Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, August 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

by KM Shivaraju June 18, 2026
written by KM Shivaraju June 18, 2026 0 comments 1 minutes read
0FacebookTwitterPinterestEmail
57

ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರು ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಆಯ್ಕೆಗೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ.

ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ತಿಪ್ಪಣ್ಣಪ್ಪ ಕಮಕ್ನೂರು, ಬಿ.ಎಸ್.ಶಿವಣ್ಣ, ವಿನಯ್ ಕಾರ್ತಿಕ್, ಬಿಜೆಪಿಯ ಲಿಂಗರಾಜ ಪಾಟೀಲ್, ರಘು ಕೌಟಿಲ್ಯ ಚುನಾಯಿತರಾಗಿದ್ದಾರೆ.

ಗೋವಿಂದರಾಜು ಪರಾಭವ

ಒಂದು ಸ್ಥಾನಕ್ಕೆ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್‌ನ ವಿನಯ್ ಕಾರ್ತಿಕ್, ಜೆಡಿಎಸ್‌ನ ಗೋವಿಂದರಾಜು ಅವರನ್ನು ಪರಾಭವಗೊಳಿಸಿ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.

ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್‌ನ ಗೋವಿಂದರಾಜು ಗೆಲುವಿಗೆ ಅಗತ್ಯವಿರುವ ಮೊದಲ ಪ್ರಾಶಸ್ತ್ಯ ಮತಗಳ ಕೊರತೆ ಇದ್ದರೂ ಕಣದಲ್ಲಿದ್ದರು.

ಕಾಂಗ್ರೆಸ್ ತಮ್ಮ ಮೊದಲ ನಾಲ್ಕು ಅಭ್ಯರ್ಥಿಗಳಿಗೆ ತಲಾ 30 ಮೊದಲ ಪ್ರಾಶಸ್ತ್ಯ ಮತಗಳನ್ನು ಹಂಚಿ, ನಂತರ ಉಳಿದ ಪಕ್ಷದ ಹಾಗೂ ಪಕ್ಷೇತರ ಶಾಸಕರ ಮತಗಳನ್ನು ವಿನಯ್ ಕಾರ್ತಿಕ್ ಅವರಿಗೆ ನಿಗದಿ ಪಡಿಸಿತ್ತು.

2ನೇ ಪ್ರಾಶಸ್ತ್ಯ ಮತ

ಅಲ್ಲದೆ, ಕಾಂಗ್ರೆಸ್‌ನ ಎಲ್ಲಾ ಸದಸ್ಯರು ತಮ್ಮ 2ನೇ ಪ್ರಾಶಸ್ತ್ಯ ಮತಗಳನ್ನು ವಿನಯ್ ಕಾರ್ತಿಕ್ ಪರ ಚಲಾಯಿಸಿದ್ದರಿಂದ ಅವರು ಅಧಿಕೃತ ಅಭ್ಯರ್ಥಿಗಳಿಗಿಂತ ಹೆಚ್ಚು ಮತ ಪಡೆದು ಚುನಾಯಿತರಾಗಿದ್ದಾರೆ.

ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಾಭಿಪ್ರಾಯವನ್ನು ರಾಜಕೀಯ ಲಾಭಕ್ಕೆ ಪರಿವರ್ತಿಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಶಾಸಕರ ಸಂಖ್ಯಾಬಲ ಇಲ್ಲದಿದ್ದರೂ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು.

ಆದರೆ, ಅವರ ನಿರೀಕ್ಷೆ ಹುಸಿಯಾಗಿ ತಮ್ಮ ಅಭ್ಯರ್ಥಿಗೆ ಪಕ್ಷದ 18 ಮತಗಳ ಜೊತೆಗೆ ಬಿಜೆಪಿಯ ಉಳಿಕೆ ಮತಗಳು ಲಭ್ಯವಾದರೂ ಗೆಲುವಿನ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ.

ಮೂರು ದಿನ ರೆಸಾರ್ಟ್‌ನಲ್ಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ 5ನೇ ಅಭ್ಯರ್ಥಿ ವಿನಯ್ ಗೆಲುವಿಗಾಗಿ ಕಾಂಗ್ರೆಸ್‌ನ ಎಲ್ಲಾ ಶಾಸಕರನ್ನು ಮೂರು ದಿನ ರೆಸಾರ್ಟ್ ಒಂದರಲ್ಲಿ ಇಟ್ಟಿದ್ದರು.

ರೆಸಾರ್ಟ್‌ನಲ್ಲಿ ಮತದಾನ ವಿಧಾನ ಕುರಿತು ತರಬೇತಿ ನೀಡಲಾಗಿತ್ತು, ಮತದಾನ ದಿನವಾದ ಇಂದು ನೇರವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮತ್ತೊಂದು ಸಭೆ ನಡೆಸಿ, ಯಾವ ಅಭ್ಯರ್ಥಿಗೆ ಯಾರು ಮತ ಹಾಕಬೇಕೆಂಬ ಗೌಪ್ಯ ಚೀಟಿ ನೀಡಲಾಯಿತು.

ಮೊದಲ ಪ್ರಾಶಸ್ತ್ಯ ಮತಗಳ ಚಲಾವಣೆ ನಂತರ ದ್ವಿತೀಯ ಪ್ರಾಶಸ್ತ್ಯ ಮತವನ್ನು ವಿನಯ್ ಕಾರ್ತಿಕ್ ಅವರಿಗೆ ನೀಡುವಂತೆ ವಿಪ್ ಹೊರಡಿಸಲಾಗಿತ್ತು.

ಶಾಸಕರ ಮೇಲ್ವಿಚಾರಣೆ

ಪಕ್ಷದ ಶಾಸಕರು ಮತ ಚಲಾಯಿಸುವವರೆಗೂ ಶಿವಕುಮಾರ್ ಹಾಗೂ ಹರಿಪ್ರಸಾದ್ ವಿಧಾನಸೌಧದಲ್ಲಿನ ಪಕ್ಷದ ಕಚೇರಿಯಲ್ಲಿ ಕುಳಿತು ಮೇಲ್ವಿಚಾರಣೆ ನಡೆಸಿದರು.

ಅನಾರೋಗ್ಯದಿಂದ ಬಳಲುತ್ತಿದ್ದರೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಇಕ್ಬಾಲ್ ಹುಸೇನ್ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b k hariprasadbjp win 2 seatscongres win 5 seatscouncil electiond k shivakumarH D Kumaraswamyjds candidate defeated
0 FacebookTwitterPinterestEmail
KM Shivaraju

previous post
ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ
next post
ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

You may also like

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

August 3, 2026

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

July 29, 2026

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (531)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,025)
  • ರಾಜ್ಯ (2,339)
  • ರಾಷ್ಟ್ರ (2,304)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026

KMS Special

  • ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

    August 4, 2026
  • 33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

    August 3, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

    July 31, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ