ಬೆಂಗಳೂರು:ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ಗಳಿಗೆ ಅಕ್ಟೋಬರ್-ನವೆಂಬರ್‌ನಲ್ಲಿ ಚುನಾವಣೆ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಇಂದಿಲ್ಲಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಪಂಚಾಯತ್‌ಗಳ ಆಡಳಿತಾವಧಿ ಪೂರ್ಣ ಮುಗಿದಿದ್ದು, ಕೆಲವು ಮೇಲ್ದರ್ಜೆಯಿಂದ ಕ್ಷೇತ್ರ ಪುನರ್ ವಿಂಗಡಣೆ ಆಗಬೇಕಿದ್ದು, ಚುನಾವಣೆ ಸ್ವಲ್ಪ ವಿಳಂಬವಾಗುತ್ತಿದೆ ಎಂದರು.
ಚುನಾವಣಾ ಆಯೋಗಕ್ಕೆ ವರದಿ
ಜುಲೈ ಅಂತ್ಯ ಇಲ್ಲವೆ ಆಗಸ್ಟ್‌ನಲ್ಲಿ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ, ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ವರದಿ ಸಲ್ಲಿಸುತ್ತಿದ್ದಂತೆ ಆಯೋಗ 45 ದಿನಗಳಲ್ಲಿ ಚುನಾವಣೆಗೆ ಚಾಲನೆ ನೀಡಲಿದೆ.
ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ನಂತರ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.
ಕಾಂಗ್ರೆಸ್ ಯಾವುದೇ ಚುನಾವಣೆಗೆ ಹೆದರುವುದಿಲ್ಲ, ರಾಜಧಾನಿಯ ಆಡಳಿತವನ್ನು ಕೆಳಹಂತದವರೆಗೆ ಕೊಂಡೊಯ್ಯಲು ಸ್ಥಳೀಯ ಜನಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಲಾಗುವುದು.
ಅಧಿಕಾರ ವಿಕೇಂದ್ರೀಕರಣ
ಕರ್ನಾಟಕದಲ್ಲಿ 1980ರಲ್ಲಿ ಅಂದಿನ ಸಚಿವ ನಸೀರ್ ಸಾಬ್ ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿದ್ದು, ಪ್ರಧಾನಿಯಾಗಿದ್ದ ವೇಳೆ ರಾಜೀವ್ ಗಾಂಧಿ ದೇಶದಾದ್ಯಂತ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರಲು 1986ರಲ್ಲಿ 64ನೇ ಸಂವಿಧಾನಿಕ ತಿದ್ದುಪಡಿಗೆ ಪ್ರಯತ್ನ ಮಾಡಿದ್ದರು.
ನಂತರ 1992ರಲ್ಲಿ 73ನೇ ಸಂವಿಧಾನಿಕ ತಿದ್ದುಪಡಿ ಮೂಲಕ 1993ರ ಏಪ್ರಿಲ್ 24ರಿಂದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂದು, ಗ್ರಾಮಸ್ಥರೇ ಗ್ರಾಮಗಳ ಆಡಳಿತ ನಿರ್ವಹಿಸುವಂತಾಯಿತು ಎಂದರು.
ಇ-ಸ್ವತ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆ ಇದ್ದು, ಸಾಕಷ್ಟು ದೂರುಗಳು ಬರುತ್ತಿವೆ, ಎಸ್‌ಐಆರ್ ಪ್ರಕ್ರಿಯೆ ಮುಗಿದ ನಂತರ, ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸಿ, ಎಲ್ಲ ಗ್ರಾಮೀಣ ಪ್ರದೇಶದ ಆಸ್ತಿ ಮಾಲಿಕರಿಗೆ ಯಾವುದೇ ತೊಡಕಾಗದಂತೆ ಮನೆ ಬಾಗಿಲಿಗೇ ಇ-ಸ್ವತ್ತು ಪತ್ರ ನೀಡಲು ಕ್ರಮ ವಹಿಸಲಾಗುವುದು.
ಇ-ಸ್ವತ್ತು ನೀಡಲಾಗದು
ಬಿ-ಖರಾಬು ಜಮೀನು ಬಳಸಿಕೊಂಡು ಲೇಔಟ್ ನಿರ್ಮಿಸಿದ್ದರೆ ಇ-ಸ್ವತ್ತು ನೀಡಲಾಗದು, ಈ ಸಂಬಂಧ ಕಂದಾಯ ಇಲಾಖೆ ಸಚಿವರೊಂದಿಗೆ ಸಭೆ ನಡೆಸಬೇಕಾಗುತ್ತದೆ.
ಗ್ರಾಮ ಪಂಚಾಯತ್‌ಗಳಿಗೆ ಕೇಂದ್ರ ಸರ್ಕಾರದಿಂದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬರಬೇಕಾದ 2186 ಕೋಟಿ ರೂ. ಬಿಡುಗಡೆ ಮಾಡಿಲ್ಲ ಎಂದರು.
ಸಂಸದರು ಧ್ವನಿ ಎತ್ತಬೇಕು
ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆ ಮುಂದಿಟ್ಟುಕೊಂಡು ಹಣ ಬಿಡುಗಡೆ ಮಾಡುವುದಿಲ್ಲ ಎನ್ನುವುದು ಸರಿಯಲ್ಲ, ರಾಜ್ಯದ ಸಂಸತ್ ಸದಸ್ಯರು ಒಕ್ಕೂರಲಿನಿಂದ ಈ ಬಗ್ಗೆ ಧ್ವನಿ ಎತ್ತಬೇಕು.
ಗ್ರಾಮೀಣ ಜನರ ಕುಡಿಯುವ ನೀರು ಪೂರೈಕೆಗೆ ಹಣಕಾಸಿನ ಕೊರತೆ ಇಲ್ಲ, 117 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ, ಮುಖ್ಯಮಂತ್ರಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ, ಬರ ಪರಿಸ್ಥಿತಿ ನಡುವೆಯೂ ನೀರು ಪೂರೈಕೆಗೆ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ ಎಂದರು.


