Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

by KM Shivaraju May 27, 2026
written by KM Shivaraju May 27, 2026 0 comments 1 minutes read
0FacebookTwitterPinterestEmail
86

ಬೆಂಗಳೂರು: ಕಾಂಗ್ರೆಸ್ ವರಿಷ್ಠರ ಸಲಹೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಮೇ 28 ಬೆಳಗ್ಗೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಗುರುವಾರ ಬೆಳಗ್ಗೆ 11 ರಿಂದ 11:30ರ ನಡುವೆ ರಾಜ್ಯಪಾಲರ ಭೇಟಿಗೆ ಮುಖ್ಯಮಂತ್ರಿ ಕಾರ್ಯಾಲಯ ಸಮಯ ಪಡೆದುಕೊಂಡಿದೆ.

ರಾಜಭವನಕ್ಕೆ ತೆರಳುವುದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮಂತ್ರಿಮಂಡಲದ ತಮ್ಮ ಎಲ್ಲಾ ಸಹೋದ್ಯೋಗಿಗಳಿಗೆ ಸರ್ಕಾರಿ ನಿವಾಸ ಕಾವೇರಿಯಲ್ಲಿ ಉಪಹಾರ ಕೂಟ ಏರ್ಪಡಿಸಿದ್ದಾರೆ.

ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಸಲಹೆ ಹಾಗೂ ಯುವನಾಯಕತ್ವಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸ್ಥಾನ ತ್ಯಜಿಸುತ್ತಿರುವುದಾಗಿ ಉಪಹಾರ ಕೂಟದಲ್ಲೇ ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಲಿದ್ದಾರೆ.

ಕಳೆದ ಮೇ 26ರಂದು ಎಐಸಿಸಿ ನಾಯಕರ ಸಮ್ಮುಖದಲ್ಲಿ ನಡೆದ ಮಾತುಕತೆಗಳ ಮಾಹಿತಿ ನೀಡಿ, ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮ ಹೆಗಲಿಗೆ ನಿಂತ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಿದ್ದಾರೆ.

ರಾಜಭವನಕ್ಕೆ ತೆರಳುವ ಮುನ್ನ ಅಥವಾ ನಂತರ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ರಾಜೀನಾಮೆ ನೀಡಬೇಕಾದ ಕುರಿತು ಅಧಿಕೃತ ಮಾಹಿತಿ ನೀಡಲಿದ್ದಾರೆ.

ವಿಧಾನಸೌಧದ ಪ್ರಾಂಗಣದಲ್ಲಿರುವ ಮಾಜಿ ಪ್ರಧಾನಿ ದಿವಂಗತ ಜವಾಹರ ಲಾಲ್ ನೆಹರು ಪ್ರತಿಮೆಗೆ ಮಾಲಾರ್ಪಣೆ ನಂತರ ಮಾಧ್ಯಮದವರು ಸುತ್ತುವರೆದು ರಾಜೀನಾಮೆ ವಿಷಯ ಪ್ರಸ್ತಾಪಿಸಿದ ವೇಳೆ ಏನನ್ನೂ ಪ್ರತಿಕ್ರಿಯಿಸಲು ಅವರು ಇಚ್ಛಿಸಲಿಲ್ಲ. ಆದರೆ, ಕೊನೆಗೆ ಹೊರಡುವ ಮುನ್ನ, ಮೇ 28 ರಂದು ನಿಮ್ಮನ್ನು ಭೇಟಿ ಆಗುತ್ತೇನೆ. ಅಲ್ಲಿ ಎಲ್ಲವನ್ನೂ ಮಾತನಾಡುತ್ತೇನೆ ಎಂದಷ್ಟೇ ತಿಳಿಸಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಗೊಂದಲ ನಿವಾರಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೇ 26 ರಂದು ಇಡೀ ದಿನ ನಡೆಸಿದ ಸಭೆ ಮತ್ತು ಸಂಧಾನದ ನಂತರ, ನಾಯಕತ್ವ ಬದಲಾವಣೆ ತೀರ್ಮಾನ ಕೈಗೊಳ್ಳಲಾಯಿತು.

ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹೇಳಿದರೆ ಅಧಿಕಾರ ಬಿಡುವುದಾಗಿ ಹೇಳಿಕೊಂಡೇ ಬಂದಿದ್ದ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ತ್ಯಜಿಸುವಂತೆ ರಾಹುಲ್ ಮೂಲಕವೇ ಖರ್ಗೆ ಹೇಳಿಸಿದರು.

ರಾಹುಲ್ ಸಲಹೆ ಮೇರೆಗೆ ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ ಅಂದು ರಾತ್ರಿಯೇ ನಗರಕ್ಕೆ ಹಿಂತಿರುಗಿದರು, ಇಂದು ಜವಾಹರಲಾಲ್ ನೆಹರು ಪುಣ್ಯತಿಥಿ ಹೊರತುಪಡಿಸಿ ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ಮನೆಯಲ್ಲೇ ಉಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
adviceChief MinistercongressleadersMay 28resignSiddaramaiah
0 FacebookTwitterPinterestEmail
KM Shivaraju

previous post
ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ
next post
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ