Wednesday, July 15, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, July 15, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

by KM Shivaraju July 14, 2026
written by KM Shivaraju July 14, 2026 0 comments 2 minutes read
0FacebookTwitterPinterestEmail
6

ಡಿ.ಕೆ.ಶಿವಕುಮಾರ್‌ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎಚ್ಚರಿಕೆ

ಬೆಂಗಳೂರು:ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆ ಮುಂದೆ ಸತ್ಯಾಗ್ರಹ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದಂತೆ ದಾಖಲೆಯ ಅಂಕಿ-ಅಂಶಗಳನ್ನು ಒಳಗೊಂಡ ಸುದೀರ್ಘ ಪತ್ರ ಬರೆದಿದ್ದು, ಮೂರ‍್ನಾಲ್ಕು ದಿನದಲ್ಲಿ ಮುಖ್ಯಮಂತ್ರಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ರೈತರ ಪರ ಧರಣಿ ಕುಳಿತುಕೊಳ್ಳುವುದು ಅನಿವಾರ್ಯ ಎಂದಿದ್ದಾರೆ.

ಉತ್ತರ ಕೊಡದೆ ನಿರ್ಲಕ್ಷ್ಯ

ನಾನು ಈಗ ಸಾಮಾನ್ಯ ಪ್ರಜೆ, ಲೋಕಸಭೆಯ ಯಾವುದೇ ಸದನದ ಸದಸ್ಯನಲ್ಲ, ಒಬ್ಬ ರೈತನ ಮಗನಾಗಿ ನಿಮಗೆ ಕಳೆದ ಕೆಲವು ದಿನಗಳ ಹಿಂದೆಯೇ ಪತ್ರ ಬರೆದಿದ್ದರೂ, ಅದಕ್ಕೆ ಸ್ವೀಕೃತಿ ಪತ್ರವನ್ನೂ ನೀಡದೆ, ಉತ್ತರವನ್ನೂ ಕೊಡದೆ ದಿವ್ಯ ನಿರ್ಲಕ್ಷ್ಯ ತೋರಿದ್ದೀರಿ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದ ಪ್ರತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ನನ್ನ 7 ದಶಕಗಳ ಸಾರ್ವಜನಿಕ ಜೀವನದಲ್ಲಿ ರಾಜ್ಯ ಮತ್ತು ದೇಶದ ರೈತರ ಹಿತಕ್ಕಾಗಿ ಶ್ರಮಿಸಿದ್ದೇನೆ, ಅಲ್ಲದೆ, ಅಧಿಕಾರ ತ್ಯಾಗ ಮಾಡಿದ್ದೇನೆ.

ರಾಜ್ಯ ಸರ್ಕಾರ ನನ್ನ ಮನವಿಯನ್ನು ತಿರಸ್ಕರಿಸಿದರೆ ಹಾಗೂ ರೈತರ ಕೂಗಿಗೆ ಕಿವಿಗೊಡದಿದ್ದರೆ, ನಿಮ್ಮ ಕಣ್ತೆರೆಸಲು ಧರಣಿ ಅನಿವಾರ್ಯ.

ಬೇರೆ ಮಾರ್ಗ ಕಂಡುಕೊಳ್ಳಿ

ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ನೀವು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಕಾಂಗ್ರೆಸ್ ವರಿಷ್ಠರಿಗೆ ಏನೋ ಭರವಸೆ ಕೊಟ್ಟಿದ್ದೀರಿ, ಅದನ್ನು ಈಡೇರಿಸಲು ನೀವು ಬೇರೆ ಮಾರ್ಗಗಳನ್ನು ಕಂಡುಕೊಳ್ಳಿ.

ಅದನ್ನು ಬಿಟ್ಟು ರೈತರ ಹೊಟ್ಟೆ ಮೇಲೆ ಹೊಡೆಯಬೇಡಿ, ಮತ್ತೆ ನನ್ನನ್ನು ಧರಣಿ ಕುಳಿತುಕೊಳ್ಳುವಂತಹ ಸನ್ನಿವೇಶಕ್ಕೆ ದೂಡಬೇಡಿ ಎಂದು ಮುಖ್ಯಮಂತ್ರಿ ಅವರಿಗೆ ಕಿವಿಮಾತು ಹೇಳಿದ್ದಾರೆ.

ವರ್ಷಾನುಗಟ್ಟಲೆಯಿಂದ ಬಿಡದಿ ರೈತರು ಟೌನ್‌ಶಿಪ್ ಬೇಡ ಎಂದು ಹೋರಾಟ ನಡೆಸುತ್ತಿದ್ದಾರೆ, ಇದನ್ನು ಮನಗಂಡ ಸಿದ್ದರಾಮಯ್ಯ, ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರಲಿಲ್ಲ.

ನಾಯಕರ ತೃಪ್ತಿಪಡಿಸಲು ಯತ್ನ

ಆದರೆ, ನೀವು ಅಧಿಕಾರಕ್ಕೆ ಬರುತ್ತಿದ್ದಂತೆ ಈ ಕಾರ್ಯವನ್ನು ಕೈಗೆತ್ತಿಕೊಂಡು ಎಐಸಿಸಿ ನಾಯಕರನ್ನು ತೃಪ್ತಿಪಡಿಸಲು ಹೊರಟಂತಿದೆ.

ನಾಗರಿಕರಿಗೆ ನಿವೇಶನಗಳನ್ನು ಹಂಚುವ ಉದ್ದೇಶವೂ ಇದೆ ಎಂದಿದ್ದೀರಿ, ಆದರೆ, ಬಿಡಿಎ ನಿರ್ಮಾಣ ಮಾಡಿರುವ ಕೆಂಪೇಗೌಡ ಹಾಗೂ ಶಿವರಾಮ ಕಾರಂತ ಬಡಾವಣೆಗಳಲ್ಲಿ ಸಾವಿರಾರು ನಿವೇಶನಗಳು ಖರೀದಿ ಆಗದೆ ಹಾಗೇ ಉಳಿದಿವೆ.

ಇದೇ ಪರಿಸ್ಥಿತಿ ಗೃಹ ಮಂಡಳಿ ಕೈಗೆತ್ತಿಕೊಂಡಿರುವ ಬಡಾವಣೆಗಳಲ್ಲೂ ಇದೆ, ನಿರ್ಮಾಣ ಆಗಿರುವ ನಿವೇಶನಗಳೇ ಉಳಿದಿರುವಾಗ ಹೊಸ ನಗರದ ಸೃಷ್ಟಿ ಉದ್ದೇಶ ಏನು ಎಂದು ಪ್ರಶ್ನಿಸಿದ್ದಾರೆ.

ಎಫ್‌ಐಆರ್ ವಾಪಸ್ ಪಡೆಯಬೇಕು

ಬಿಡದಿ ರೈತರ ಮೇಲೆ ಕಳೆದ ಸೋಮಾವಾರ ಹೂಡಿರುವ ಎಫ್‌ಐಆರ್‌ಗಳನ್ನು ವಾಪಸ್ ಪಡೆಯಬೇಕು, ನೀವೂ ಅದೇ ಭಾಗದ ರೈತನ ಮಕ್ಕಳು, ಅವರ ಸಂಕಷ್ಟವನ್ನು ಅರ್ಥ ಮಾಡಿಕೊಳ್ಳಿ.

ಅಲ್ಲಿ ಇರುವವರೆಲ್ಲಾ ಸಣ್ಣ ಹಿಡುವಳಿದಾರರು, ಇರುವ ಭೂಮಿಯಲ್ಲೇ ಬದುಕು ಕಟ್ಟಿಕೊಳ್ಳುತ್ತಿದ್ದಾರೆ, ಅಂತಹ ಸೂರುಗಳ ಮೇಲೆ ಬಂಡೆ ಹಾಕಬೇಡಿ ಎಂದು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರೂ, ಬಿಜೆಪಿ ಮುಖಂಡರೂ ಯೋಜನೆ ವಿರುದ್ಧ ಇದ್ದಾರೆ, ಸರ್ವೇ ಕಾರ್ಯ ನಿಲ್ಲಿಸಿರುವುದು ಸ್ವಾಗತಾರ್ಹ, ಆದರೆ, ಯೋಜನೆಯನ್ನೇ ಕೈಬಿಡಿ.

ಪ್ರಚೋದನೆ ಆರೋಪ ಬೇಡ

ನಿಮಗೆ ಪತ್ರ ಬರೆದಿದ್ದೇನೆ, ಆದರೆ, ನಾನಿನ್ನೂ ಹೋರಾಟದ ಹಾದಿಗೆ ಹೋಗಿಲ್ಲ, ಹೋದರೆ, ಪ್ರಚೋದನೆ ಕೊಟ್ಟರು ಎಂಬ ಆರೋಪಕ್ಕೆ ಗುರಿ ಆಗಬೇಕಾಗುತ್ತದೆ.

ನಾನು ಈಗಲೂ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತೇನೆ, ಇದಕ್ಕೆ ಸ್ಪಂದಿಸದಿದ್ದರೆ, ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bidadi townshipcm d k shivakumarformer prime minister h d devegowdaletter to Chief Ministersatyagrahavidhanasoudha gandhi statue
0 FacebookTwitterPinterestEmail
KM Shivaraju

previous post
ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

You may also like

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ಮಳೆ ಕೊರತೆ: ಬರ ಘೋಷಣೆಗೆ ಮುಖ್ಯಮಂತ್ರಿ ಚಿಂತನೆ

July 7, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (515)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,009)
  • ರಾಜ್ಯ (2,323)
  • ರಾಷ್ಟ್ರ (2,288)
  • ವಿಶ್ಲೇಷಣೆ (198)
  • ಶಿಕ್ಷಣ (400)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

    July 14, 2026
  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026

KMS Special

  • ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

    July 14, 2026
  • ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

    July 13, 2026
  • ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

    July 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ