Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯ

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

by KM Shivaraju June 22, 2026
written by KM Shivaraju June 22, 2026 0 comments 1 minutes read
0FacebookTwitterPinterestEmail
68

ಬೆಂಗಳೂರು : ಮಂತ್ರಿಮಂಡಲ ವಿಸ್ತರಿಸಲು ಮುಂದಾಗಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ದೆಹಲಿ ವರಿಷ್ಠರು ಬ್ರೇಕ್ ಹಾಕಿದ್ದಾರೆ.
ಸಂಪುಟ ವಿಸ್ತರಿಸಿ, 18 ಮಂದಿ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಜೂನ್ 23 ರಂದು ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು.

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರೇ ಜೂನ್ 23 ರಂದು ದೆಹಲಿಗೆ ಬರುವಂತೆ ಈ ಮೊದಲು ಸೂಚಿಸಿತ್ತು. ಆದರೆ ಏಕಾಏಕಿ ನಾವು ಹೇಳುವವರೆಗೂ ನೀವು ದೆಹಲಿಗೆ ಬರುವುದು ಬೇಡ ಎಂದು ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಸಂದೇಶ ರವಾನಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಹರಿಪ್ರಸಾದ್ ‌ತಿಂಗಳ ಅಂತ್ಯದವರೆಗೂ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.

ಕಳೆದ ಜೂನ್ 3 ರಂದು ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ತಮ್ಮ ಸಂಪುಟಕ್ಕೆ 13 ಮಂದಿಯನ್ನು ಸೇರ್ಪಡೆ ಮಾಡಿಕೊಂಡು ಖಾತೆಗಳ ಹಂಚಿಕೆ ಮಾಡಿದ್ದರು. ಖಾತೆ ಹಂಚಿಕೆ ಬಗ್ಗೆ ನಿಷ್ಠಾವಂತ ಕಾಂಗ್ರೆಸ್ಸಿಗರಾಗಿರುವ ಸಚಿವ ಕೃಷ್ಣಾಬೈರೇಗೌಡ, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಮಂತ್ರಿಗಳು ಬಹಿರಂಗವಾಗಿಯೇ ಅಸಮಧಾನ ವ್ಯಕ್ತಪಡಿಸಿದ್ದರು.

ಸರ್ಕಾರ ರಚನೆ ಸಂದರ್ಭದಲ್ಲಿ ಸಚಿವರಿಂದ ಉಂಟಾದ ಅಸಮಧಾನ ಹೋಗಲಾಡಿಸಲು ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ್, ಬೆಂಗಳೂರಿನಲ್ಲೇ ಬಿಡಾರ ಹೂಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಜೂನ್ ತಿಂಗಳಾಂತ್ಯಕ್ಕೆ ಮಂತ್ರಿಮಂಡಲ ವಿಸ್ತರಣೆಯಾಗುತ್ತದೆ ಎಂಬ ಮಾಹಿತಿ ದೊರೆಯುತ್ತಿದ್ದಂತೆ ಕಾಂಗ್ರೆಸ್‌ನ 50-60 ಶಾಸಕರು ದೆಹಲಿಯಲ್ಲೇ ಬಿಡಾರ ಹೂಡಿ, ವರಿಷ್ಠರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದಾರೆ. ಆದರೆ ಮಂತ್ರಿಮಂಡಲಕ್ಕೆ ಕೇವಲ 18 ಮಂದಿಯನ್ನು ತೆಗೆದುಕೊಳ್ಳುವುದರಿಂದ, ಅನಂತರ ಸರ್ಕಾರ ಮತ್ತು ಪಕ್ಷದಲ್ಲಿ ಭಿನ್ನಾಭಿಪ್ರಾಯ ಮತ್ತು ಬಂಡಾಯಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಮಂತ್ರಿಮಂಡಲದ ವಿಸ್ತರಣೆ ವಿಚಾರ ತಿಳಿಯಾಗುವವರೆಗೂ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ ಎಂದು ವರಿಷ್ಠರು ನಿರ್ಧರಿಸಿ, ಅದರ ಸಂದೇಶವನ್ನು ರಾಜ್ಯ ನಾಯಕರುಗಳಿಗೆ ನೀಡಿದ್ದಾರೆ.

ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಜೂನ್ 22ರಂದು ದೆಹಲಿಗೆ ತೆರಳಬೇಕಿದ್ದ ಸಿದ್ದರಾಮಯ್ಯ ತಮ್ಮ ನಿರ್ಧಾರ ಬದಲಿಸಿ, ನಗರದಲ್ಲೇ ಉಳಿದುಕೊಂಡಿದ್ದಾರೆ.‌ ಹರಿಪ್ರಸಾದ್ ರಾಜ್ಯ ಪ್ರವಾಸ ಕೈಗೊಂಡರೇ, ಪರಮೇಶ್ವರ್ ಅನಾರೋಗ್ಯದಿಂದ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಮುಖ್ಯಮಂತ್ರಿಯವರು ಮಾತ್ರ ಅಭಿವೃದ್ಧಿ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
brakecabinetChief MinisterdelhiDKexpandHigh CommandplanningShivakumar
0 FacebookTwitterPinterestEmail
KM Shivaraju

previous post
ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ
next post
ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ ಆರೋಪ

You may also like

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

August 18, 2026

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

August 13, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

August 11, 2026

ಸಂಪುಟಕ್ಕೆ ಸಣ್ಣ ಸರ್ಜರಿ ಅನುಮತಿಗೆ ಡಿಕೆಶಿ ದೆಹಲಿಗೆ

August 8, 2026

ವಾಹನಗಳಿಗೆ ರಾಜ್ಯ ಸರ್ಕಾರಿ ಸಂಸ್ಥೆ ವಿಮೆ ಕಡ್ಡಾಯ

August 7, 2026

ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

August 6, 2026

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

August 5, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (541)
  • ಅಂಕಣ (109)
  • ಉದ್ಯೋಗ (344)
  • ದಿನ ಭವಿಷ್ಯ (110)
  • ರಾಜಕೀಯ (2,034)
  • ರಾಜ್ಯ (2,349)
  • ರಾಷ್ಟ್ರ (2,314)
  • ವಿಶ್ಲೇಷಣೆ (199)
  • ಶಿಕ್ಷಣ (404)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

    August 18, 2026
  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026

KMS Special

  • ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

    August 18, 2026
  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

August 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ