Friday, June 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, June 26, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

by KM Shivaraju June 26, 2026
written by KM Shivaraju June 26, 2026 0 comments 1 minutes read
0FacebookTwitterPinterestEmail
6

ನವದೆಹಲಿ:ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಪಕ್ಷದ ದೆಹಲಿ ವರಿಷ್ಠರು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಲೆದಂಡಕ್ಕೆ ನಿರ್ಧರಿಸಿದ್ದಾರೆ.

ಅಶೋಕ್ ಸ್ಥಾನಕ್ಕೆ ಆರ್‌ಎಸ್‌ಎಸ್ ಮೂಲದ ವಿ.ಸುನೀಲ್‌ಕುಮಾರ್ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರವಿಂದ ಬೆಲ್ಲದ್ ಇಲ್ಲವೇ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ತರಲು ಚಿಂತನೆ ನಡೆಸಿದ್ದಾರೆ.

ಭಾರೀ ಬದಲಾವಣೆ

ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ನೀಡಿದ ವರದಿ ಆಧಾರದ ಮೇಲೆ ಕರ್ನಾಟಕ ಬಿಜೆಪಿಯಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದಾರೆ.

ವರದಿ ಆಧಾರದ ಮೇಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು, ಕೇಂದ್ರದಲ್ಲಿ ರಾಜ್ಯ ಪ್ರತಿನಿಧಿಸುವ ಸಚಿವರು, ಕೆಲವು ಹಿರಿಯ ಸಂಸದರೊಂದಿಗೆ ಬದಲಾವಣೆ ಸಂಬಂಧ ಸಮಾಲೋಚನೆ ನಡೆಸಿದ್ದಾರೆ.

ಮೈತ್ರಿ ಪಕ್ಷ ಜೆಡಿಎಸ್‌ನ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆಯೂ ಚರ್ಚಿಸಿರುವ ಉಭಯ ನಾಯಕರು, ಅಶೋಕ್ ಹಾಗೂ ವಿಜಯೇಂದ್ರ ಅವರನ್ನು ದೆಹಲಿಗೆ ಕರೆಸಿಕೊಂಡು ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಖುದ್ದು ವಿವರಣೆ ಪಡೆದಿದ್ದಾರೆ.

ಸಂಪುಟ ಪುನರ್ ರಚನೆ

ಪ್ರಧಾನಿ ನರೇಂದ್ರ ಮೋದಿ ತಮ್ಮ ನೇತೃತ್ವದ ಕೇಂದ್ರ ಸಂಪುಟವನ್ನು ಪುನರ್ ರಚನೆ ಮಾಡುತ್ತಿದ್ದು, ನಂತರ ಇಲ್ಲವೇ ಅದಕ್ಕೂ ಮೊದಲೇ ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಆಗಲಿದೆ.

ಅಧಿಕಾರದಿಂದ ಕೆಳಗಿಳಿಯುವ ಅಶೋಕ್ ಮತ್ತು ವಿಜಯೇಂದ್ರ ಅವರನ್ನು ರಾಷ್ಟ್ರೀಯ ಸಂಘಟನೆಗೆ ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಿರುವ ವರಿಷ್ಠರು, ಕೇಂದ್ರ ಸಂಪುಟ ಪುನರ್ ರಚನೆ ವೇಳೆ ಬಿ.ವೈ.ರಾಘವೇಂದ್ರ ಅವರಿಗೆ ಮಂತ್ರಿ ಸ್ಥಾನ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆದಿದೆ.

ರಾಜ್ಯ ವಿಧಾನಸಭೆಯಿಂದ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ 7, ಜೆಡಿಎಸ್‌ನ 4 ಶಾಸಕರು ಅಡ್ಡ ಮತದಾನ ಮಾಡಿದ್ದರಿಂದ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಪಡೆದು ಜಯ ಗಳಿಸಿದ್ದರು.

ಶಿಸ್ತಿಗೆ ಹೆಸರಾದ ಪಕ್ಷದಲ್ಲೇ ಶಾಸಕರಿಂದ ಅಡ್ಡ ಮತದಾನ ಆಗಿದ್ದನ್ನು ಬಿಜೆಪಿ ವರಿಷ್ಠರು ಗಂಭೀರವಾಗಿ ಪರಿಗಣಿಸಿ, ತಕ್ಷಣದಿಂದಲೇ ಇದಕ್ಕೆ ಕಾರಣ ಕಂಡುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aravind belladb y vijayendrabjpchange in state leadershipcross votingdelhi leadersH D Kumaraswamyjdsr.ashokradha mohandas agarvalv.somannav.sunil kumar
0 FacebookTwitterPinterestEmail
KM Shivaraju

previous post
ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

You may also like

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

June 20, 2026

ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

June 19, 2026

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

June 18, 2026

ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

June 17, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (500)
  • ಅಂಕಣ (109)
  • ಉದ್ಯೋಗ (334)
  • ದಿನ ಭವಿಷ್ಯ (110)
  • ರಾಜಕೀಯ (1,994)
  • ರಾಜ್ಯ (2,308)
  • ರಾಷ್ಟ್ರ (2,273)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026
  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026

KMS Special

  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026
  • ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

    June 25, 2026
  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ