Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮೇಕೆದಾಟು: ಶಿವಕುಮಾರ್-ವಿಜಯ್ ಮಹತ್ವದ ಚರ್ಚೆ

by KM Shivaraju June 15, 2026
written by KM Shivaraju June 15, 2026 0 comments 1 minutes read
0FacebookTwitterPinterestEmail
62

ನವದೆಹಲಿ:ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಗೆ ಸಮಾನಾಂತರವಾಗಿ ಮೇಕೆದಾಟು ಬಳಿ ಜಲಾಶಯ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಮಹತ್ವದ ಚರ್ಚೆ ನಡೆಸಿರುವುದು ಬೆಳಕಿಗೆ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ನೀತಿ ಆಯೋಗದ ಸಭೆ ನಂತರ ಉಭಯ ನಾಯಕರು, ಜಲಾಶಯ ನಿರ್ಮಾಣದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಿರುವುದು ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ನದಿ ಪಾತ್ರದ ರೈತರಲ್ಲಿ ಆಶಾಭಾವನೆ ಮೂಡಿಸಿದೆ.

ಯೋಜನೆಯಿಂದ ಆಗಲಿರುವ ಲಾಭ

ನೀತಿ ಆಯೋಗದ ಸಭೆ ನಂತರ ಶಿವಕುಮಾರ್ ಅವರೇ ವಿಜಯ್ ಬಳಿ ತೆರಳಿ ಇಬ್ಬರೂ ಒಂದೆಡೆ ಕುಳಿತ ವೇಳೆ, ನಮ್ಮ ಮುಖ್ಯಮಂತ್ರಿ, ಯೋಜನೆ ಸಾಕಾರದಿಂದ ಆಗಲಿರುವ ಲಾಭ ಕುರಿತು ಪೂರ್ಣ ಮಾಹಿತಿ ನೀಡಿದರು.

ಉಭಯ ರಾಜ್ಯಗಳ ಗಡಿ ಭಾಗದಲ್ಲಿ ಜಲಾಶಯ ನಿರ್ಮಾಣದಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚು ಲಾಭವಾಗಲಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದ ಸಂದರ್ಭದಲ್ಲಿ ಸಮುದ್ರಕ್ಕೆ ಪೋಲಾಗುವ ನೀರನ್ನು ತಡೆಹಿಡಿದು, ಕುಡಿಯಲು ಮಾತ್ರ ಬಳಸುತ್ತೇವೆ.

ತಮಿಳುನಾಡು ರೈತರಿಗೆ ಅನುಕೂಲ

ಸಂಕಷ್ಟ ಸಂದರ್ಭದಲ್ಲಿ ಹಿಡಿದಿಟ್ಟ ನೀರು ತಮಿಳುನಾಡು ರೈತರಿಗೆ ಅನುಕೂಲವಾಗಲಿದೆ, ನಾವು ಯಾವುದೇ ಕಾರಣಕ್ಕೂ ಕೃಷಿಗೆ ಬಳಸುವುದಿಲ್ಲ, ವಾರ್ಷಿಕವಾಗಿ ನಿಮಗೆ ನಿಗದಿ ಪಡಿಸಿರುವ ನೀರಿನ ಹರಿವಿನಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂಕೋರ್ಟ್ ಮೇಕೆದಾಟು ಯೋಜನೆಗೆ ಈಗಾಗಲೇ ಹಸಿರು ನಿಶಾನೆ ತೋರಿದೆ, ಇದುವರೆಗೂ ತಮಿಳುನಾಡಿನಲ್ಲಿ ಆಳ್ವಿಕೆಯಲ್ಲಿದ್ದ ರಾಜಕೀಯ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿವೆ.

ರೈತರಿಗಾಗಿ ಮೇಕೆದಾಟು ಯೋಜನೆ ಬಗ್ಗೆ ಮತ್ತೊಮ್ಮೆ ನಿಮ್ಮ ನಿರ್ಧಾರ ಪುನರ್ ಪರಿಶೀಲಿಸಿ ಎಂದು ವಿಜಯ್ ಅವರಿಗೆ ಶಿವಕುಮಾರ್ ಮನವಿ ಮಾಡಿದ್ದಾರೆ.

ರೈತರೊಂದಿಗೆ ಸಮಾಲೋಚನೆ

ಶಿವಕುಮಾರ್ ಮಾಹಿತಿ ಆಲಿಸಿದ ವಿಜಯ್, ಯಾವುದೇ ಸ್ಪಷ್ಟ ಭರವಸೆ ನೀಡದಿದ್ದರೂ, ಕಾನೂನು ತಜ್ಞರು ಮತ್ತು ರೈತರೊಂದಿಗೆ ಸಮಾಲೋಚಿಸಿ ನಂತರ ತಮ್ಮ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಿದ್ದರೂ, ಇದನ್ನು ಉಭಯ ಸರ್ಕಾರಗಳು ಅಧಿಕೃತಗೊಳಿಸಿಲ್ಲ.

ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾವೇರಿ ವಿಚಾರ ಕುರಿತು ಶಿವಕುಮಾರ್ ಹಾಗೂ ವಿಜಯ್ ಚರ್ಚೆ ಮಾಡಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.

ವಿಜಯ್ ದಕ್ಷಿಣ ಕನ್ನಡ ಪ್ರವಾಸ

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ವಿಜಯ್ ಕಳೆದ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಗೆ ಒಂದು ದಿನದ ಪ್ರವಾಸ ಕೈಗೊಂಡಿದ್ದರು.

ವಿಜಯ್ ಭೇಟಿ ವಿರೋಧಿಸಿ ಸ್ಥಳೀಯ ಕನ್ನಡಪರ ಸಂಘಟನೆಗಳು ಬೀದಿಗಿಳಿದಿದ್ದನ್ನು ಪ್ರಸ್ತಾಪಿಸಿದ ಖಾದರ್, ದೆಹಲಿಯಲ್ಲಿ ಮಾತುಕತೆ ನಡೆದಿರುವುದನ್ನು ಬಹಿರಂಗ ಪಡಿಸಿದ್ದಲ್ಲದೆ, ಮೇಕೆದಾಟು ವಿಚಾರದಲ್ಲಿ ಶಿವಕುಮಾರ್ ಜೊತೆ ಒಗ್ಗಟ್ಟಿನಲ್ಲಿರುವುದಾಗಿ ತಿಳಿಸಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chief ministers meetd k shivakumarjosef vijaykarnatakakaveri rivermekedatu damneeti aayoganewdelhitamilunadu
0 FacebookTwitterPinterestEmail
KM Shivaraju

previous post
ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ
next post
ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

You may also like

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

August 3, 2026

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (531)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,025)
  • ರಾಜ್ಯ (2,339)
  • ರಾಷ್ಟ್ರ (2,304)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026

KMS Special

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ