Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣಕಹಳೆ

by KM Shivaraju May 23, 2026
written by KM Shivaraju May 23, 2026 0 comments 1 minutes read
0FacebookTwitterPinterestEmail
70

ಬೆಂಗಳೂರು:ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಗೊಂದಲ ತಾರಕಕ್ಕೇರಿರುವ ಬೆನ್ನಲ್ಲೇ ಬಿಜೆಪಿ ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ರಣಕಹಳೆ ಊದಿದೆ.

ಕಳೆದ ಎರಡು ತಿಂಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ಕೇಂದ್ರ ಬಿಜೆಪಿಯ ವಿವಿಧ ವಿಭಾಗಗಳ ಮುಖಂಡರು ಕರ್ನಾಟಕದ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧ ಮಾಡುತ್ತಿದ್ದಾರೆ.

ನಿತಿನ್ ನಬೀನ್ ರಾಜ್ಯ ಪ್ರವಾಸ

ಇದರ ಬೆನ್ನಲ್ಲೇ ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ರಾಜ್ಯಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಬಿಹಾರ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿದ ಬಿಜೆಪಿ, ಇದೀಗ 2028ರಲ್ಲಿ ಕರ್ನಾಟಕ ಚುನಾವಣೆಯತ್ತ ಮುಖ ಮಾಡಿದೆ.

ಕಾಂಗ್ರೆಸ್‌ನ ಆಂತರಿಕ ಕಚ್ಚಾಟವನ್ನೇ ಬಂಡವಾಳ ಮಾಡಿಕೊಂಡು, ತೆರೆಮರೆಯಲ್ಲಿ ಪಕ್ಷ ಸಂಘಟನೆಗೆ ದೆಹಲಿ ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ.

ಚುನಾವಣಾ ಅಖಾಡಕ್ಕೆ ಭೂಮಿಕೆ

ನಬೀನ್ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ರಾಜ್ಯ ಭೇಟಿ ಇದಾಗಿದ್ದು ಈ ಸಂದರ್ಭದಲ್ಲೇ ಚುನಾವಣಾ ಅಖಾಡಕ್ಕೆ ಭೂಮಿಕೆ ಸಿದ್ಧಗೊಳಿಸುತ್ತಿದ್ದಾರೆ.

ನಾಳೆ ಭಾನುವಾರ, ಇಡೀ ದಿನ ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರು, ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ನಿರಂತರ ಸಭೆ ನಡೆಸಲಿದ್ದಾರೆ.

ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ಸಂಸದರು, ಶಾಸಕರ ಜೊತೆ ಎರಡು ಗಂಟೆಗಳ ಕಾಲ ಸಮಾಲೋಚನೆ ನಡೆಸಲಿದ್ದಾರೆ.

ಚುನಾವಣೆಗೆ ಸಿದ್ಧರಾಗಿ

ಈ ಸಂದರ್ಭದಲ್ಲಿ ರಾಜ್ಯದಲ್ಲಿನ ರಾಜಕೀಯ ಸ್ಥಿತಿಗತಿ ಅವಲೋಕನದ ಜೊತೆಗೆ, ಬರುವ ೨೦೨೮ಕ್ಕೆ ಅಥವಾ ಅದಕ್ಕೂ ಮೊದಲು ಮಧ್ಯಂತರ ಚುನಾವಣೆ ಎದುರಾದರೆ ಸಿದ್ಧರಾಗಿರುವಂತೆ ಸೂಚಿಸಲಿದ್ದಾರೆ.

ಸ್ಥಳೀಯ ಸರ್ಕಾರ ಮತ್ತು ರಾಜಕೀಯಕ್ಕೆ ಸಂಬಂಧಿಸಿದಂತೆ ಪಕ್ಷದ ಜನಪ್ರತಿನಿಧಿಗಳಿಂದಲೂ ಮಾಹಿತಿ ಪಡೆಯುವುದಲ್ಲದೆ, ಮುಂದಿನ ಚುನಾವಣೆ ಬಗ್ಗೆಯೂ ವಿವರ ಪಡೆಯಲಿದ್ದಾರೆ.

ಕೋರ್ ಕಮಿಟಿ ಸಭೆ

ನಂತರ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ, ಕೆಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಭೆ ನಂತರ ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಿಕ್ಷಣ ಶಿಬಿರದಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2028 assembly electionsbjp national presidentleaders meetingnitin nabin state visittwo day state tour
0 FacebookTwitterPinterestEmail
KM Shivaraju

previous post
ಕರ್ನಾಟಕದಿಂದ ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕಸರತ್ತು
next post
ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಗೊಂದಲಕ್ಕೆ ಹೈಕಮಾಂಡ್ ಮುಲಾಮು

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ