Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

by admin June 29, 2026
written by admin June 29, 2026 0 comments 2 minutes read
0FacebookTwitterPinterestEmail
103

ನೌಕರರ ಸಮ್ಮುಖದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು:ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಘೋಷಿಸಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನೌಕರರ ಮಾತಿಗೆ ಒಪ್ಪಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಸಂಪುಟ ಸಭೆಯಲ್ಲಿ ಚರ್ಚೆ

ಈ ಕುರಿತು ನನ್ನೊಬ್ಬನ ತೀರ್ಮಾನ ಸಾಧ್ಯವಿಲ್ಲ, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಹೋದ್ಯೋಗಿಗಳ ಜೊತೆ ಚರ್ಚಿಸಿ, ನಿಮ್ಮಗಳ ಮನವಿಗೆ ಸ್ಪಂದಿಸುತ್ತೇನೆ.

ನಿಮ್ಮ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ, ನೀವೂ ಸಹಾ ನಮ್ಮನ್ನು 2028ರ ಚುನಾವಣೆಯಲ್ಲಿ ನಮ್ಮನ್ನು ಮತ್ತೆ ಅಧಿಕಾರಕ್ಕೆ ತರುವ ಭರವಸೆ ನೀಡಿ ಎನ್ನುವ ಮೂಲಕ ನೌಕರರ ವಾಗ್ದಾನ ಪಡೆದರು.

ಕಾರ್ಯಕ್ರಮದ ಮಧ್ಯೆಯೇ ನನ್ನ ಸಹೋದ್ಯೋಗಿ ಕೆ.ಜೆ.ಜಾರ್ಜ್ ಹಾಗೂ ಎಲ್ಲಾ ಎಸ್ಕಾಂ ಅಧ್ಯಕ್ಷರುಗಳು ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಬೇಡ ಎಂದು ಮನವಿ ಮಾಡಿದರು.

ಬಿಜೆಪಿಗೆ ವಿರೋಧಿಸಲಿಲ್ಲ

ಹಿಂದಿನ ಬಿಜೆಪಿ ಸರ್ಕಾರ ಖಾಸಗೀಕರಣ ಮಾಡಲು ಮುಂದಾದಾಗ ನೀವು ಯಾರೂ ವಿರೋಧಿಸಲಿಲ್ಲ, ನಾನು ಅಧಿಕಾರಕ್ಕೆ ಬರುತ್ತಿದ್ದಂತೆ ವಿರೋಧ ವ್ಯಕ್ತಪಡಿಸುತ್ತಿದ್ದೀರಿ.

ಅಂದು ಇಲ್ಲದ್ದು, ಇಂದೇಕೆ ಎಂಬುದಾಗಿ ಪ್ರಶ್ನಿಸಿದ ಶಿವಕುಮಾರ್, ನಿಮ್ಮ ಧ್ವನಿಗೆ ನನ್ನ ಧ್ವನಿ ಕೂಡಿಸಲು ನಾನು ಬದ್ಧ, ಆದರೆ, ಮುಂದೆ, ನನ್ನ ಕೈಹಿಡಿಯಬೇಕು.

ನೀವು ವಿದ್ಯುತ್ ಮಾರ್ಗ ಎಳೆದಿರಿ, ಇದೀಗ ಖಾಸಗಿಯವರು ಅದರ ಮೇಲೆ ದರ್ಬಾರ್ ಮಾಡಲು ಬರುತ್ತಿದ್ದಾರೆ, ಅದಕ್ಕೆ ಅವಕಾಶ ನೀಡುವುದಿಲ್ಲ.

ಅಭಿವೃದ್ಧಿ ಕಾರ್ಯಗಳಾಗಲಿಲ್ಲ

ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ, ಹಣಕ್ಕಾಗಿ ಜನವಿರೋಧಿ ನೀತಿಗಳನ್ನು ಕೈಗೊಂಡಿದ್ದಾರೆ, ಅವರು ಅಧಿಕಾರದಲ್ಲಿ ಇದ್ದಾಗ, ಇಂಧನ ಇಲಾಖೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಲಿಲ್ಲ.

ಇಂಧನ ಇಲಾಖೆ ಸಚಿವನಾಗಿ ನಾನು ಕಾರ್ಯನಿರ್ವಹಿಸುವ ವೇಳೆ, ನೂರಾರು ಲೈನ್‌ಮ್ಯಾನ್ ಹಾಗೂ 4 ರಿಂದ 5 ಸಾವಿರ ಇಂಜಿನಿಯರ್‌ಗಳ ನೇರ ನೇಮಕಾತಿ ಮಾಡಿದೆ, ಅದಾದರೂ ನಿಮ್ಮ ಗಮನದಲ್ಲಿದೆಯೇ ಎಂದು ಪ್ರಶ್ನಿಸಿದರು.

ನನ್ನ ಮೇಲೆ ನಂಬಿಕೆ, ವಿಶ್ವಾಸ ಇಟ್ಟಿದ್ದೀರಿ, ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ, ಟಾಟಾ ಸಂಸ್ಥೆಗೆ ವಿದ್ಯುತ್ ಸರಬರಾಜು ವ್ಯವಸ್ಥೆ ಜವಾಬ್ದಾರಿ ನೀಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇಂಧನ ಇಲಾಖೆ ಬಲಿಷ್ಠವಾಗಿದೆ

ಇದೇ ಸಂದರ್ಭದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದರು.

ಟಾಟಾ ಪವರ್ ಕಂಪನಿ ಕರ್ನಾಟಕದಲ್ಲಿ ವಿದ್ಯುತ್ ಸರಬರಾಜು (ವಿತರಣೆ) ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂಧನ ಇಲಾಖೆ ಬಲಿಷ್ಠವಾಗಿದೆ, ನಮ್ಮ ಸರ್ಕಾರ ನೌಕರರ ಪರವಾಗಿದೆ, ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಆಕ್ಷೇಪಣೆ ಸಲ್ಲಿಸಿವೆ.

ನಾವು ಯಾವುದೇ ಖಾಸಗಿ ಕಂಪನಿಗೆ ಕಡಿಮೆ ಇಲ್ಲ, ನೌಕರರು ಮತ್ತು ಅಧಿಕಾರಿಗಳ ಬೇಡಿಕೆಗಳಿಗೆ ಸ್ಪಂದಿಸಲಿದ್ದೇವೆ, ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು.

ವಿದ್ಯುತ್ ಭ್ರದತೆ ಯೋಜನೆ ಸಿದ್ಧ

ನಾವು ರಾಜ್ಯದ ಸೇವೆ ಮಾಡಲು ಬಂದವರು, ಇಲ್ಲಿ ಖಾಸಗೀಕರಣ ವಿಚಾರ ಬರುವುದಿಲ್ಲ, ಇಂಧನ ಇಲಾಖೆ ಈಗಾಗಲೇ ದೂರದೃಷ್ಟಿ ಯೋಜನೆಗಳನ್ನು ಸಿದ್ಧಪಡಿಸಿದೆ, ಮುಂದಿನ 25 ವರ್ಷಗಳಿಗೆ ವಿದ್ಯುತ್ ಭ್ರದತೆ ಒದಗಿಸಲು ಯೋಜನೆ ಸಿದ್ಧವಾಗಿದೆ.

ರೈತರ ಜೊತೆ 10,000 ಎಕರೆಯಲ್ಲಿ ಸೌರ ಪಾರ್ಕ್ ಮಾಡಿದ್ದೇವೆ, ರೈತರು ಇನ್ನೂ 10,000 ಎಕರೆ ಕೊಡಲು ಮುಂದೆ ಬಂದಿದ್ದಾರೆ, ವಿದ್ಯುತ್ ಉತ್ಪಾದನೆ ಅತ್ಯುತ್ತಮವಾಗಿದೆ.

ಪೀಕ್ ಅವರ್ ವಿದ್ಯುತ್ ಮಾರಾಟ ಹೆಚ್ಚಿಸಿರುವುದರಿಂದ ಇಲಾಖೆಗೆ ಲಾಭವಾಗಿದೆ, ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯುವುದು ಮತ್ತು ದೀರ್ಘಾವಧಿ ಒಪ್ಪಂದಗಳು ಹಾಗೂ ವಿದ್ಯುತ್ ಖರೀದಿ ಮೂಲಕ ಇಂಧನ ಭದ್ರತೆಗೆ ಕ್ರಮ ವಹಿಸಲಾಗಿದೆ.

ಗೃಹಜ್ಯೋತಿ ಮೂಲಕ 1.67 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ಕೊಟ್ಟಿದ್ದೇವೆ, ಇದಕ್ಕೆ ಬಜೆಟ್‌ನಲ್ಲೇ ಅನುದಾನ ನೀಡಲಾಗಿದೆ, ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಪೂರೈಸಲು 21,000 ಕೋಟಿ ರೂ. ಅನುದಾನ ಕೊಡುತ್ತಿದ್ದೇವೆ.

ನಮ್ಮ ಅಧಿಕಾರಿಗಳು, ಇಂಜಿನಿಯರ್ ಮತ್ತು ನೌಕರರು ತಂಡವಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ಸಮಸ್ಯೆ ಎದುರಾದರೆ ಶೀಘ್ರವೇ ಪರಿಹಾರ ನೀಡಲಿದ್ದಾರೆ.

ಇಂಧನ ಇಲಾಖೆಯ ಮೂಲಸೌಕರ್ಯ ಹೆಚ್ಚಿಸುವ ಕಾರ್ಯ ವೇಗವಾಗಿ ನಡೆಯುತ್ತಿದೆ, 120 ವಿದ್ಯುತ್ ಉಪಕೇಂದ್ರ ಸ್ಥಾಪಿಸಿದ್ದೇವೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳು ಜಾರಿಯಾಗಲಿವೆ, ಆ ಮೂಲಕ ವಿದ್ಯುತ್ ಪೂರೈಕೆ ಸಮರ್ಪಕಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumardistribution employees associationselectricity distributionno privatisation
0 FacebookTwitterPinterestEmail
admin

previous post
ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ
next post
ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

You may also like

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (582)
  • ಅಂಕಣ (109)
  • ಉದ್ಯೋಗ (354)
  • ದಿನ ಭವಿಷ್ಯ (110)
  • ರಾಜಕೀಯ (2,075)
  • ರಾಜ್ಯ (2,390)
  • ರಾಷ್ಟ್ರ (2,354)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026

KMS Special

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ...

October 3, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ