Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

by KM Shivaraju June 20, 2026
written by KM Shivaraju June 20, 2026 0 comments 1 minutes read
0FacebookTwitterPinterestEmail
97

ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಆರಂಭವಾಗಿ ಹಲವು ದಿನ ಕಳೆದರೂ ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ, ಆದರೂ, ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಇಲ್ಲ, ಜನರು ಆತಂಕಕ್ಕೆ ಒಳಗಾಗಬಾರದು ಎಂದರು.

11 ಟಿಎಂಸಿ ನೀರು ಸಂಗ್ರಹ

ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ಪ್ರಸ್ತುತ 11 ಟಿಎಂಸಿ ನೀರು ಸಂಗ್ರಹವಿದೆ, ಹವಾಮಾನ ಇಲಾಖೆ ಪ್ರಕಾರ ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವ ಇರುವುದರಿಂದ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶಿತ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ, ಇದು ಸಂಪೂರ್ಣವಾಗಿ ಕುಡಿಯುವ ನೀರು ಯೋಜನೆಯಾಗಿದೆ.

ಈ ಜಲಾಶಯದಲ್ಲಿ ಸಂಗ್ರಹವಾಗುವ ನೀರನ್ನು ಕುಡಿಯುವುದಕ್ಕೆ ಅಲ್ಲದೆ, ಬೇರೆ ಉದ್ದೇಶಗಳಿಗೆ ಬಳಕೆ ಮಾಡುವುದಿಲ್ಲ ಎಂಬುದಾಗಿ ಕರ್ನಾಟಕ ತಿಳಿಸಿದ್ದರೂ, ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಿದೆ.

ಯೋಜನೆಗೆ ಅನಗತ್ಯ ಅಡ್ಡಿ

ಮೇಕೆದಾಟು ಜಲಾಶಯ ಯೋಜನೆ, ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಲ್ಲಿ ಒಂದಾಗಿದೆ, ತಮಿಳುನಾಡು ಸರ್ಕಾರ ಅನಗತ್ಯವಾಗಿ ಯೋಜನೆಗೆ ಅಡ್ಡಿಪಡಿಸುತ್ತಿದೆ.

ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ರಾಜಧಾನಿ ಬೆಂಗಳೂರಿಗೆ 4.75 ಟಿಎಂಸಿ ಕುಡಿಯುವ ನೀರು ಲಭ್ಯವಾಗಲಿದೆ, ಅಲ್ಲದೆ, 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ.

ಕೇಂದ್ರ ನಿದೇರ್ಶನದಂತೆ ತಮಿಳುನಾಡಿಗೆ ತಿಂಗಳಿಗೊಮ್ಮೆ ನೀರು ಹರಿಸಬೇಕು, ಜೂನ್‌ನಲ್ಲಿ 19 ಟಿಎಂಸಿ ನೀರು ಬಿಡಬೇಕಿದೆ, ಪ್ರಸ್ತುತ ನಮ್ಮ ಬಳಿ 16 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ.

ಸಲಹೆ ಪಡೆಯುವ ಚಿಂತನೆ

ಕುಡಿಯುವ ನೀರಿಗೆ ಕೇವಲ 3 ಟಿಎಂಸಿ ಉಳಿದಿದೆ, ಸಂಕಷ್ಟ ಸಂದರ್ಭದಲ್ಲಿ ನೀರು ಹರಿಸುವ ಕುರಿತು ಸಲಹೆ ಪಡೆಯುವ ಚಿಂತನೆ ಇದೆ.

ಮೇಕೆದಾಟು ಜಲಾಶಯದಲ್ಲಿ ನೀರು ಸಂಗ್ರಹವಾದರೆ ತಮಿಳುನಾಡು ರೈತರಿಗೆ ಉಪಯೋಗವಾಗುತ್ತದೆ, ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ, ನ್ಯಾಯಾಲಯಕ್ಕೆ ಹೋಗುವುದಕ್ಕಿಂತ ಕುಳಿತು ಚರ್ಚಿಸುವುದು ಸೂಕ್ತ.

ಕೃಷ್ಣಾ ಮೇಲ್ದಂಡೆ ಯೋಜನೆ ವಿವಾದ 13-14 ವರ್ಷಗಳಿಂದ ಪರಿಹಾರವಾಗಿಲ್ಲ, ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿ ತಿರಸ್ಕಾರವಾಗಿದೆ, ಅಲ್ಲದೆ, ಪುನರ್ ಪರಿಶೀಲನಾ ಅರ್ಜಿಯನ್ನೂ ಎರಡು ಬಾರಿ ತಿರಸ್ಕರಿಸಿದೆ, ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ.

ಹೋರಾಟಕ್ಕೆ ಕರೆ

ಆ ರಾಜ್ಯದ ಮುಖ್ಯಮಂತ್ರಿ ಜೋಸೆಫ್ ವಿಜಯ್ ಮೇಕೆದಾಟು ಯೋಜನೆ ವಿರೋಧಿಸಿ ಹೋರಾಟಕ್ಕೆ ಕರೆ ನೀಡಿದ್ದಾರೆ.

ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಾಗಿದೆ, ತಮಿಳುನಾಡಿಗೆ ನಿಗದಿಪಡಿಸಿರುವ ನೀರಿನಲ್ಲಿ ನಮಗೆ ಒಂದೇ ಒಂದು ಹನಿ ನೀರೂ ಬೇಡ ಎಂದರು.

ಚುನಾವಣೆ ನಂತರ ವಿರೋಧ ಮರೆತು, ನೀರು ಕೊಡುವ ಮತ್ತು ತೆಗೆದುಕೊಳ್ಳುವಲ್ಲಿ ಒಟ್ಟಿಗೆ ಕೆಲಸ ಮಾಡಬೇಕು, ಈ ಕುರಿತು ಇತ್ತೀಚೆಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ, ಮಹದಾಯಿ, ಮೇಕೆದಾಟು ಸೇರಿದಂತೆ ಬಾಕಿ ಇರುವ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ.

ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ನಮ್ಮನ್ನೂ ಕರೆಸಿ ಮಾತನಾಡಿ ಎಂಬ ಮನವಿ ಮಾಡಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central ministercm josef vijaykarnatakaMekedatu Projectramalinga reddytamilunadu
0 FacebookTwitterPinterestEmail
KM Shivaraju

previous post
ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ
next post
ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ