Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 14, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

by admin July 13, 2026
written by admin July 13, 2026 0 comments 1 minutes read
0FacebookTwitterPinterestEmail
6

ಬೆಂಗಳೂರು:ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೂ ಮುನ್ನವೇ ತಮ್ಮ ಮಂತ್ರಿಮಂಡಲ ವಿಸ್ತರಣೆಗೆ ನಿರ್ಧರಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅನುಮತಿಗಾಗಿ ಬುಧವಾರ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಸುದೀರ್ಘ ವಿದೇಶ ಪ್ರವಾಸದ ನಂತರ ಭಾನುವಾರ ತಡರಾತ್ರಿ ದೆಹಲಿಗೆ ಆಗಮಿಸಿದ ರಾಹುಲ್ ಗಾಂಧಿ, ಜುಲೈ 15ರಂದು ಮುಖ್ಯಮಂತ್ರಿ ಭೇಟಿಗೆ ಸಮಯ ನೀಡಿದ್ದಾರೆ.

ರಾಜ್ಯದ ಪರ ವಾದ

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ದೆಹಲಿಯಲ್ಲಿ ಅಂದೇ ನಿಗದಿಯಾದ್ದು, ಇದೇ ವೇಳೆ ಮುಖ್ಯಮಂತ್ರಿ ಸ್ವತಃ ಹಾಜರಾಗಿ ರಾಜ್ಯದ ಪರ ವಾದ ಮಂಡಿಸಲಿದ್ದಾರೆ.

ಸಭೆಗೂ ಮುನ್ನ ಇಲ್ಲವೇ ನಂತರ, ರಾಹುಲ್ ಗಾಂಧಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಂತ್ರಿಮಂಡಲ ವಿಸ್ತರಣೆಗೆ ಸಂಬಂಧಿಸಿದಂತೆ ಮುಖಾಮುಖಿ ಚರ್ಚೆ ಮಾಡಲಿದ್ದಾರೆ.

ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಜುಲೈ 15ರಂದು ದೆಹಲಿಗೆ

ಈ ಮಧ್ಯೆ, ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಜುಲೈ 15ರಂದು ದೆಹಲಿಗೆ ತೆರಳುತ್ತಿದ್ದು, ಅಂದು ಸಾಧ್ಯವಾದರೆ, ರಾಹುಲ್ ಗಾಂಧಿ ಭೇಟಿ ಮಾಡುತ್ತೇನೆ.

ಈ ವೇಳೆ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ಸಮಯಾವಕಾಶ ನೀಡುವಂತೆ ಕೋರಿ ನಗರಕ್ಕೆ ಹಿಂತಿರುಗುತ್ತೇನೆ.

ಅವರು ಮೂರು-ನಾಲ್ಕು ದಿನದೊಳಗಾಗಿ ನಮ್ಮನ್ನು ದೆಹಲಿಗೆ ಕರೆಯಬಹುದು, ಈ ಸಂದರ್ಭದಲ್ಲಿ ಅವರ ಜೊತೆ ಸಮಾಲೋಚನೆ ಮಾಡುವುದಾಗಿ ತಿಳಿಸಿದರು.

ಆಗಸ್ಟ್ 6ರಿಂದ ಅಧಿವೇಶನ

ಆಗಸ್ಟ್ 6ರಿಂದ ವಿಧಾನಮಂಡಲದ ಅಧಿವೇಶನ ಕರೆಯಲು ತೀರ್ಮಾನಿಸಿದ್ದು, ಅದಕ್ಕೂ ಮುನ್ನವೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು, ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶ ಪಾಲನೆ ಮಾಡಬೇಕು ಎಂದರು.

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅಮಾನತಿಗೆ ರಾಜ್ಯಪಾಲರು ಆದೇಶ ಮಾಡಿದ್ದಾರೆ, ಅವರ ನಂತರ ಯಾರು ಹಿರಿಯರು ಇದ್ದಾರೋ ಅವರಿಗೆ ಜವಾಬ್ದಾರಿ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದರು.

ಮೊದಲ ಆರತಿ ಕರ್ನಾಟಕದವರಿಗೆ

ತಿರುಪತಿ ದೇವಾಲಯದಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗೆ ಎಂಬ ತೀರ್ಮಾನ ಮಹಾರಾಜರ ಕಾಲದಿಂದಲೂ ನಡೆದುಕೊಂಡು ಬಂದಿದೆ, ಅಲ್ಲಿ ಪ್ರತಿದಿನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ.

ಅವರ ಬದಲಿಗೆ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳು, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು.

ಯಾವುದೇ ಪಕ್ಷಕ್ಕೆ ಸೀಮಿತವಲ್ಲ

ಇದು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸೀಮಿತವಲ್ಲ, ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರೂ ಅವರಿಗೆ ಅವಕಾಶ ಸಿಗಬೇಕು, ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಅವಕಾಶ ನೀಡಲಾಗುವುದು.

ಈ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ, ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ, ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b k hariprasadbefore monsoon sessioncabinet expansioncm d k shivakumarjuly 15th delhi visitkaveri water meetingmallikarjuna khargeRahul GandhiSiddaramaiah
0 FacebookTwitterPinterestEmail
admin

previous post
ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

You may also like

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

ಬಿಜೆಪಿ ಅಧಿಕಾರಕ್ಕೆ ತರಲು ಆರ್‌ಎಸ್‌ಎಸ್ ರಣತಂತ್ರ

July 2, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (514)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,008)
  • ರಾಜ್ಯ (2,322)
  • ರಾಷ್ಟ್ರ (2,287)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026

KMS Special

  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ