿದ್ದೇವೆ ಎಂದು ಇವರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ರೈತ ಆತ್ಮಹತ್ಯೆ ಪ್ರಕರಣಗಳು ಇವರ ಯೋಗ್ಯತೆಯನ್ನು ಸಾರಿ ಸಾರಿ ಸಾರಿ ಹೇಳುತ್ತಿವೆ ಎಂದು ಸಚಿವರು ಅಕ್ರೋಶ ವ್ಯಕ್ತಪಡಿಸಿದರು.

ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆಗೆ ಸಿದ್ದ

ಬಿಡದಿ ಟೌನ್ ಶಿಪ್ ವಿಚಾರವಾಗಿ ಚರ್ಚೆಗೆ ಪಂಥಾಹ್ವಾನ ನೀಡಿರುವ ರಾಜ್ಯದ ಉಪ ಮುಖ್ಯಮಂತ್ರಿಯ ಸವಾಲನ್ನು ಸ್ವೀಕರಿಸಿದ ಕೇಂದ್ರ ಸಚಿವರು, ಚರ್ಚೆ ಮಾಡಲು ತಯಾರಿದ್ದೇನೆ. ಎಲ್ಲಿಗೆ ಬೇಕಾದರೂ ಬರಲಿ. ಬಿಡದಿಯಲ್ಲಿ ಮೂರೂವರೆ ಸಾವಿರ ಜನ ತಕರಾರು ತೆಗೆದು ಅರ್ಜಿ ಕೊಟ್ಟಿದ್ದಾರೆ. ರೈತರನ್ನು ರೌಡಿಗಳು ಮತ್ತು ಪೊಲೀಸರ ಮೂಲಕ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಯೋಜನೆಯಿಂದ ಒಳ್ಳೆಯದು ಆಗುವುದಿದ್ದರೆ ರೈತರೆ ಸಂತೋಷವಾಗಿ ಭೂಮಿ ಕೊಡುತ್ತಿದ್ದರು. ಆದರೆ ಅಲ್ಲಿ ಭೂಮಿ ಕೊಡಲು ರೈತರು ಬಯಸುತ್ತಿಲ್ಲ. ಹೀಗಾಗಿ ರೈತರ ಹಿತಕ್ಕೆ ತಕ್ಕಂತೆ ಸರ್ಕಾರ ವರ್ತಿಸಬೇಕು ಎಂದು ಅವರು ಹೇಳಿದರು

ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್ ಸೇರುತ್ತಾರೆ

ಎರಡು ಬಾರಿ ಶಾಸಕರಾಗಿ ಗೆದ್ದಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ್ದಾಗಿ ಸಚಿವ ಕುಮಾರಸ್ವಾಮಿ ತಿಳಿಸಿದರು.

ಇದೊಂದು ಗೌರವಪೂರ್ವಕ ಭೇಟಿ ಎಂದ ಅವರು, ಜೆಡಿಎಸ್ ಪಕ್ಷ ಸೇರಲು ಅವರು ಉತ್ಸುಕರಾಗಿದ್ದಾರೆ. ಸದ್ಯದಲ್ಲೇ ದಿನಾಂಕ ನಿಗದಿ ಮಾಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಪಕ್ಷದ ಬಲವರ್ಧನೆಗೆ ನಾವು ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇವೆ. ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದೇವೆ. ಅದರ ಭಾಗವಾಗಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2 years394 Farmers Lost5congressDeliberatelyFarmerGovernmentH.D.KumaraswamystateSuicide CasesSuppressedunion minister
0 FacebookTwitterPinterestEmail
KM Shivaraju

previous post
ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ
next post
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ