Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

by KM Shivaraju June 2, 2026
written by KM Shivaraju June 2, 2026 0 comments 1 minutes read
0FacebookTwitterPinterestEmail
179

ಬೆಂಗಳೂರು : ಸರ್ವಧರ್ಮ ಗುರುಗಳು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಲೋಕಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸಂಜೆ 4 ಗಂಟೆ 5 ನಿಮಿಷಕ್ಕೆ ಶಿವಕುಮಾರ್ ಅವರಿಗೆ ಪ್ರಮಾಣವಚನ ಭೋದಿಸಲಿದ್ದಾರೆ.

ಶಿವಕುಮಾರ್ ತಾವು ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲೇ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಕೆಲವರನ್ನೂ ಸೇರಿದಂತೆ ಹೊಸ ಮುಖಗಳನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು ಜೂನ್ 3 ರಿಂದಲೇ ಆಡಳಿತ ನಡೆಸಲಿದ್ದಾರೆ. ಪ್ರಮಾಣ ವಚನ‌ ಸ್ವೀಕರಿಸಿದ ನಂತರ ವಿಧಾನಸೌಧದಲ್ಲಿ‌‌ ಮುಖ್ಯಮಂತ್ರಿಗಳ ಕಚೇರಿಯ ಪೂಜೆ ಹಾಗೂ ಅಜ್ಜಯ್ಯ ಅವರ ಪೂಜೆ ಸಲ್ಲಿಸಲಿದ್ದಾರೆ. ಅನಂತರ ಸಚಿವ ಸಂಪುಟಸಭೆ ನಡೆಸಲಿದ್ದಾರೆ.

ಧರ್ಮಗುರುಗಳು, ಗಣ್ಯರ ಜೊತೆಗೆ ರಾಜ್ಯದ ಪ್ರಮುಖ ರಾಜಕಾರಣಿಗಳು, ಸಂಸದರು, ಶಾಸಕರು, ಆಯ್ದ ಪ್ರಮುಖ ಅಧಿಕಾರಿಗಳು ಸೇರಿದಂತೆ 1200 ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಗಾಜಿನ ಮನೆ ಒಳಗೆ ಹಾಗೂ ಹೊರಭಾಗದಲ್ಲಿ ಹುಲ್ಲು ಹಾಸಿನಮೇಲೆ ಆಸನಗಳನ್ನು ವ್ಯವಸ್ಥೆ ಮಾಡಲಾಗಿದೆ.
ಜನಪ್ರತಿನಿಧಿಗಳು, ಸಚಿವರಾಗುವವರ ಕುಟುಂಬ ವರ್ಗ, ಅಧಿಕಾರಿಗಳು ಒಂದಡೆಯಾದರೆ, ಮತ್ತೊಂದಡೆ ಧರ್ಮಗುರುಗಳು ಮತ್ತು ವಿಶೇಷ ಆಹ್ವಾನಿತ ಗಣ್ಯರಿಗೆ ಸ್ಥಳ ಕಾಯ್ದಿರಿಸಲಾಗಿದೆ.

ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜಭವನದಿಂದ ವಿಧಾನಸೌಧದವರೆಗೂ ತೆರೆದ ಜೀಪ್‌ನಲ್ಲಿ ಬರಲಿದ್ದಾರೆ.
ಈ ಸಲುವಾಗಿ ವಿಧಾನಸೌಧ ಹಾಗೂ ಲೋಕಭವನದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ನಿಷೇಧ ಮಾಡುವುದರ ಜೊತೆಗೆ ಇಲ್ಲಿನ ಆಸುಪಾಸಿನ ಸರ್ಕಾರಿ ಕಚೇರಿಗಳಿಗೆ ಮಧ್ಯಾಹ್ನದ ನಂತರ ರಜೆ ಘೋಷಣೆ ಮಾಡಿದೆ.

ಅಭಿಮಾನಿಗಳು ಮತ್ತು ಕಾರ್ಯಕರ್ತರು ಪ್ರಮಾಣವಚನದ ಕಾರ್ಯಕ್ರಮ ವೀಕ್ಷಿಸಲು ರಾಜಭವನದಿಂದ ಕೆ.ಆರ್. ವೃತ್ತದವರೆಗೂ ದೊಡ್ಡ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.
ಗಣ್ಯರಿಗೆ ಹೊರತುಪಡಿಸಿ, ಉಳಿದ ಪಕ್ಷದ ಕಾರ್ಯಕರ್ತರಿಗಾಗಲಿ, ಸಾರ್ವಜನಿಕರಿಗಾಗಲೀ ಲೋಕಭವನದಲ್ಲಿ ಪ್ರವೇಶವಿರುವುದಿಲ್ಲ.

ವಿಧಾನಸೌಧ ಮತ್ತು ಲೋಕಭವನ ಸರಹದ್ದಿನಲ್ಲಿ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ.
ಪ್ರಮಾಣವಚನ ಸುಲಲಿತವಾಗಿ ನಡೆಸುವ ದೃಷ್ಟಿಯಿಂದ ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಸಿದ್ಧತೆಗಳ ಉಸ್ತುವಾರಿ ವಹಿಸಿಕೊಂಡು ಕಾರ್ಯಕ್ರಮ ಸಿದ್ದತೆ ನಡೆಸಿದ್ದಾರೆ. ಅವರ ಸಲಹೆ ಮೇರೆಗೆ ಅಧಿಕಾರಿಗಳು, ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಂಡಿರುವುದಲ್ಲದೆ, ಪ್ರವೇಶ ಪತ್ರ ಹೊಂದಿರುವವರಿಗೆ ಮಾತ್ರ ಲೋಕಭವನಕ್ಕೆ ಪ್ರವೇಶಿಸಲು ಅವಕಾಶವಿರುತ್ತದೆ.

ಎಐಸಿಸಿಯ ಮಾರ್ಗದರ್ಶನದಂತೆ ಸುರೇಶ್ ಅವರು ಎಲ್ಲಾ ಪೂರ್ವ ಸಿದ್ದತೆ ಮಾಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂದು ಬಂದೋಬಸ್ತ್‌ಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನೇ ನಿಯೋಜಿಸಲಾಗಿದೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಸರ್ಕಾರದ ಮಟ್ಟದಲ್ಲಿ ಕೆಲವು ಬದಲಾವಣೆಗಳನ್ನು ತರಲು ಐಎಎಸ್/ಐಪಿಎಸ್ ಅಧಿಕಾರಿಗಳನ್ನು ಬದಲಾವಣೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರೂ ಸೇರಿದಂತೆ ಕೆಲವು ಪ್ರಮುಖ ಹುದ್ದೆಗಳಿಗೆ ಯಾವ ಅಧಿಕಾರಿಗಳನ್ನು ನೇಮಕ ಮಾಡಬೇಕೆಂಬುದನ್ನು ಪಟ್ಟಿ ಸಿದ್ದಗೊಂಡಿದೆ. ಸಿಬಿಐನಲ್ಲಿ ಸೇವೆ ಸಲ್ಲಿಸಿದ್ದ ಎಡಿಜಿಪಿ ಹಿತೇಂದ್ರ ಅವರನ್ನು ಶಿವಕುಮಾರ್, ಗುಪ್ತಚರದ ಮುಖ್ಯಸ್ಥರಾಗಿ ನೇಮಕ ಮಾಡಿಕೊಳ್ಳುತ್ತಿದ್ದು, ಅವರು ಈಗಾಗಲೇ ಬಾಹ್ಯವಾಗಿ ತಮ್ಮ ಕೆಲಸ ಆರಂಭಿಸಿದ್ದಾರೆ.

ಪ್ರಮಾಣ ವಚನ ಸಿದ್ದತೆ ಜೊತೆಗೆ ಸುರೇಶ್ ಆಯಕಟ್ಟಿನ ಜಾಗದಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡುವ ಸಂಬಂಧ ಆಡಳಿತ ಸೇವೆಯಲ್ಲಿ ನುರಿತ ಅಧಿಕಾರಿಗಳ ಮಾರ್ಗದರ್ಶನ ಪಡೆದುಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief MinisterDKglass housegovernorJune 3Lok BhawanoathPresencereligious leadersShivakumarsimple ceremonyThaawarchand Gehlot
0 FacebookTwitterPinterestEmail
KM Shivaraju

previous post
ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ
next post
ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ